ಯುವ ನಿಧಿ ಗ್ಯಾರಂಟಿ ಯೋಜನೆಗೆ ಯಾರು ಅರ್ಹರು?
– ಬೇಕಾದ ದಾಖಲೆ ಏನೇನು?… ಯಾರಿಗೆ ಸಿಗುತ್ತೆ?
– 2 ವರ್ಷ ಸರ್ಕಾರ ಕೊಡುತ್ತೆ ನಿರುದ್ಯೋಗ ಭತ್ಯೆ
NAMMUR EXPRESS NEWS
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಐದು ಯೋಜನೆಗಳನ್ನು ಜಾರಿ ಮಾಡುತ್ತಿದೆ. ಗೃಹ ಜ್ಯೋತಿ, ಅನ್ನ ಭಾಗ್ಯ, ಶಕ್ತಿ ಯೋಜನೆ, ಗೃಹ ಲಕ್ಷ್ಮೀ, ಯುವ ನಿಧಿ ಎಂಬ ಐದು ಯೋಜನೆಗಳ ಪೈಕಿ ಈಗಾಗಲೇ ನಾಲ್ಕು ಯೋಜನೆಗಳು ಜಾರಿಗೆ ಬಂದಿದೆ. ಆದರೆ ಈ ಪೈಕಿ ಯುವ ನಿಧಿ ಗ್ಯಾರಂಟಿ ಯೋಜನೆಯು ಇನ್ನೂ ಕೂಡಾ ಜಾರಿಗೆ ಬಂದಿಲ್ಲ. ಬಜೆಟ್ನಲ್ಲಿ ನಾಲ್ಕು ಯೋಜನೆಗಳಿಗೆ ಅನುದಾನವನ್ನು ಸರ್ಕಾರ ಘೋಷಣೆ ಮಾಡಿದ್ದರೂ ಯುವನಿಧಿಗೆ ಅನುದಾನವನ್ನು ಸರ್ಕಾರವು ಘೋಷಣೆ ಮಾಡಿಲ್ಲ. ಇತರೆ ಯೋಜನೆಗಳಿಗೆ ಹಂಚಲಾದ ಬಜೆಟ್ನಲ್ಲಿಯೇ ಈ ಯೋಜನೆಯನ್ನು ಜಾರಿ ಮಾಡಲಾಗುತ್ತದೆಯೇ ಎಂಬ ಸುದ್ದಿಗಳಿವೆ.
ನಿರುದ್ಯೋಗಿಗಳಿಗೆ ಭತ್ಯೆ
ಕರ್ನಾಟಕದಲ್ಲಿ ಸರ್ಕಾರ ರಚಿಸಿದರೆ ಅದನ್ನು ಈಡೇರಿಸುವುದಾಗಿ ಸರ್ಕಾರ ಭರವಸೆ ನೀಡಿದೆ. ಕರ್ನಾಟಕ ರಾಜ್ಯದ ನಿರುದ್ಯೋಗಿ ಯುವಕರ ಕಲ್ಯಾಣಕ್ಕಾಗಿ ಸರ್ಕಾರ ಜಾರಿ ಮಾಡಲು ಮುಂದಾಗಿರುವ ಯೋಜನೆ ಇದಾಗಿದೆ. ಯೋಜನೆಯಲ್ಲಿ ನಿರುದ್ಯೋಗಿ ಯುವಕರಿಗೆ ಮಾಸಿಕ ನಿರುದ್ಯೋಗ ಭತ್ಯೆಯನ್ನು ನೀಡಲಾಗುತ್ತದೆ. ಈ ಮಾಸಿಕ ಹಣಕಾಸಿನ ನೆರವನ್ನು ಯುವಕರು ಉದ್ಯೋಗ ಹುಡುಕುವ ಸಮಯದಲ್ಲಿ ಖರ್ಚಿನ ನಿರ್ವಹಣೆಗೆ ಬಳಕೆ ಮಾಡಿಕೊಳ್ಳಬಹುದಾಗಿದೆ. ಕರ್ನಾಟಕದ ಖಾಯಂ ನಿವಾಸಿಗಳು ಮತ್ತು ವಿದ್ಯಾವಂತರಾಗಿದ್ದರೂ ನಿರುದ್ಯೋಗಿಗಳಾಗಿದ್ದರೆ, ಕರ್ನಾಟಕ ಯುವ ನಿಧಿ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಅರ್ಹರಾಗಿದ್ದಾರೆ.
ಯೋಜನೆಗೆ ಯಾರು ಅರ್ಹರು?
– ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
– ಅರ್ಜಿದಾರರು ಪದವೀಧರರಾಗಿರಬೇಕು ಅಥವಾ ಡಿಪ್ಲೊಮಾ ಹೊಂದಿರುವವರಾಗಿರಬೇಕು.
– ಅರ್ಜಿದಾರರು 2022-2023 ರಲ್ಲಿ ಅವನ / ಅವಳ ಪದವಿ ಅಥವಾ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರಬೇಕು.
