ಸರ್ಕಾರಿ ಉದ್ಯೋಗಕ್ಕೆ ಕಾಯುತ್ತಿರುವವರಿಗೆ ಗುಡ್ ನ್ಯೂಸ್
– ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ
NAMMUR EXPRESS NEWS
ರಾಜ್ಯದ ಕಂದಾಯ ಇಲಾಖೆಯ ವ್ಯಾಪ್ತಿಯಲ್ಲಿ ಒಟ್ಟು 9,837 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳು ಮಂಜೂರಾಗಿವೆ. ಕಳೆದ ಮೂರು ವರ್ಷದಿಂದ ನೇಮಕಾತಿ ಪ್ರಕ್ರಿಯೆ ನಡೆಯದಿದ್ದರಿಂದ ಪ್ರಸ್ತುತ ರಾಜ್ಯಾದ್ಯಂತ 2,007 ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದೆ. ಈ ಪೈಕಿ 1,700 ಹುದ್ದೆಗಳಿಗೆ ಶೀಘ್ರ ನೇಮಕ ಮಾಡಿಕೊಳ್ಳುವುದಾಗಿ ಕಂದಾಯ ಇಲಾಖೆ ತಿಳಿಸಿದೆ.
ವಿದ್ಯಾರ್ಹತೆ ಎಷ್ಟು?
ದ್ವಿತೀಯ ಪಿಯುಸಿಯಲ್ಲಿ ಪಾಸಾಗಿರಬೇಕು.
ಸಂಬಳ ಎಷ್ಟು?
ಮಾಸಿಕ 21,000 ರಿಂದ 42,000 ವರೆಗೆ
ಆಯ್ಕೆ ವಿಧಾನ ಹೇಗೆ?
ಈ ಮೊದಲು ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲು, ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳ ನಿಗದಿಪಡಿಸಿದ ವಿದ್ಯಾರ್ಹತೆ ಅಂದರೆ ದ್ವಿತೀಯ ಪಿಯುಸಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ, ನಂತರ ಶಾರ್ಟ್ ಲಿಸ್ಟ್ ಆದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಿ ಅಂತಿಮ ಆಯ್ಕೆ ಮಾಡಿಕೊಳ್ಳಲಾಗುತ್ತಿತ್ತು. ಆದರೆ ಕೋವಿಡ್ ನಂತರ ಪಿಯುಸಿಯಲ್ಲಿ ಅನೇಕ ವಿದ್ಯಾರ್ಥಿಗಳ ಫಲಿತಾಂಶ ಶೇ.100 ಕ್ಕೆ 100 ಬಂದಿರುವುದರಿ೦ದ ಮತ್ತು ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳುವುದು ಸರಿಯಾದ ಮಾರ್ಗವಲ್ಲವೆಂದೂ, ಹೊಸ ಆಯ್ಕೆ ಪ್ರಕ್ರಿಯೆಯಿಂದ ನೇಮಕಾತಿ ಮಾಡಿಕೊಳ್ಳಲು ಕ್ರಮಕೈಗೊಳ್ಳಲಾಗುವುದು. ಈ ಪ್ರಕ್ರಿಯೆ ಹೇಗೆಂದರೆ, ಪಿಯುಸಿ ಶಿಕ್ಷಣ ಅರ್ಹತೆ ಆಧರಿಸಿ ಅರ್ಹ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಹೆಚ್ಚು ಅಂಕ ಗಳಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.
ವಯೋಮಿತಿ:
ಕನಿಷ್ಠ 18 ವರ್ಷದವರಾಗಿರಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿದೆ. ಇನ್ನು ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೇ ಶೀಘ್ರದಲ್ಲಿ ನಡೆಯುವ ಸಾಧ್ಯತೆಗಳಿದೆ.