ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಶುರು!
– ಅರ್ಜಿ ಹಾಕೋದು ಹೇಗೆ..? : ಅರ್ಜಿ ಸಲ್ಲಿಸಲು ಏನು ಬೇಕು?. ಇಲ್ಲಿ ಕ್ಲಿಕ್ ಮಾಡಿ…!
– ಮನೆ ಯಜಮಾನಿಗೆ 2000 ರೂ. ಬರುತ್ತೆ!
NAMMUR EXPRESS NEWS
ಜೂ.27ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಯೋಜನೆಯ ಪ್ರಯೋಜನಗಳನ್ನು ಪಡೆಯಲು, ಕರ್ನಾಟಕ ರಾಜ್ಯದ ಮಹಿಳೆಯರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು ಅಥವಾ ಅದರ ಅಧಿಕೃತ ವೆಬ್ಸೈಟ್ sevasindhuservices.karnataka.gov.in ನಲ್ಲಿ ನೋಂದಾಯಿಸಿಕೊಳ್ಳಬೇಕು.
ರಾಜ್ಯದ ಗೃಹಿಣಿಯರ ಆರ್ಥಿಕ ಸ್ಥಿತಿಯ ಸುಧಾರಣೆಗಾಗಿ, ಕಾಂಗ್ರೆಸ್ ಸರಕಾರವು ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿದೆ. ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಮುಖ್ಯವಾಗಿ ಕರ್ನಾಟಕದವರಾಗಿರಬೇಕು ಹಾಗೂ ನೀವು ನಿಮ್ಮ ಕುಟುಂಬದ ಮುಖ್ಯಸ್ಥರಾಗಿದ್ದರೆ ಅರ್ಜಿ ಸಲ್ಲಿಸಬಹುದಾಗಿದೆ. ಈ ರಾಜ್ಯದ ಎಲ್ಲಾ ಮಹಿಳೆಯರಿಗೆ ಈ ಯೋಜನೆಯ ಆರ್ಥಿಕ ಪ್ರಯೋಜನಗಳನ್ನು ಒದಗಿಸಲು ಕರ್ನಾಟಕ ರಾಜ್ಯ ಸರಕಾರವು ರಾಜ್ಯದಲ್ಲಿ ಈ ಯೋಜನೆಯ ಅನುಷ್ಠಾನವನ್ನು ಬಿಡುಗಡೆ ಮಾಡಿದೆ. ಇನ್ನು ಈ ಯೋಜನೆಯಡಿ ಅರ್ಜಿ ಸಲ್ಲಿಕೆ ಜೂನ್ 27ರಂದು ಅಧಿಕೃತವಾಗಿ ಆರಂಭಗೊಳ್ಳಲಿದೆ ಎಂದು ಸರಕಾರ ತಿಳಿಸಿದೆ.
ಏನಿದು ಯೋಜನೆ?:
ಕರ್ನಾಟಕ ರಾಜ್ಯ ಸರಕಾರವು ಎಲ್ಲಾ ಮಹಿಳೆಯರಿಗಾಗಿ ಗೃಹ ಲಕ್ಷ್ಮಿ ಯೋಜನೆ 2023 ಅನ್ನು ಪ್ರಾರಂಭಿಸಿದೆ. ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು ಕರ್ನಾಟಕ ಸರಕಾರವು ಮನೆಯ ಮುಖ್ಯಸ್ಥ ಮಹಿಳೆಯರಿಗೆ 2,000 ರೂ. ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುತ್ತದೆ. ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು, ಕರ್ನಾಟಕ ರಾಜ್ಯದ ಮಹಿಳೆಯರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು ಅಥವಾ ಅದರ ಅಧಿಕೃತ ವೆಬ್ಸೈಟ್ sevasindhuservices.karnataka.gov.in ನಲ್ಲಿ ನೋಂದಾಯಿಸಿಕೊಳ್ಳಬೇಕು.
ಗೃಹಲಕ್ಷ್ಮೀ ಯೋಜನೆಯಡಿ ಅರ್ಜಿ ಸಲ್ಲಿಸಲು ಬಿಪಿಎಲ್, ಅಂತ್ಯೋದಯ ಕಾರ್ಡ್ದಾರರು ಅರ್ಜಿ ಸಲ್ಲಿಸಬಹುದಾಗಿದೆ. ಗೃಹಣಿಯರು ತಮ್ಮ ಅರ್ಜಿಯನ್ನು ಹತ್ತಿರದ ಸೇವಾ ಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದು. ಇನ್ನು ಯೋಜನೆಯಡಿ ಅರ್ಜಿ ಸಲ್ಲಿಸಲು ಮಹಿಳೆ ಆಧಾರ್ ಕಾರ್ಡ್, ಪತಿ ಆಧಾರ್ ಕಾರ್ಡ್ ಮಾಹಿತಿ ನೀಡಬೇಕಾಗಿದೆ. ಸದ್ಯ ಈ ಯೋಜನೆ ಬಗ್ಗೆ ಯಾವುದೇ ಗೊಂದಲಗಳಿದ್ದರೆ ಸಹಾಯವಾಣಿ ಸಂಖ್ಯೆ 1902ಕ್ಕೆ ಕರೆ ಮಾಡಬಹುದು ಎಂದು ಮಾಹಿತಿ ನೀಡಿದ್ದಾರೆ. ಅಷ್ಟೇ ಅಲ್ಲದೇ ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಎನ್ನುವ ನಿರ್ದಿಷ್ಟ ಗಡುವು ಇರುವುದಿಲ್ಲ. ಹೀಗಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ವರ್ಷ ಪೂರ್ತಿ ಇರುತ್ತದೆ ಎಂದು ಸಹ ಹೇಳಿದ್ದಾರೆ.
ಇದನ್ನೂ ಓದಿ : ಗೃಹಜ್ಯೋತಿ ಅರ್ಜಿ ನೋಂದಣಿಗೆ ಹೊಸ ಲಿಂಕ್!
HOW TO APPLY : NEET-UG COUNSELLING 2023