– ಅರ್ಜಿದಾರರು ಪದವಿ ಅಥವಾ ಡಿಪ್ಲೊಮಾ ತೇರ್ಗಡೆಯಾದ ದಿನಾಂಕದ ನಂತರ ಕನಿಷ್ಠ 180 ದಿನಗಳವರೆಗೆ ನಿರುದ್ಯೋಗಿಯಾಗಿರಬೇಕು.
ಯಾರು ಈ ಯೋಜನೆಗೆ ಅನರ್ಹರು?
– ಪದವಿ ಅಥವಾ ಡಿಪ್ಲೊಮಾ ಉತ್ತೀರ್ಣರಾದ ನಂತರ ಉನ್ನತ ಶಿಕ್ಷಣವನ್ನು ಮುಂದುವರಿಸುವ ಯುವಕರು.
– ಅಪ್ರೆಂಟಿಸ್ ವೇತನದ ಫಲಾನುಭವಿ.
– ಸರ್ಕಾರಿ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗದಲ್ಲಿರುವ ಯುವಕರು.
– ಸ್ವಯಂ ಉದ್ಯೋಗಿಗಳಾಗಿರುವ ಯುವಕರು.
– ಸರ್ಕಾರದ ಇತರೆ ಆರ್ಥಿಕ ನೆರವು ಯೋಜನೆಯ ಫಲಾನುಭವಿ.
ಯೋಜನೆಯ ಪ್ರಯೋಜನಗಳು
ಕರ್ನಾಟಕ ಯುವ ನಿಧಿ ಯೋಜನೆಯಡಿ ಕರ್ನಾಟಕದ ಅರ್ಹ ನಿರುದ್ಯೋಗಿ ಯುವಕರಿಗೆ ಕೆಳಗೆ ತಿಳಿಸಿದ ಪ್ರಯೋಜನಗಳನ್ನು ಒದಗಿಸಲಾಗುವುದು:-
ನಿರುದ್ಯೋಗಿ ಪದವೀಧರ ಯುವಕರಿಗೆ ಪ್ರತಿ ತಿಂಗಳು 3,000 ರೂಪಾಯಿ ಮಾಸಿಕ ನಿರುದ್ಯೋಗ ಭತ್ಯೆ, ನಿರುದ್ಯೋಗಿ ಡಿಪ್ಲೊಮಾ ಹೊಂದಿರುವ ಯುವಕರಿಗೆ ಪ್ರತಿ ತಿಂಗಳು 1,500 ರೂಪಾಯಿ ಮಾಸಿಕ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ.
ಯೋಜನೆಗೆ ಬೇಕಾದ ದಾಖಲೆಗಳು
– ಕರ್ನಾಟಕದ ನಿವಾಸಿ ಪುರಾವೆ
– ಆಧಾರ್ ಕಾರ್ಡ್
– 10 ನೇ ತರಗತಿ ಅಂಕಪಟ್ಟಿ ಮತ್ತು ಪ್ರಮಾಣಪತ್ರ.
– 12 ನೇ (ದ್ವಿತೀಯ ಪಿಯುಸಿ) ಅಂಕಪಟ್ಟಿ ಮತ್ತು ಪ್ರಮಾಣಪತ್ರ.
– ಪದವಿ ಅಂಕಪಟ್ಟಿ ಮತ್ತು ಪ್ರಮಾಣಪತ್ರ.
– ಡಿಪ್ಲೊಮಾ ಪ್ರಮಾಣಪತ್ರ. (ಡಿಪ್ಲೊಮಾ ಹೊಂದಿರುವವರಿಗೆ).
– ಜಾತಿ ಪ್ರಮಾಣ ಪತ್ರ. (ಅನ್ವಯವಾದಲ್ಲಿ)
– ಆದಾಯ ಪ್ರಮಾಣಪತ್ರ.
– ಮೊಬೈಲ್ ನಂಬರ್
– ಬ್ಯಾಂಕ್ ಖಾತೆ ವಿವರಗಳು.
– ಸೆಲ್ಫ್ ಡಿಕ್ಲರೇಷನ್ ಪ್ರತಿ
ಕರ್ನಾಟಕ ಸರ್ಕಾರದ ಯುವ ನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆಯನ್ನು 2 ವರ್ಷಗಳ ಅವಧಿಗೆ ನಿರುದ್ಯೋಗಿ ಯುವಕರಿಗೆ ಮಾತ್ರ ನೀಡಲಾಗುತ್ತದೆ. ಫಲಾನುಭವಿಯು 2 ವರ್ಷಗಳ ನಂತರ ಅಥವಾ 2 ವರ್ಷಗಳ ಅವಧಿಯಲ್ಲಿ ಉದ್ಯೋಗವನ್ನು ಕಂಡುಕೊಂಡರೆ ನಿರುದ್ಯೋಗ ಭತ್ಯೆಯನ್ನು ತಕ್ಷಣವೇ ನಿಲ್ಲಿಸಲಾಗುತ್ತದೆ.
ಇದನ್ನೂ ಓದಿ : ಆರಗ ಮೇಲೆ ಸುಮೋಟೋ ಕೇಸ್ ದಾಖಲಿಸಲು ಪಟ್ಟು
HOW TO APPLY : NEET-UG COUNSELLING 2023