NITM ಬೆಳಗಾವಿಯಲ್ಲಿ ಉದ್ಯೋಗವಕಾಶ.!
– ಆಸಕ್ತ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ!
– ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ
NAMMUR EXPRESS NEWS
ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಟ್ರೆಡಿಷನಲ್ ಮೆಡಿಸಿನ್ ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಟ್ರೆಡಿಷನಲ್ ಮೆಡಿಸಿನ್ (NITM)
ವೇತನ ಶ್ರೇಣಿ: 18,000 ರಿಂದ 56,900 ರೂ.
ಉದ್ಯೋಗ ಸ್ಥಳ: ಬೆಳಗಾವಿ
ಶೈಕ್ಷಣಿಕ ಅರ್ಹತೆ: ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಟ್ರೆಡಿಷನಲ್ ಮೆಡಿಸಿನ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10th, ITI ಪೂರ್ಣಗೊಳಿಸಿರಬೇಕು.
ವಯೋಮಿತಿ: ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಟ್ರೆಡಿಷನಲ್ ಮೆಡಿಸಿನ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಎಸ್ ಸಿ /ಎಸ್ ಟಿ /ಪಿಡಬ್ಲ್ಯೂ ಡಿ /ಮಹಿಳೆ/ಮಾಜಿ ಸೈನಿಕ ಅಭ್ಯರ್ಥಿಗಳು: ಶುಲ್ಕ ಇಲ್ಲ, ಇತರೆ ಎಲ್ಲಾ ಅಭ್ಯರ್ಥಿಗಳಿ: 300 ರೂ., ಪಾವತಿಸುವ ವಿಧಾನ: ಡಿಮ್ಯಾಂಡ್ ಡ್ರಾಫ್ಟ್
ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ- ದೃಢೀಕರಿಸಿದ ದಾಖಲೆಗಳೊಂದಿಗೆ ಡೈರೆಕ್ಟರ್ , ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟ್ರಡಿಷನಲ್ ಮೆಡಿಸಿನ್ , ನೆಹರು ನಗರ್ , ಬೆಳಗಾವಿ – 590010 ಇವರಿಗೆ 20-09-2023 ರ ಮೊದಲು ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25-08-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 20-09- 2023
ಅಧಿಕೃತ ವೆಬ್ ಸೈಟ್: icmrnitm.res.in