Categories
ಉದ್ಯೋಗ ಸುದ್ದಿ

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ

NAMMUR EXPRESS NEWS
ಬೆಂಗಳೂರು : ಕೃಷಿ ಇಲಾಖೆಯ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತಾಂತ್ರಿಕ ಸಲಹೆಗಾರ ಮೂರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಎರಡು ವರ್ಷಗಳ ಅವಧಿಗೆ ಕೆಲಸ ಮಾಡಲು ತಾಂತ್ರಿಕ ಸಲಹೆಗಾರ ಮೂರು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತರು ಅರ್ಹರು 20/3/2023 ರೊಳಗಾಗಿ ಅರ್ಜಿ
ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರು ಕೃಷಿ ಮತ್ತು ಕೃಷಿ ಸಂಬಂಧಿತ ವಿಷಯಗಳಲ್ಲಿ ಐಸಿಎಆರ್ ಮಾನ್ಯತೆ ಪಡೆದ ಕೃಷಿ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಆಸಕ್ತ ಅಭ್ಯರ್ಥಿಗಳು https://raitamitra.karnataka.gov.in ವೆಬ್ ಸೈಟ್ ಮೂಲಕ ಡೌನ್ಲೋಡ್ ಮಾಡಿಕೊಂಡು ಸೂಕ್ತ ದಾಖಲಾತಿಗಳ ಜೊತೆ ಭರ್ತಿ ಮಾಡಿ ಸಲ್ಲಿಕೆ ಮಾಡುವುದು. ಭರ್ತಿ ಮಾಡಿದ ಅರ್ಜಿಯನ್ನು Director of Agriculture, Commissionerate of Agriculture, Seshadri Road, Bengaluru-01 ಇಲ್ಲಿಗೆ ಕಳುಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 080-22074161 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.