ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ!
– ರಾಜ್ಯ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
– ನೂರಾರು ಹುದ್ದೆ ಭರ್ತಿಗೆ ಅರ್ಜಿ… ಯಾವ ಯಾವ ಹುದ್ದೆಗೆ ಅರ್ಜಿ?
NAMMUR EXPRESS NEWS
ಬೆಂಗಳೂರು: ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ಕುರಿತು ಅಧಿಸೂಚನೆ ಬಿಡುಗಡೆ ಮಾಡಿದ್ದು,
ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ಸಂಸ್ಥೆಗಳಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು.
ಪ್ರಮುಖ ದಿನಾಂಕಗಳು:
ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ-23-06-2023 ರ ಮಧ್ಯಾಹ್ನ 2 ರಿಂದ
ಇ-ಅಂಚೆ ಕಚೇರಿಗಳಲ್ಲಿ ಶುಲ್ಕ ಪಾವತಿ -26-06-2023 ಬೆಳಗ್ಗೆ 11 ರಿಂದ
ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22-07-2023 ಸಂಜೆ 5.30 ರವರೆಗೆ
ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ -25-07-2023
ಇದನ್ನೂ ಓದಿ : ಗೃಹಜ್ಯೋತಿ ಅರ್ಜಿ ನೋಂದಣಿಗೆ ಹೊಸ ಲಿಂಕ್!
HOW TO APPLY : NEET-UG COUNSELLING 2023