ಪಿಡಿಒ ಆಗ್ಬೇಕಾ?..ಹೊಸ ನೇಮಕಾತಿ ಶುರು!.. ಇಲ್ಲಿದೆ ವಿವರ..!
– ಪಿಡಿಒ ಹುದ್ದೆ ನೇಮಕಾತಿಗೆ ಶೀಘ್ರದಲ್ಲಿ ಅಧಿಸೂಚನೆ
– ಪಿಡಿಒ ಹುದ್ದೆ ನೇಮಕಾತಿಗೆ ಮುಂದಾದ ರಾಜ್ಯ ಸರ್ಕಾರ
NAMMUR EXPRESS NEWS
ಬೆಂಗಳೂರು: ಪಿಡಿಒ ಆಗ್ಬೇಕಾ?..ಹೊಸ ನೇಮಕಾತಿ ಶುರುವಾಗಲಿದ್ದು, ಪಿಡಿಒ ಹುದ್ದೆ ನೇಮಕಾತಿಗೆ ಶೀಘ್ರದಲ್ಲಿ ಅಧಿಸೂಚನೆ ಹೊರ ಬೀಳಲಿದೆ.
ಪಿಡಿಒ ಹುದ್ದೆ ನೇಮಕಾತಿಗೆ ಮುಂದಾದ ರಾಜ್ಯ ಸರ್ಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯು (ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ-RDPR) ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ), ಗ್ರಾಮ ಪಂಚಾಯತಿ ಕಾರ್ಯದರ್ಶಿ (ಗ್ರೇಡ್-1) ಮತ್ತು ಪಂಚಾಯತಿ ಕಾರ್ಯದರ್ಶಿ (ಗ್ರೇಡ್-II) ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಹುದ್ದೆಗಳ ನೇಮಕಕ್ಕೆ ಮುಂದಾಗಿದ್ದು, ಸದ್ಯವೇ ನೇಮಕಾತಿ (PDO ನೇಮಕಾತಿ 2023) ಅಧಿಸೂಚನೆ ಹೊರಬೀಳಲಿದೆ.
ಪಿಡಿಒ ಮತ್ತು ಕಾರ್ಯದರ್ಶಿ ಹುದ್ದೆಗಳು ಖಾಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಭಿವೃದ್ಧಿಕೆಲಸವಾಗುತ್ತಿಲ್ಲ ಎಂಬ ದೂರಿರುವ ಸರ್ಕಾರವು ಆದಷ್ಟು ಬೇಗ ಈ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಮುಂದಾಗಿದ್ದರೆ, ಯಾವ ಗ್ರಾಮ ಪಂಚಾಯಿತಿಗಳಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ಮಾಹಿತಿಯನ್ನು ಈಗ ಸಂಗ್ರಹಿಸಲಾಗುತ್ತಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪಂಚಾಯತ್ ರಾಜ್ ಆಯುಕ್ತಾಲಯದ ನಿರ್ದೇಶಕರು ಈ ಸಂಬಂಧ 15 ರಂದು ರಾಜ್ಯದ ಎಲ್ಲ ಜಿಲ್ಲಾಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು (ಸಿಐಒ) ಪತ್ರ ಬರೆದಿದ್ದು ಖಾಲಿ ಹುದ್ದೆಗಳ ಮಾಹಿತಿ ತುರ್ತಾಗಿ ಅಂದರೆ ಜೂನ್ 17 ರಂದು ಸಂಜೆ 4 ಗಂಟೆಗೆ ಕಳುಹಿಸುವಂತೆ ಕೋರಿದ್ದಾರೆ. ಈ ಮಾಹಿತಿ ಬಂದಕೂಡಲೇ ಖಾಲಿ ಹುದ್ದೆಗಳ ಸಂಖ್ಯೆಯನ್ನು ನೋಡಿಕೊಂಡು ಇಲಾಖೆಯು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿದೆ. ಸರ್ಕಾರ ಕೂಡಲೇ ಅನುಮತಿ ನೀಡುವ ಭರವಸೆ ನೀಡಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಎಷ್ಟು ಹುದ್ದೆಗಳಿಗೆ ನೇಮಕ ಮಾಡಬಹುದು?
ಈ ಹಿಂದಿನ ಬಿಜೆಪಿ ಸರ್ಕಾರವು 570 ಪಂಚಾಯತಿ ಅಭಿವೃದ್ಧಿಅಧಿಕಾರಿ (ಪಿಡಿಒ) ನೇಮಕಕ್ಕೆ ಮುಂದಾಗಿತ್ತು. ಕಳೆದ ಫೆಬ್ರುವರಿಯಲ್ಲಿನಡೆದ ವಿಧಾನಸಭಾ ಅಧಿವೇಶನದಲ್ಲಿ ಈ ಸಂಬಂಧ ಕೇಳಿದ ಪ್ರಶ್ನೆಗೆಉತ್ತರಿಸಿದ ಸರ್ಕಾರ ಈ ನೇಮಕಕ್ಕೆ ಆದಷ್ಟು ಬೇಗನೇ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿತ್ತು. ಆದರೆ ಈ ನೇಮಕ ಪ್ರಕ್ರಿಯೆ ಆರಂಭವಾಗಿಯೇ ಇಲ್ಲ.
