ಕೆಪಿಟಿಸಿಎಲ್ ಸಂಸ್ಥೆಯು 2975 ಹುದ್ದೆಗಳಿಗೆ ನೇಮಕಾತಿ!
* ಕಿರಿಯ ಸ್ಟೇಶನ್ ಅಟೆಂಡಂಟ್, ಕಿರಿಯ ಪವರ್ಮ್ಯಾನ್ ಹುದ್ದೆ
* ಅರ್ಜಿ ಹಾಕಿ: ಅ.21ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ
NAMMUR EXPRESS NEWS
ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ಸಂಸ್ಥೆಯು 2975 ಕಿರಿಯ ಸ್ಟೇಶನ್ ಅಟೆಂಡಂಟ್, ಕಿರಿಯ ಪವರ್ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಹತೆ,10ನೇ, 12ನೇ ತರಗತಿ ಪಾಸಾಗಿರಬೇಕು. ಡಿಪ್ಲೋಮಾ, ಬಿ.ಇ ಅಥವಾ ಬಿ.ಟೆಕ್ ತೇರ್ಗಡೆಯಾಗಿರಬೇಕು.ಅಕ್ಟೋಬರ್.21ರಂದು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕವಾಗಿದೆ.
ನ.20 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಶನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ 2024 ನವೆಂಬರ್ 20ರಂತೆ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷವಾಗಿರಬೇಕು.KPTCL ವಯೋಮಾನ ಸಡಿಲಿಕೆ : ಎಸ್ಸಿ/ಎಸ್ಟಿ/ಕಾಟ್-1. ಅಭ್ಯರ್ಥಿಗಳು:05 ವರ್ಷ ಸಡಿಲಿಕೆ. ಪ್ರವರ್ಗ -2ಎ/2ಬಿ & 3ಬಿ ಅಭ್ಯರ್ಥಿಗಳು: 03 ವರ್ಷ ಸಡಿಲಿಕೆ.