Categories
ಮಾಹಿತಿ

ರೈತರಿಗೆ ಸಿಹಿ ಸುದ್ದಿ!

ರೈತರಿಗೆ ಸಿಹಿ ಸುದ್ದಿ!
– ಕೃಷಿ ಜಮೀನಿಗೆ ಉಚಿತ ಬೋರ್ ವೇಲ್
– ಎಸ್ಸಿ, ಎಸ್ಟಿ ವರ್ಗಕ್ಕೆ ವಿಶೇಷ ಅನುದಾನ

NAMMUR EXPRESS NEWS
ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಗಂಗಾ ಕಲ್ಯಾಣ ಯೋಜನೆಯಡಿ ಸಣ್ಣ ರೈತರಿಗೆ ಉಚಿತ ಬೋರ್ ಕೊರೆಸಲು ಸಹಾಯಧನ ನೀಡಲಿದೆ. ರೈತರ ಜಮೀನಿನಲ್ಲಿ ಅಗತ್ಯ ಇರುವ ಬೋರ್ವೆಲ್ ಕೊರೆಸಿ ಪಂಪ್ ಸೆಟ್ ಅಳವಡಿಸಿಕೊಳ್ಳಲು ಸರ್ಕಾರ ಉಚಿತ ಸೌಲಭ್ಯ ಕಲ್ಪಿಸಿ ಕೊಡುತ್ತಿದೆ ಇದರ ಜೊತೆಗೆ ಈ ಯೋಜನೆಯಡಿಯಲ್ಲಿ 1.5 ಲಕ್ಷ ರೂಪಾಯಿ ಗಳಿಂದ 3.50 ಲಕ್ಷ ರೂಪಾಯಿಗಳ ವರೆಗೆ ರೈತರು ಸರ್ಕಾರದಿಂದ ಸಹಾಯಧನ ಪಡೆಯಬಹುದು.
ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಮೂಲಕ ಅವರ ಸ್ವಾವಲಂಬಿ ಜೀವನವನ್ನು ಸಾಕಾರಗೊಳಿಸಲು ‘ಗಂಗಾ ಕಲ್ಯಾಣ ಯೋಜನೆ’ಯಡಿ, ಸಮಾಜ ಕಲ್ಯಾಣ ಇಲಾಖೆಯಡಿಯ ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹರು ಇದೇ ನವೆಂಬರ್ 29ರ ಒಳಗಾಗಿ ನಿಮ್ಮ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್, ಅಟಲ್ ಜನಸ್ನೇಹಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು :

– ಪರಿಶಿಷ್ಟಜಾತಿ/ಪಂಗಡದವರಾಗಿದ್ದು, ಜಾತಿ ಪ್ರಮಾಣಪತ್ರ ಹೊಂದಿರಬೇಕು.
– ಆದಾಯ ಮಿತಿ ಗ್ರಾಮೀಣ ಪ್ರದೇಶದಲ್ಲಿ ರೂ1.5 ಲಕ್ಷ, ನಗರ ಪ್ರದೇಶದಲ್ಲಿ ರೂ.2.00 ಲಕ್ಷ
– ಕನಿಷ್ಠ 21 ವರ್ಷ ವಯೋಮಾನ
– ಸಣ್ಣಹಿಡುವಳಿದಾರರ ಪ್ರಮಾಣಪತ್ರ ಹಾಗೂ ಇತ್ತೀಚಿನ ಪಹಣಿ ಆದಾಯ ಪ್ರಮಾಣ ಪತ್ರ, ಕುಟು೦ಬದ ಪಡಿತರ ಚೀಟಿ, ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್‌
ಆಸಕ್ತ ಅರ್ಹರು ನವೆಂಬರ್ 29ರ ಒಳಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಕಲ್ಯಾಣ ಮಿತ್ರ 24×7 ಸಹಾಯವಾಣಿ 9482300400 .

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.