ಆಳ್ವಾಸ್ ಕಾಲೇಜಲ್ಲಿ ಬೃಹತ್ ಉದ್ಯೋಗ ಮೇಳ
-200ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುವ ನಿರೀಕ್ಷೆ
– ಅಕ್ಟೋಬರ್ 6, 7ಕ್ಕೆ ಬೃಹತ್ ಉದ್ಯೋಗ ಮೇಳ
NAMMUR EXPRESS NEWS
ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಪತಿಷ್ಠಾನದ ವತಿಯಿಂದ ಮೂಡಬಿದಿರೆಯ ವಿದ್ಯಾಗಿರಿ ಕಾಲೇಜು ಆವರಣದಲ್ಲಿ ಅಕ್ಟೋಬರ್ 6 ಮತ್ತು 7 ರಂದು `ಆಳ್ವಾಸ್ ಪ್ರಗತಿ-2023′ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಮಾತನಾಡಿ ಅಕ್ಟೋಬರ್ 6 ಹಾಗೂ 7ಕ್ಕೆ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಈ ಮೇಳದಲ್ಲಿ 200ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುವ ನಿರೀಕ್ಷೆಯಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು 13ನೇ ಆವೃತ್ತಿಯ ಬೃಹತ್ ಉದ್ಯೋಗ ಮೇಳ ಇದಾಗಿದೆ. ಈವರೆಗೆ 182 ಕಂಪೆನಿಗಳು ನೋಂದಾಯಿಸಿಕೊಂಡಿದ್ದು, 200ಕ್ಕೂ ಅಧಿಕ ಕಂಪೆನಿಗಳು ಭಾಗವಹಿಸುವ ನಿರೀಕ್ಷೆಯಿದೆ. ಐಸಿಐಸಿಐ, ಆಯಕ್ಸಿಸ್, ಉಜೀವನ್ ಫೈನಾನ್ಸ್ ಬ್ಯಾಂಕ್, ಇಂಡಸ್ ಇಂಡ್ ಬ್ಯಾಂಕ್, ಕರೂರ್ ವೈಶ್ಯ ಬ್ಯಾಂಕ್ಗಳು ಭಾಗವಹಿಸಲಿವೆ’ ಎಂದು ಮಾಹಿತಿ ನೀಡಿದರು.
ವಿವಿಧ ಕಂಪನಿಗಳು ಭಾಗಿ: “ಗಲ್ಫ್ ಬಹುರಾಷ್ಟ್ರೀಯ ಕಂಪೆನಿಗಳು ಆಳ್ವಾಸ್ ಪ್ರಗತಿಯಲ್ಲಿ ಪಾಲ್ಗೊಳ್ಳಲಿವೆ. ಸಿವಿಲ್ ಮತ್ತು ಮೆಕ್ಯಾನಿಕಲ್ ಎಂಜಿನಿಯರ್ಗಳನ್ನು ಸೌದಿ ಅರೇಬಿಯಾಕ್ಕೆ, ಬುರ್ಜೀಲ್ ಹೋಲ್ಡಿಂಗ್ಸ್ ವೈದ್ಯರು, ನರ್ಸ್ ಮತ್ತು ವೈದ್ಯಕೀಯ ತಂತ್ರಜ್ಞರನ್ನು ಒಮನ್ಗೆ ಹಾಗೂ ಭವಾನಿ ಶಿಪ್ಪಿಂಗ್ ಪ್ರೈ.ಲಿ ಹಲವಾರು ಹುದ್ದೆಗಳ ಅವಕಾಶವನ್ನು ನೀಡುತ್ತಿದೆ. ಟೊಯೊಟೊ ಇಂಡಸ್ಟ್ರೀಸ್ ಎಂಜಿನ್ ಇಂಡಿಯಾ ಪ್ರೈ.ಲಿ, ಹೋಂಡಾ, ಒರ್ಲಿ ಕಾನ್ ಬಲೈರ್ಸ್ ಕೋಟಿನ್ಇಂಡಿಯಾ ಪ್ರೈ.ಲಿ, ವೂನೋ ಮಿಂಡಾ ಸೇರಿದಂತೆ ಇತರ ಕಂಪೆನಿಗಳು ಐಟಿಐ ಮತ್ತು ಡಿಪ್ಲೊಮಾ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ” ಎಂದು ತಿಳಿಸಿದರು.”ಏಸ್ ಡಿಸೈನರ್, ವೋಲ್ವ, ಸನ್ನೆರಾ ಎಂಜಿನಿಯರಿಂಗ್ ಲಿಮಿಟೆಡ್, ಫೌರೆಸಿಯಾ ಎಮಿಷನ್ಸ್ ಕಂಟ್ರೋಲ್ ಟೆಕ್ನಾಲಜೀಸ್ ಇಂಡಿಯಾ ಪ್ರೈ.ಲಿ, ಮೈನಿ ಪ್ರಿಸಿಷನ್ ಇಂಡಿಯಾ ಪ್ರೈ.ಲಿ, ಸ್ವಿಚೇರ್ ಆಯಂಡ್ ಕಂಟ್ರೋಲ್ ಟೆಕ್ನಿಕ್ಸ್ ಸುಮಾರು 200ಕ್ಕೂ ಹೆಚ್ಚು ಉದ್ಯೋಗಾವಕಾಶಗಳನ್ನು ಬಿಇ ಮೆಕ್ಯಾನಿಕಲ್ ಎಂಜಿನಿಯರಿಂಗ್ ಆಕಾಂಕ್ಷಿಗಳಿಗೆ ನೀಡಲಿವೆ” ಎಂದರು.
ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಕಂಪೆನಿಗಳ ವಿವರ ಹಾಗೂ ನವೀಕೃತ ಮಾಹಿತಿಗಳನ್ನು ಅಧಿಕೃತ ವೆಬ್ಸೈಟ್ www.alvaspragati.com ನಲ್ಲಿ ಪ್ರಕಟಿಸಲಾಗುವುದು.
ಆಳ್ವಾಸ್ ಪ್ರಗತಿಯಲ್ಲಿ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳು https://alvaspragati.com/CandidateRegistrationPag e#top ನಲ್ಲಿ ಕಡ್ಡಾಯವಾಗಿ ಉಚಿತ ಆನ್ಲೈನ್ ನೋಂದಣಿ ಮಾಡಿಕೊಳ್ಳಬೇಕು. ಹೊರ ಜಿಲ್ಲೆಗಳಿಂದ ಬರುವ ಉದ್ಯೋಗಾಕಾಂಕ್ಷಿಗಳಿಗೆ ಅಕ್ಟೋಬರ್ 5 ರಿಂದ 7ರ ವರೆಗೂ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದರು.
ಐಟಿಐ, ಪಿಯುಸಿ, ಎಸ್ಎಸ್ಎಲ್ಸಿ ಹಾಗೂ ಇನ್ನೂ ಕಡಿಮೆ ವಿದ್ಯಾಭ್ಯಾಸದ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಅಭ್ಯರ್ಥಿಗಳಿಗೆ ಉಚಿತ ಆನ್ಲೈನ್ ನೋಂದಣಿ ಕಡ್ಡಾಯವಾಗಿದೆ.
ಮಾಹಿತಿಗೆ ಮೊ.90089 07716, 96631 90590, 79752 23865, 97414 40490 ಸಂಪರ್ಕಿಸಬಹುದು ಎಂದು ಮಾಹಿತಿ ನೀಡಿದರು.
ಕಂಪೆನಿ ಹಾಗೂ ಸಂಸ್ಥೆಗಳು ನೇಮಕಾತಿ ಮೂಲಕ ವಿವಿಧ ಪದವಿ ಮತ್ತು ಸ್ನಾತಕೋತ್ತರ ಪದವೀಧಗಳಾದ ವೈದ್ಯಕೀಯ ಮತ್ತು ಅರೆ ವೈದ್ಯಕೀಯ (ಪ್ಯಾರಾಮೆಡಿಕಲ್), ಎಂಜಿನಿಯರಿಂಗ್, ಕಲಾ, ವಾಣಿಜ್ಯ ಮತ್ತು ಆಡಳಿತ ನಿರ್ವಹಣೆ(ಮ್ಯಾನೇಜೆಂಟ್), ಮೂಲ ವಿಜ್ಞಾನ (ಬೇಸಿಕ್ ಸೈನ್ಸ್, ಶುಶೂಷೆ (ನರ್ಸಿಂಗ್), ಐಟಿಐ, ಡಿಪ್ಲೊಮಾ ಹಾಗೂ ಕೌಶಲ ಹೊಂದಿದ ಪಿಯುಸಿ ಅಥವಾ ಎಸ್ಎಸ್ಎಲ್ಸಿ ಮತ್ತು ಇತರ ಅರ್ಹ ಪ್ರತಿಭಾವಂತ ಸುಮಾರು 7 ಸಾವಿರಕ್ಕೂ ಹೆಚ್ಚು ಆಕಾಂಕ್ಷಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಿವೆ ಎಂದು ಮಾಹಿತಿಯನ್ನು ನೀಡಿದ್ದರು.