10 ನೇ ತರಗತಿ ಪಾಸಾದವರಿಗೆ ರೈಲ್ವೆಯಲ್ಲಿ ಕೆಲಸ.!
– ಯಾರು ಅರ್ಜಿ ಸಲ್ಲಿಸಬಹುದು… ಇಲ್ಲಿದೆ ಡೀಟೇಲ್ಸ್
– 1000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ
NAMMUR EXPRESS NEWS
ಭಾರತೀಯ ರೈಲ್ವೆ ಇಲಾಖೆಯು ಉದ್ಯೋಗ ಹುಡುಕಾಟದಲ್ಲಿದ್ದವರಿಗೆ ಸಿಹಿಸುದ್ದಿ ನೀಡಿದ್ದು, ಆಗ್ನೆಯ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ 1000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. 820 ಅಸಿಸ್ಟೆಂಟ್ ಲೋಕೋ ಪೈಲಟ್, 132 ಟೆಕ್ನಿಷಿಯನ್, 64 ಜೂನಿಯರ್ ಎಂಜಿನಿಯ ಹುದ್ದೆಗಳು ಖಾಲಿ ಇವೆ. ಇನಯ ಖಾಲಿ ಇರುವ ಹುದ್ದೆಗಳಿಗೆ ಜುಲೈ 22 ರಿಂದ ಅರ್ಜಿ ಪ್ರಾರಂಭವಾಗಿದೆ. ಎಲ್ಲಾ ನೇಮಕಾತಿಗಳನ್ನು ಸಾಮಾನ್ಯ ಇಲಾಖಾ ಸ್ಪರ್ಧಾತ್ಮಕ ಪರೀಕ್ಷೆ (ಜಿಡಿಸಿಇ) ಕೋಟಾದಡಿ ಭರ್ತಿ ಮಾಡಲಾಗುತ್ತದೆ.
ಅರ್ಹತೆಗಳು :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಪಾಸಾಗಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 42 ವರ್ಷ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಯ ಅಂತಿಮ ಆಯ್ಕೆ ದಾಖಲೆ ಪರಿಶೀಲನೆಯ ನಂತರ ನಡೆಯಲಿದೆ.
ಅಗತ್ಯವಿರುವ ದಾಖಲೆಗಳು :
ಆಧಾರ್ ಕಾರ್ಡ್ , ಪ್ಯಾನ್ ಕಾರ್ಡ್, ಜಾತಿ ಪ್ರಮಾಣಪತ್ರ (ಅನ್ವಯವಾದರೆ) ಪಾಸ್ಪೋರ್ಟ್ ಗಾತ್ರದ ಛಾಯಾಚಿತ್ರ ಮೊಬೈಲ್ ಸಂಖ್ಯೆ, ಇಮೇಲ್ ಐಡಿ ವೆಬ್ ಸೈಟ್ : ವಿವರವಾದ ಅಧಿಸೂಚನೆಗಳು, ಫಾರ್ಮ್ ಭರ್ತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ ಇಲಾಖೆಯ https://secr.indianrailways.gov.in ವೆಬ್ ಸೈಟ್ ಗೆ ಭೇಟಿ ನೀಡಿ.
ಇದನ್ನೂ ಓದಿ : ಕರಾವಳಿಯಲ್ಲಿ ಕೊರಗಜ್ಜನ ಪವಾಡ.!
HOW TO APPLY : NEET-UG COUNSELLING 2023