ರೈತರಿಗೆ ಖುಷ್: ಕಾಳು ಮೆಣಸು ದರ ಏರಿಕೆ!
– 700 ರೂ. ನತ್ತ ಒಂದು ಕೆಜಿ ಕಾಳು ಮೆಣಸು ದರ?
– ಇಳುವರಿ ಕಡಿಮೆ ಹಿನ್ನೆಲೆ ದರ ಹೆಚ್ಚಳ ಸಾಧ್ಯತೆ
NAMMUR EXPRESS NEWS
ಕಾಳು ಮೆಣಸು ಧಾರಣೆಯಲ್ಲಿ ಏರಿಕೆ ಸುಳಿವು ನೀಡಿದೆ. ಆ.5ರಂದು ಹೊರ ಮಾರುಕಟ್ಟೆ ಯಲ್ಲಿ ಕೆ.ಜಿ.ಗೆ 640ರಿಂದ 665 ರೂ. ತನಕವೂ ಖರೀದಿಯಾಗಿದೆ. ಕ್ಯಾಂಪೋದಲ್ಲಿ 610 ರೂ. ತನಕ ಇತ್ತು. ಹೊರ ಮಾರುಕಟ್ಟೆ ಮತ್ತು ಸಹಕಾರ ಸಂಘಗಳು ಧಾರಣೆ ಏರಿಕೆಯಲ್ಲಿ ಪೈಪೋಟಿ ಆರಂಭಿಸಿವೆ. ಆದರೂ ಬೇಡಿಕೆಗೆ ತಕ್ಕಷ್ಟು ಪೂರೈಕೆ ಆಗುತ್ತಿಲ್ಲ. ಈ ಹಿಂದಿನ ಮೂರು ವರ್ಷಗಳಲ್ಲಿ 500 ರೂ. ಗಡಿ ದಾಟದ ಧಾರಣೆ ಈ ವರ್ಷದ ಜುಲೈಯಲ್ಲಿ 600 ರೂ ಸನಿಹಕ್ಕೆ ಬಂದಿತ್ತು. ಆಗಸ್ಟ್ ಮೊದಲ ವಾರದಲ್ಲಿ 630ರಿಂದ 650 ರೂ ಸನಿಹಕ್ಕೆ ತಲುಪಿದೆ. ಲಭ್ಯ ಮಾಹಿತಿ ಪ್ರಕಾರ ಸದ್ಯದಲ್ಲೇ 650 ರೂ. ದಾಟಿ ಮುಂದುವರಿಯುವ ಸಾಧ್ಯತೆ ಇದೆ. ಕಾಳುಮೆಣಸು ದಾಸಾನು ವಹಿಸುವುದು ಉತ್ತಮ ಅನ್ನುವುದು ಕೆಲವರ ಅಭಿಪ್ರಾಯ, ಚೌತಿಯ ಬಳಿಕ ಅಂತಾರಾಷ್ಟ್ರೀಯ ಸರಬರಾಜು ನವೆಂಬರ್ 2ನೇ ವಾರದ ತನಕ ತೆರೆದಿರುತ್ತದೆ. ಈ ಸಮಯದಲ್ಲಿ ಕಾಳು ಮೆಣಸು ಧಾರಣೆಯಲ್ಲಿ ಹೆಚ್ಚಳವಾಗುತ್ತದೆ ಅನ್ನುವುದು ಇದಕ್ಕೆ ಕಾರಣ.
ಕೊರತೆ, ವಿದೇಶದಿಂದ ಆಮದು ನಿಯಂತ್ರಣದ ಕಾರಣದಿಂದ ಧಾರಣೆ ಏರಿಕೆ ಕಂಡಿದೆ. ಧಾರಣೆ ಏರಿಕೆ ಮುಂದುವರಿಯುವ ಸಾಧ್ಯತೆ ಇದೆ. ದೇಶಿಯ ಕಾಳು ಮೆಣಸಿಗೆ ಪೈಪೋಟಿ ನೀಡುತ್ತಿದ್ದ ವಿಯೆಟ್ನಾಂ, ಶ್ರೀಲಂಕಾ ದೇಶಗಳಲ್ಲಿ ಕಡಿಮೆ ಪ್ರಮಾಣದಲ್ಲಿ ದಾಸ್ತಾನು ಇರುವುದು ಕೂಡ ಧಾರಣೆ ಹೆಚ್ಚಳಕ್ಕೆ ಮುಖ್ಯ ಕಾರಣ. ದೇಶೀಯವಾಗಿಯೂ ಉತ್ಪಾದನೆ ಕುಸಿದಿರುವುದರಿಂದ ಕಾಳುಮೆಣಸು ಆಧಾರಿತ ಉತ್ಪಾದನಾ ವಲಯಕ್ಕೆ ಕೊರತೆಯ ಬಿಸಿ ತಟ್ಟಿದೆ.
ಇದನ್ನೂ ಓದಿ : ನಾನು ಬದುಕಿರುವುದೇ ಕಿಮ್ಮನೆಗೆ ಸಹಿಸಲಾಗುತ್ತಿಲ್ಲ
HOW TO APPLY : NEET-UG COUNSELLING 2023