ಬೆಂಗಳೂರು, ಹುಬ್ಬಳ್ಳಿ, ಮೈಸೂರು 904 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
– ರೋಬೋಸಾಫ್ಟ್ ಟೆಕ್ನಾಲಜಿಯಲ್ಲಿ ಉದ್ಯೋಗ
NAMMUR EXPRESS NEWS
ಉಡುಪಿಯ ಪ್ರಖ್ಯಾತ ತಂತ್ರಜ್ಞಾನ ಸಂಸ್ಥೆಯಾದ ರೋಬೋಸಾಫ್ಟ್ ಟೆಕ್ನಾಲಜಿಯಲ್ಲಿ ಟ್ರಾವೆಲ್ ಅಸೋಸೊಯೇಟ್ ಹುದ್ದೆ ಖಾಲಿ ಇದ್ದು, ಯಾವುದೇ ಪದವಿ ಪೂರೈಸಿದ ಟ್ರಾವೆಲ್ ಮತ್ತು ಟೂರಿಸಂ ನಲ್ಲಿ 2 ರಿಂದ 5 ವರ್ಷ ಅನುಭವ ಇರುವ ಅಭ್ಯರ್ಥಿಗಳು ಬೇಕಾಗಿದ್ದಾರೆ.
ಟ್ರಾವೆಲ್ ಮತ್ತು ಟೂರಿಸಂ ಕ್ಷೇತ್ರದ ಒಳಹೊರಗನ್ನು ಬಲ್ಲ, ನಿರರ್ಗಳವಾಗಿ ಮಾತನಾಡಬಲ್ಲ, ಸಂವಹನ ಕಲೆ ಇರುವ, ಇಂಗ್ಲೀಷ್ ಭಾಷಾ ಹಿಡಿತವಿರುವ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ಆಸಕ್ತರು ರೆಸೂಮ್ ಕಳುಹಿಸಬೇಕಾದ ವಿಳಾಸ: [email protected]
ಬೆಂಗಳೂರು, ಹುಬ್ಬಳ್ಳಿ, ಮೈಸೂರು 904 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
904 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ನೈರುತ್ಯ ರೈಲ್ವೆಯಲ್ಲಿ ಬೆಂಗಳೂರು, ಹುಬ್ಬಳ್ಳಿ ಮತ್ತು ಮೈಸೂರು ವಿಭಾಗದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ರೈಲ್ವೆ ನೇಮಕಾತಿ ಘಟಕ ಅರ್ಜಿ ಆಹ್ವಾನಿಸಿದೆ.
ಒಂದು ವರ್ಷದ ಗುತ್ತಿಗೆ ಅವಧಿಗೆ ಈ ಹುದ್ದೆ ನೇಮಕಾತಿ ನಡೆಯಲಿದೆ ಆಸಕ್ತಿ ಹೊಂದಿರುವ ಐಟಿಐ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ವಿವರ: ಮೂರು ವಿಭಾಗಗಳಲ್ಲಿ ಫಿಟ್ಟರ್, ವೆಲ್ಡರ್, ಮೆಕಾನಿಸ್ಟ್, ಎಲೆಕ್ನಿಷಿಯನ್, ಕಾರ್ಪೆಂಟರ್, ಪೈಂಟರ್, ಸ್ಟೆನೋಗ್ರಾಫರ್, ಪ್ರೊಗ್ರಾಮಿಂಗ್ ಅಂಡ್ ಸಿಸ್ಟಂ ಅಡ್ಮಿನಿಸ್ಟೇಷನ್ ಅಸಿಸ್ಟೆಂಟ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುಬ್ಬಳ್ಳಿ ವಿಭಾಗದಲ್ಲಿ ಒಟ್ಟು 237, ಹುಬ್ಬಳ್ಳಿಯ ಕ್ಯಾರೇಜ್ ರಿಪೇರಿ ವರ್ಕ್ಶಾಪ್ನಲ್ಲಿ 217, ಬೆಂಗಳೂರು ವಿಭಾಗದಲ್ಲಿ 230, ಮೈಸೂರು ವಿಭಾಗದಲ್ಲಿ 177, ಮೈಸೂರು ಸೆಂಟ್ರಲ್ ವರ್ಕ್ಶಾಪ್ನಲ್ಲಿ 43 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ, ಐಟಿಐ ಅಥವಾ ಎನ್ ಟಿಸಿಯನ್ನು ಪೂರ್ಣಗೊಳಿಸಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 24 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅರ್ಜಿ ಸಲ್ಲಿಕೆಗೆ ನೈರುತ್ಯ ರೈಲ್ವೆ ಇಲಾಖೆಯ ಅಧಿಕೃತ ಜಾಲತಾಣ swr.indianrailways.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.
ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ವಿಕಲಚೇತ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ. ಇತರೆ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ.
ಈ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇಲ್ಲದೇ, ಸಂಪೂರ್ಣವಾಗಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಈ ಹುದ್ದೆಗಳು ಸಂಪೂರ್ಣ ತಾತ್ಕಾಲಿಕವಾಗಿದ್ದು, ಒಂದು ವರ್ಷದ ಗುತ್ತಿಗೆ ಅವಧಿಗೆ ನೇಮಕ ನಡೆಯಲಿದೆ. ಈ ವೇಳೆ ಅಭ್ಯರ್ಥಿಗಳಿಗೆ ಮಾಸಿಕ ಸ್ಟೈಫಂಡ್ ಅನ್ನು ನೀಡಲಾಗುವುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಜುಲೈ 3ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್ 2ಆಗಿದೆ.
ಇದನ್ನೂ ಓದಿ : ಲಕ್ಷಕ್ಕೆ ಬರುತ್ತಾ ಅಡಿಕೆ ದರ?
HOW TO APPLY : NEET-UG COUNSELLING 2023