ಸದ್ಯಕ್ಕಿಲ್ಲ ಹೊಸ ರೇಷನ್ ಕಾರ್ಡ್ ಭಾಗ್ಯ!
– ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆಗೆ ಅವಕಾಶ
– ಇನ್ನು ಬಿಪಿಎಲ್ ಕಾರ್ಡ್ ಮಾನದಂಡ ಇಲ್ದಿದ್ರೆ ವಜಾ
– ದಂಡ ಮತ್ತು ಜೈಲು: ಹಲವೆಡೆ ಕ್ರಮ: ಏನಿದು ನ್ಯೂಸ್!
NAMMUR EXPRESS NEWS
ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳ ಲಾಭ ಪಡೆಯಲು ಸಾಧ್ಯವಾಗದೆ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಮುಂದಾದವರಿಗೆ ಸರ್ಕಾರ ನಿರಾಸೆ ಮೂಡಿಸಿದೆ. ಹೊಸ ಎಪಿಎಲ್,ಬಿಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಇನ್ನೂ ಒಂದಿಷ್ಟು ದಿನ ಅನುಮತಿ ಇಲ್ಲ ಎಂದಿದ್ದಾರೆ ಆಹಾರ ಸಚಿವ ಮುನಿಯಪ್ಪ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿಸಂಹಿತೆ ಜಾರಿಯಾಗುತ್ತಿದ್ದಂತೆಯೇ, ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸುವ ಆನ್ಲೈನ್ ಪೋರ್ಟಲ್ ಸ್ಥಗಿತಗೊಳಿಸಲಾಗಿತ್ತು. ಇದೀಗ ಹೊಸ ಸರ್ಕಾರ ರಚನೆಯಾಗಿ ಮೂರು ತಿಂಗಳು ಕಳೆದು ಈ ಪೋರ್ಟ್ಲ್ ಅನ್ನು ಆರಂಭಮಾಡಲಿಲ್ಲ. ಸರ್ಕಾರ ಅನುಮತಿ ನೀಡಿದ ನಂತರವಷ್ಟೇ ಅನ್ಲೈನ್ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಸಿಗಲಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ‘ಗ್ಯಾರಂಟಿ’ಗಳ ಲಾಭ ಪಡೆಯಲು ಹೊಸ ಪಡಿತರ ಚೀಟಿ ಮಾಡಿಸಲು ಜನರು ಮುಗಿಬೀಳುತ್ತಿದ್ದಾರೆ. ಹೊಸದಾಗಿ ಪಡಿತರ ಚೀಟಿ ಸಲ್ಲಿಸಲು ‘ಗ್ರಾಮ ಒನ್’ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಿಗೆ ಜನರು ನಿತ್ಯವೂ ಭೇಟಿ ನೀಡಿ ವಿಚಾರಿಸುತ್ತಿದ್ದಾರೆ. ‘ಗ್ಯಾರಂಟಿ’ ಯೋಜನೆಗಳಿಗೆ ಪಡಿತರ ಚೀಟಿ ಮಾನದಂಡವಾಗಿದ್ದರಿಂದ ಅರ್ಜಿ ಸಲ್ಲಿಸಲು ಬರುವವರ ಸಂಖ್ಯೆ ಹೆಚ್ಚಾಗಿದೆ. ಸದ್ಯಕ್ಕೆ ಅರ್ಜಿ ಸ್ವೀಕಾರ ಪ್ರಕ್ರಿಯೆಗೆ ಸರ್ಕಾರ ಅನುವು ಮಾಡಿಕೊಟ್ಟಿಲ್ಲ.
ಯಾರ್ಯಾರಿಗೆ ಸಿಗಲ್ಲ ಬಿಪಿಎಲ್ ಕಾರ್ಡ್?
ಬಿಪಿಎಲ್ ಕಾರ್ಡ್ ಹೊಸದಾಗಿ 2.95 ಲಕ್ಷ ಅರ್ಜಿ ಬಂದಿವೆ, 2.95 ಲಕ್ಷ ಅರ್ಜಿಗಳ ಪರಿಶೀಲನೆ ನಡೆದಿದೆ. 1.50 ಲಕ್ಷ ಅರ್ಜಿದಾರರು ಅರ್ಹರೆಂದು ಗುರುತಿಸಲಾಗಿದೆ ಎಂದು ಹೇಳಿದ್ದಾರೆ. ಶೀಘ್ರವೇ ಇವರಿಗೆ ಕಾರ್ಡ್ ನೀಡಲಾಗುವುದು, ರಾಜ್ಯದಲ್ಲಿ ಈಗಾಗಲೇ 1.28 ಕೋಟಿ ಕಾರ್ಡ್ ಕಾರ್ಡ್ ಗಳಿವೆ. ಅನ್ನಭಾಗ್ಯ ಅಕ್ಕಿ ವಿತರಣೆ ಮುಗಿಯುವವರೆಗೂ ಹೊಸ ಅರ್ಜಿ ಸ್ವೀಕರಿಸಲ್ಲ, ಈ ಎಲ್ಲಾ ಪ್ರಕ್ರಿಯೆಗಳು ಮುಗಿದ ಮೇಲೆ ಹೊಸ ಅರ್ಜಿ ಸ್ವೀಕಾರ ಮಾಡಲಿದೆ ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ.
ಬಿಪಿಎಲ್ ಕಾರ್ಡ್ ನಲ್ಲಿ ಬದಲಾವಣೆ ಮಾಡಿದ ಹೊಸ ಮಾನದಂಡ ಏನು… ಇಲ್ಲಿದೆ ಮಾಹಿತಿ
– ವಾರ್ಷಿಕ ಆದಾಯ 1.2 ಲಕ್ಷ ಮೀರಬಾರದು.
– 3 ಹೆಕ್ಟರ್ಗಿಂತ ಹೆಚ್ಚಿನ ಒಣಭೂಮಿ ಹೊಂದಿರಬಾರದು
– ವೈಟ್ ಬೋರ್ಡ್ ನಾಲ್ಕು ಚಕ್ರದ ವಾಹನ ಇರಬಾರದು
– ಯಾವುದೇ ಸರ್ಕಾರಿ ನೌಕರರಾಗಿರಬಾರದು
– ನಗರದ ಭಾಗದಲ್ಲಿ ಮನೆಯ ವಿಸ್ತೀರ್ಣ 1000 sqt ಮೀರಬಾರದು
– ವಾಣಿಜ್ಯ ತೆರಿಗೆ, ಆದಾಯ ತೆರಿಗೆ, IT ರಿಟರ್ನ್ಸ್ ಪಾವತಿದಾರರಾಗಿರಬಾರದು