ಓಟ್ ಹಾಕಲು 12 ದಾಖಲೆಗಳಲ್ಲಿ ಒಂದಿದ್ದರೆ ಸಾಕು!
– 14 ಲೋಕ ಸಭಾ ಕ್ಷೇತ್ರಗಳಿಗೆ ನಾಳೆಯೇ ಚುನಾವಣೆ
– ಮತ ಹಾಕೋದು ನಿಮ್ಮ ಹಕ್ಕು: ಮತದಾನ ಮರೆಯದಿರಿ!
NAMMUR EXPRESS NEWS
ರಾಜ್ಯದಲ್ಲಿ ಮೊದಲ ಹಂತದ 14 ಕ್ಷೇತ್ರಗಳ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಏ.26ರ ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಲಿದೆ. 6 ಗಂಟೆ ನಂತರ ಮತಗಟ್ಟಿಗೆ ನೋ ಎಂಟ್ರಿ ಬೋರ್ಡ್ ಹಾಕಲಾಗುತ್ತದೆ. 14 ಕ್ಷೇತ್ರಗಳಲ್ಲಿ ಮತದಾನಕ್ಕೆ ಚುನಾವಣಾ ಆಯೋಗ ಸಿದ್ಧತೆ ಮಾಡಿಕೊಂಡಿದೆ. ಮೊದಲ ಹಂತದಲ್ಲಿ ಉಡುಪಿ -ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಮತದಾನ ನಡೆಯಲಿದೆ. ಲೋಕಸಭೆ ಚುನಾವಣೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನ ಮಾಡಲು ಮತದಾರರ ಗುರುತಿನ ಚೀಟಿ ತೆಗೆದುಕೊಂಡು ಹೋಗಬೇಕಿದೆ. ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ ಪರ್ಯಾಯ ದಾಖಲೆಗಳನ್ನು ತೋರಿಸಿ ಮತದಾನ ಮಾಡಬಹುದಾಗಿದೆ.
ಈ ದಾಖಲೆಗಳನ್ನು ತೋರಿಸಿ ಮತದಾನ ಮಾಡಿ:
* ಆಧಾರ್ ಕಾರ್ಡ್
* ಜಾಬ್ ಕಾರ್ಡ್
* ಡ್ರೈವಿಂಗ್ ಲೈಸನ್ಸ್
* ಪಾನ್ ಕಾರ್ಡ್
* ಭಾರತೀಯ ಪಾಸ್ ಪೋರ್ಟ್
* ಭಾವಚಿತ್ರದೊಂದಿಗೆ ಪಿಂಚಣಿ ದಾಖಲೆ
* ಎನ್ಪಿಆರ್ ಅಡಿಯಲ್ಲಿ ಸ್ಮಾರ್ಟ್ ಕಾರ್ಡ್
* ಅಂಚೆ ಕಚೇರಿ ನೀಡಿದ ಭಾವಚಿತ್ರವಿರುವ ಪಾಸ್ ಬುಕ್
* ಕಾರ್ಮಿಕ ಸಚಿವಾಲಯದ ಯೋಜನೆಯಡಿ ನೀಡಲಾದ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್
* ರಾಜ್ಯ, ಕೇಂದ್ರ ಸರ್ಕಾರದ ಸಾರ್ವಜನಿಕ ಉದ್ದಿಮೆಗಳು ತಮ್ಮ ನೌಕರರಿಗೆ ನೀಡಿರುವ ಸೇವಾ ಗುರುತಿನ ಚೀಟಿ
* ಸಂಸದರು, ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರುಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿಗಳು
* ಅಂಗವಿಕಲರ ಗುರುತಿನ ಚೀಟಿ (ಯುಡಿಐಡಿ ಕಾರ್ಡ್) ಪತ್ರದ ಮೂಲ ಪ್ರತಿಗಳನ್ನು ಮತದಾನದ ವೇಳೆ ಪರ್ಯಾಯ ದಾಖಲೆಗಳನ್ನಾಗಿ ಬಳಸಬಹುದು ಎಂದು ಹೇಳಲಾಗಿದೆ.
ಮತದಾನ ನಿಮ್ಮ ಹಕ್ಕು. ಕಡ್ಡಾಯವಾಗಿ ಮತದಾನ ಮಾಡಿರಿ.