ಕಾಳುಮೆಣಸು ಬೆಳೆಗಾರರಿಗೆ ಬಂಪರ್!
– 6 ವರ್ಷಗಳ ಬಳಿಕ 60,000 ರೂ. ಗಡಿ ದಾಟಿತು ದರ
– ರೈತರಿಗೆ ಖುಷ್: ಇನ್ನಷ್ಟು ಬೆಳೆಯಲು ಆಸಕ್ತಿ!
NAMMUR EXPRESS NEWS
‘ಕಪ್ಪು ಬಂಗಾರ’ ಎಂದೇ ಕರೆಯಲ್ಪಡುವ ಕಾಳು ಮೆಣಸು ಬೆಳಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ. 6 ವರ್ಷಗಳ ಬಳಿಕ ಮತ್ತೆ 60,000 ರೂಪಾಯಿ ಗಡಿ ದಾಟಿದ್ದು, ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಹೆಚ್ಚಳವಾಗಬಹುದೆಂಬ ನಿರೀಕ್ಷೆಯಲ್ಲಿ ಬೆಳೆಗಾರರಿದ್ದಾರೆ. ಎಂಟು ದಿನಗಳ ಹಿಂದಿನವರೆಗೂ ಪ್ರತಿ ಕ್ವಿಂಟಾಲ್ ಗೆ 45,000 ರೂಪಾಯಿಗಳಿಂದ 49,000 ರೂಪಾಯಿ ಆಸುಪಾಸಿನಲ್ಲಿದ್ದ ಕಾಳು ಮೆಣಸಿನ ದರ ಸೋಮವಾರದಂದು ಶಿರಸಿ ಮಾರುಕಟ್ಟೆಯಲ್ಲಿ 61,599 ರೂಪಾಯಿಗೆ ಟೆಂಡರ್ ಆಗಿದೆ.
ಇದು ಕಾಳುಮೆಣಸು ದಾಸ್ತಾನು ಮಾಡಿದ್ದ ಬೆಳೆಗಾರರಿಗೆ ಸಂತಸ ತಂದಿದೆ. ಆರು ವರ್ಷಗಳ ಹಿಂದೆ ಅಂದರೆ 2017ರಲ್ಲಿ ಕಾಳುಮೆಣಸಿಗೆ ಇದಕ್ಕಿಂತ ಹೆಚ್ಚಿನ ಬೆಲೆ ಸಿಕ್ಕಿತೆಂದು ಹೇಳಲಾಗಿದ್ದು, ಇದಾದ ಬಳಿಕ ಮತ್ತೆ ಕಾಳುಮೆಣಸಿಗೆ ಬಂಗಾರದ ಬೆಲೆ ಬಂದಿದೆ. ಕಾಳುಮೆಣಸಿಗೆ ಇದುವರೆಗೆ ಸೂಕ್ತ ಬೆಲೆ ಸಿಗದೇ ನಿರಾಸೆಗೊಂಡಿದ್ದ ಬೆಳೆಗಾರರಿಗೆ ಈಗ ನಡೆಯುತ್ತಿರುವ ಬೆಳವಣಿಗೆ ಖುಷಿ ಮೂಡಿಸಿದೆ.
ಇದನ್ನೂ ಓದಿ : ಅಡಿಕೆ ದರ ಎಷ್ಟಿದೆ…ಹೆಚ್ಚಾಯ್ತಾ..? ಕಡಿಮೆ ಆಯ್ತಾ?
HOW TO APPLY : NEET-UG COUNSELLING 2023