ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ..!
– 10 ಸಾವಿರ ಶಿಕ್ಷಕರ ನೇಮಕಾತಿ
NAMMUR EXPRESS NEWS
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 10,000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಕುರಿತಾಗಿ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗಾಗಲೇ ಶಿಕ್ಷಣ ಇಲಾಖೆ ನೇಮಕಾತಿಗೆ ಸಂಬಂಧಿಸಿದ ಪ್ರಕ್ರಿಯೆ ಆರಂಭಿಸಿದ್ದು, ಹಣಕಾಸು ಇಲಾಖೆ ಅನುಮತಿ ನೀಡಿದ ಕೂಡಲೇ ಅಧಿಸೂಚನೆ ಹೊರಬೀಳಲಿದೆ.
ರಾಜ್ಯದ ಪ್ರಾಥಮಿಕ ಶಾಲೆಗಳಿಗೆ 35,000 ಪ್ರೌಢಶಾಲೆಗಳಲ್ಲಿ 10,000 ಸೇರಿ 45 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ವತಿಯಿಂದ ಅನುಮತಿ ನೀಡಲಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಅನುಗುಣವಾಗಿ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು. ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಕನಿಷ್ಠ 50,000, ಪ್ರೌಢಶಾಲೆಗಳಲ್ಲಿ ಕನಿಷ್ಠ 5000 ಶಿಕ್ಷಕರ ಕೊರತೆ ಇದೆ. ಶಿಕ್ಷಣ ಇಲಾಖೆ ಹೊಸದಾಗಿ 10 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಿದೆ.