ಡಾ|| ಪುನೀತ್ ರಾಜ್ ಕುಮಾರ್ ರವರ ಹುಟ್ಟು ಹಬ್ಬದ ಪ್ರಯುಕ್ತ ಯಕ್ಷಗಾನ
– ಮಾರ್ಚ್ 27 ರಂದು ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆಯನ್ನು ಸೊಪ್ಪುಗುಡ್ಡೆಯ ಸಂಸ್ಕೃತಿ ಮಂದಿರದ ಮೈದಾನದಲ್ಲಿ ಆಯೋಜನೆ
– ಸರ್ವರಿಗೂ ಆದರದ ಸ್ವಾಗತವನ್ನು ಸಹಕಾರಿ ಸಂಘ ಕೋರಿದೆ.
NAMMUR EXPRESS NEWS
ಸಂತ ಶ್ರೀ ನಾರಾಯಣ ಗುರು ಸೌಹಾರ್ದ ಸಹಕಾರಿ ಸಂಘ ನಿ. ಸೊಪ್ಪುಗುಡ್ಡೆ-ತೀರ್ಥಹಳ್ಳಿ. ಶ್ರೀ ನಾರಾಯಣ ಗುರು ವಿಚಾರ ವೇದಿಕೆ, ತೀರ್ಥಹಳ್ಳಿ, ಇವರ ಆಶ್ರಯದಲ್ಲಿ ಡಾ|| ಪುನೀತ್ ರಾಜ್ ಕುಮಾರ್ ರವರ ಹುಟ್ಟು ಹಬ್ಬದ ಪ್ರಯುಕ್ತ ದಿನಾಂಕ 27-03-2025 ನೇ ಗುರುವಾರ ರಾತ್ರಿ 7-00 ಗಂಟೆಗೆ ಸರಿಯಾಗಿ ತೀರ್ಥಹಳ್ಳಿ ಸೊಪ್ಪುಗುಡ್ಡೆಯ ಸಂಸ್ಕೃತಿ ಮಂದಿರದ ಮೈದಾನದಲ್ಲಿ ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಭೈದತಿ ಕೃಪಾ ಪೋಷಿತ ಯಕ್ಷಗಾನ ಮಂಡಳಿ ಶ್ರೀ ಗೆಜ್ಜೆಗಿರಿ ಮೇಳದವರಿಂದ ಕಾಲಮಿತಿ “ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮ”
ಎಂಬ ಪುಣ್ಯ ಕಥಾಭಾಗವನ್ನು ಆಡಿತೋರಿಸಲಿದ್ದಾರೆ. ತಾವುಗಳು ಕುಟುಂಬ ಸಮೇತರಾಗಿ ಆಗಮಿಸಿ, ಯಕ್ಷಗಾನ ವೀಕ್ಷಿಸಿ, ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿ.
ಅಧ್ಯಕ್ಷರು ಮತ್ತು ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗ ಸಂತ ಶ್ರೀ ನಾರಾಯಣ ಗುರು ಸೌಹಾರ್ದ ಸಹಕಾರಿ ಸಂಘ ನಿ. ತೀರ್ಥಹಳ್ಳಿ,
ಅಧ್ಯಕ್ಷರು ಮತ್ತು ಸದಸ್ಯರು ಶ್ರೀ ನಾರಾಯಣ ಗುರು ವಿಚಾರ ವೇದಿಕೆ. ತೀರ್ಥಹಳ್ಳಿ, ಸರ್ವರಿಗೂ ಆದರದ ಸ್ವಾಗತವನ್ನು ಕೋರಿದ್ದಾರೆ
