ಪಿಎಂ ಕಿಸಾನ್ ಸಮ್ಮಾನ್ ನಿಧಿ: ಹಣಕ್ಕಾಗಿ ಅರ್ಜಿ ಸಲ್ಲಿಸುವುದು ಹೇಗೆ?
– ಕೇಂದ್ರ ಸರ್ಕಾರದಿಂದ 6000 ರೂ. ಹಣ ಬರುತ್ತೆ!
NAMMUR EXPRESS NEWS
ನವದೆಹಲಿ: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ 2೦19ರಲ್ಲಿ ಜಾರಿಗೆ ತಂದ ಯೋಜನೆಯೇ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ. ಈ ಯೋಜನೆ ಮೂಲಕ ಪ್ರತಿ ವರ್ಷ ರೈತರ ಖಾತೆಗೆ 6,000 ರೂ. ಜಮೆ ಮಾಡಲಾಗುತ್ತದೆ. ಈ ಯೋಜನೆಗೆ ಹೆಸರು ನೋಂದಾಯಿಸುವುದು ಹೇಗೆ? ಕಂತು ಪಾವತಿ ಬಗ್ಗೆ ಪರಿಶೀಲನೆ ನಡೆಸುವುದು ಹೇಗೆ? ಫಲಾನುಭವಿ ರೈತರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 15ನೇ ಕಂತಿಗಾಗಿ ಕಾಯುತ್ತಿದ್ದಾರೆ. ವರದಿಗಳ ಪ್ರಕಾರ, ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ 15ನೇ ಕಂತು ನವೆಂಬರ್ ಕೊನೆಯ ವಾರದಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. 14ನೇ ಕಂತನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ವರ್ಷದ ಜುಲೈನಲ್ಲಿ ಬಿಡುಗಡೆ ಮಾಡಿದ್ದರು.
3 ಕಂತುಗಳಲ್ಲಿ ಪಾವತಿ
ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಎಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ಯೋಜನೆ ಆರಂಭವಾಗಿ 4 ವರ್ಷಗಳಲ್ಲಿ ಕೇಂದ್ರ ಇಲ್ಲಿಯವರೆಗೆ ಸುಮಾರು 2.50 ಲಕ್ಷ ಕೋಟಿ ರೂ.ಗಳನ್ನು ಫಲಾನುಭವಿಗಳ ಖಾತೆಗಳಿಗೆ ವರ್ಗಾಯಿಸಿದೆ.
ಹೀಗೆ ಚೆಕ್ ಮಾಡಿ
ನೀವು ಈ ಯೋಜನೆಯ ಫಲಾನುಭವಿಯಾಗಿದ್ದರೆ, ಹಣ ನಿಮ್ಮ ಖಾತೆಗೆ ಜಮೆ ಆಗಿದೆಯೇ ಎನ್ನುವುದನ್ನು ಆನ್ಲೈನ್ ಮೂಲಕ ನಿಮಗೇ ಪರಿಶೀಲಿಸಲು ಸಾಧ್ಯವಿದೆ. ಅದು ಹೇಗೆ ಎನ್ನುವುದರ ಮಾಹಿತಿ ಇಲ್ಲಿದೆ.
ಅಧಿಕೃತ ವೆಬ್ಸೈಟ್ pmkisan.gov.in ಭೇಟಿ ನೀಡಿ
*ಆಗ ಓಪನ್ ಆಗುವ ಪೇಜ್ನ ಬಲ ಬದಿಯಲ್ಲಿರುವ ‘Know Your Status’ ಆಯ್ಕೆ ಮೇಲೆ ಕ್ಲಿಕ್ ಮಾಡಿ
*ರಿಜಿಸ್ಟ್ರೇಷನ್ ನಂಬರ್ ನಮೂದಿಸಿ, ಕ್ಯಾಪ್ಚ ಕೋಡ್ ಭರ್ತಿ ಮಾಡಿ ‘Get Data’ ಆಯ್ಕೆಯನ್ನು ಸೆಲೆಕ್ಟ್ ಮಾಡಿ
*ಈಗ ಫಲಾನುಭವಿಯ ವಿವರ, ಹಣ ಜಮೆಯಾದ ಮಾಹಿತಿ ಸ್ಕ್ರೀನ್ ಮೇಲೆ ಮೂಡುತ್ತದೆ
ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವ ವಿಧಾನ
*ಅಧಿಕೃತ ವೆಬ್ಸೈಟ್ www.pmkisan.gov.inಗೆ ಭೇಟಿ ನೀಡಿ
*ಆಗ ತೆರೆದುಕೊಳ್ಳುವ ಪುಟದಲ್ಲಿನ ‘Beneficiary list’ ಆಯ್ಕೆಯ ಮೇಲೆ ಕ್ಲಿಕ್ ಮಾಡಿ
*ನಿಮ್ಮ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್ ಮತ್ತು ಗ್ರಾಮವನ್ನು ಆಯ್ಕೆ ಮಾಡಿ
*Get report’ ಆಯ್ಕೆಯನ್ನು ಸೆಲೆಕ್ಟ್ ಮಾಡಿ
ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ಹೆಸರು ನೋಂದಾಯಿಸುವ ವಿಧಾನ
ಅಧಿಕೃತ ವೆಬ್ಸೈಟ್ pmkisan.gov.in ಭೇಟಿ ನೀಡಿ
‘New Farmer Registration’ ಆಯ್ಕೆ ಮೇಲೆ ಕಲಿಕ್ ಮಾಡಿ ಮತ್ತು ಆಧಾರ್ ಕಾರ್ಡ್ ನಂಬರ್ ನಮೂದಿಸಿ ಕ್ಯಾಪ್ಚ ಕೋಡ್ ಭರ್ತಿ ಮಾಡಿ
ಅಗತ್ಯ ಮಾಹಿತಿ ತುಂಬಿ ‘Yes’ ಬಟನ್ ಕ್ಲಿಕ್ ಮಾಡಿ
ಅರ್ಜಿ ಫಾರಂ ತುಂಬಿ, ಸೇವ್ ಮಾಡಿ ಭವಿಷ್ಯದ ಅಗತ್ಯಗಳಿಗಾಗಿ ಪ್ರಿಂಟ್ ಔಟ್ ತೆಗೆದಿಡಿ
ಹೆಚ್ಚಿನ ಮಾಹಿತಿಗೆ ಹೆಲ್ಪ್ಲೈನ್ ನಂಬರ್ 155261 ಮತ್ತು 011-24300606 ಅನ್ನು ಸಂಪರ್ಕಿಸಿ.