ಶೀಘ್ರ ಒಂದು ಸಾವಿರ ಪಿಎಸ್ಐ ನೇಮಕ?
– ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ
– ಬಿಜೆಪಿ ಸರ್ಕಾರದ ಪಿಎಸ್ಐ ನೇಮಕಾತಿ ಅಕ್ರಮ ತನಿಖೆ
NAMMUR EXPRESS NEWS
ತುಮಕೂರು: ಮುಂದಿನ ದಿನಗಳಲ್ಲಿ ಒಂದು ಸಾವಿರ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ತುಮಕೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಿಎಸ್ಐ ನೇಮಕಾತಿ ಹಗರಣದ ವಿಚಾರ ನ್ಯಾಯಾಲಯದಲ್ಲಿ ಇದೆ, ಇದರಿಂದಾಗಿ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಂಡಿದೆ. ಎಲ್ಲವೂ ಸರಿಯಾಗಿದ್ದರೆ ಈ ಹಿಂದೆಯೇ 545 ಪಿಎಸ್ಐ ನೇಮಕ ಆಗಬೇಕಿತ್ತು. ಈಗ ಮತ್ತೆ 400 ಪಿ ಎಸ್ ಐ ನೇಮಕ ಮಾಡಿಕೊಳ್ಳಲು ಗೃಹ ಇಲಾಖೆ ಪ್ರಸ್ತಾಪ ಸಲ್ಲಿಸಿದೆ. ಎರಡು ಸೇರಿ ಸುಮಾರು ಒಂದು ಸಾವಿರ ಪಿಎಸ್ಐ ನೇಮಕ ಮಾಡಿಕೊಳ್ಳಬೇಕಿದೆ ಎಂದರು. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಪಿಎಸ್ಐ ನೇಮಕಾತಿಯಲ್ಲಿ ನಡೆದಿರುವ ಅಕ್ರಮದ ತನಿಖೆ ಪೂರ್ಣಗೊಂಡು, ಸಮಸ್ಯೆ ಬಗೆ ಹರಿಯಬೇಕಿದೆ ನಂತರವಷ್ಟೇ ಹೊಸ ನೇಮಕಾತಿ ಮಾಡಿಕೊಳ್ಳಲು ಸಾಧ್ಯವಾಗಲಿದೆ ಎಂದು ತಿಳಿಸಿದರು.
ಇದನ್ನೂ ಓದಿ : ಕಾಳುಮೆಣಸು ಬೆಳೆಗಾರರಿಗೆ ಬಂಪರ್!
HOW TO APPLY : NEET-UG COUNSELLING 2023