ಮೈಸೂರಿನಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿ..!
– ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
– ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ
NAMMUR EXPRESS NEWS
ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ಸರ್ಕಾರ ಉದ್ಯೋಗ ಅವಕಾಶ ಇದೆ. ಇಲ್ಲಿ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಿಂದ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಒಟ್ಟು 2 ಪ್ರಾಜೆಕ್ಟ್ ಅಸೋಸಿಯೇಟ್-I ಹುದ್ದೆಗಳು ಖಾಲಿ ಇವೆ. ಸರ್ಕಾರಿ ಉದ್ಯೋಗ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬೇಕು. ಮೇ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಕೂಡಲೇ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಸಂಸ್ಥೆಯು ಅಧಿಸೂಚನೆಯಲ್ಲಿ ಮಾಹಿತಿ ನೀಡಿದೆ.
ನೇಮಕಾತಿ ವಿವರ ಹೀಗಿದೆ
ಸಂಸ್ಥೆ ಹೆಸರು: CFTRI
ಹುದ್ದೆ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್-I
ಒಟ್ಟು ಹುದ್ದೆ: ಎರಡು
ಮಾಸಿಕ ವೇತನ: 25,000 ರೂಪಾಯಿ
ಪೋಸ್ಟಿಂಗ್: ಮೈಸೂರು
ಅರ್ಜಿ ಸಲ್ಲಿಕೆ ಕೊನೆ ದಿನ: 2024 ಮೇ 15.
ಶೈಕ್ಷಣಿಕ ಅರ್ಹತೆ:
ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಇಲ್ಲವೇ ಮಂಡಳಿಯಲ್ಲಿ ಬಯೋಕೆಮಿಸ್ಟ್ರಿ/ಬಯೋಟೆಕ್ನಾಲಜಿ/ ಮೈಕ್ರೋಬಯಾಲಜಿಯಲ್ಲಿ ಎಂ.ಎಸ್ಸಿ, ಎಂ.ಟೆಕ್ ಪೂರ್ಣಗೊಳಿಸಿರುವುದು ಕಡ್ಡಾಯ ಎಂದು ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ಅಧಿಸೂಚನೆ ಮಾಹಿತಿ ನೀಡಿದೆ.
ವಯೋಮಿತಿ ವಿವರ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕೆಂದು ತಿಳಿಸಲಾಗಿದೆ. ಇನ್ನು ಜಾತಿ ಮೀಸಲಾತಿ ಅನುಗುಣವಾಗಿ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿ ಸ್ವಲ್ಪ ಸಡಿಲಿಕೆ ಸಿಗಲಿದೆ ಎಂದು ಕೇಂದ್ರೀಯ ಆಹಾರ ತಾಂತ್ರಿಕ ಸಂಸ್ಥೆ ಹೇಳಿದೆ.
ಆಯ್ಕೆ ಪ್ರಕ್ರಿಯೆಯ ಮಾಹಿತಿ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಪರೀಕ್ಷೆ ಇಲ್ಲ. ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆ ಆಗುವವರಿಗೆ ಮಾಸಿಕ 25,000 ರೂಪಾಯಿ ವೇತನ ಸಹಿತ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಅರ್ಜಿ ಸಲ್ಲಿಸುವ ಯಾವುದೇ ವರ್ಗದ ಅಭ್ಯರ್ಥಿಗಳಿಗೂ ಅರ್ಜಿ ಶುಲ್ಕ ನಿಗದಿ ಮಾಡಲಾಗಿಲ್ಲ. ಉಚಿತವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹದು.
ಅರ್ಜಿ ಸಲ್ಲಿಕೆ ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅದಕ್ಕಾಗಿ ನೀವು ಇಲ್ಲಿ ನೀಡಲಾಗಿರುವ ಅಧಿಕೃತ ಜಾಲತಾಣದ cftri.res.in ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಮೇ 05ರವರೆಗೂ ಕಾಯದೇ ಈ ಕೂಡಲೇ ಅರ್ಜಿ ಹಾಕಬೇಕು.