ಕಳೆದ ವರ್ಷದ ಸರ್ಕಾರದ ವರದಿ ಪ್ರಕಾರವೇ ರಾಜ್ಯದಲ್ಲಿ 851 ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆ 390 ಗ್ರಾಮ ಪಂಚಾಯತಿ ಕಾರ್ಯದರ್ಶಿ (ಗ್ರೇಡ್-1) ಹುದ್ದೆ ಮತ್ತು 697 ಗ್ರಾಮ ಪಂಚಾಯತಿ ಕಾರ್ಯದರ್ಶಿ (ಗ್ರೇಡ್-1) ಹುದ್ದೆಗಳು ಖಾಲಿ ಇವೆ. ಈ ಸಂಖ್ಯೆ ಇನ್ನಷ್ಟು ಹೆಚ್ಚಿರುವ ಸಾಧ್ಯತೆಗಳಿವೆ.
2016 ರಲ್ಲಿ 815 ಪಿಡಿಒ ಮತ್ತು 809 ಗ್ರಾಮ ಪಂಚಾಯತಿ ಕಾರ್ಯದರ್ಶಿಗಳ ಹುದ್ದೆಗೆ ನೇಮಕಗೊಂಡಿದ್ದು ಬಿಟ್ಟರೆ ಕಳೆದ ಆರು ವರ್ಷಗಳಿಂದ ಮತ್ತೆ ನೇಮಕಾತಿ ನಡೆದಿಲ್ಲ. ಹೀಗಾಗಿ ಖಾಲಿ ಇರುವ ಹುದ್ದೆಗಳ ಸಂಖ್ಯೆ ಹೆಚ್ಚಿದ್ದು, ಎಲ್ಲ ಹುದ್ದೆಗಳಿಗೆ ಒಮ್ಮೆ ನೇಮಕವಾಗುವುದು ಅನುಮಾನ ಎಂದು ಹೇಳಲಾಗುತ್ತಿದೆ. 2016ರಲ್ಲಿ ನಡೆದ ನೇಮಕ ಪ್ರಕ್ರಿಯೆಯಲ್ಲಿ 4,96,873 ಅಭ್ಯರ್ಥಿಗಳು ಭಾಗವಹಿಸಿದ್ದರು. 3,62,899 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಯಾರಿಗೆಲ್ಲಾ ಅವಕಾಶ?
ಅಂಗೀಕೃತಗೊಂಡ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಶಿಕ್ಷಣ ಪಡೆದಿರುವ ಅಭ್ಯರ್ಥಿಗಳು ಪಿಡಿಯೊ ಮತ್ತು ಗ್ರಾಮ ಪಂಚಾಯತಿ ಕಾರ್ಯದರ್ಶಿ (ಗ್ರೇಡ್-1) ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಗ್ರಾಮ ಪಂಚಾಯತಿ ಕಾರ್ಯದರ್ಶಿ (ಗ್ರೇಡ್-II) ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಓದಿದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷ ಮತ್ತು ಗರಿಷ್ಠ 35 ವರ್ಷ. ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷ ವಯೋಮಿತಿ ಸಡಿಲಿಕೆ ಇರಲಿದೆ
ವೇತನ ಎಷ್ಟು?
- ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಯ ವೇತನ: 37,900-70,850
- ಗ್ರಾಮ ಪಂಚಾಯತಿ ಕಾರ್ಯದರ್ಶಿ (ಗ್ರೇಡ್-1) ಹುದ್ದೆಯ ವೇತನ: 27,650-52,650
- ಗ್ರಾಮ ಪಂಚಾಯತಿ ಕಾರ್ಯದರ್ಶಿ (ಗ್ರೇಡ್-1) ಹುದ್ದೆಯ ವೇತನ: 21,400-42,000
- ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಯ ವೇತನ ಶ್ರೇಣಿ: ರೂ. 21,400-42,000
ನೇಮಕ ಹೇಗೆ?
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಭಾಗವಹಿಸಿದ ಶೇಕಡಾವಾರು ಅಂಕ ಆಧಾರದಲ್ಲಿ ಆಯ್ಕೆಮಾಡಿಕೊಳ್ಳುತ್ತಾರೆ. ಈ ಯಾವ ಹುದ್ದೆಗಳಿಗೆ ಈ ಹಿಂದೆ ಪಿಡಿಯೋ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವಾಗ ಸ್ಪರ್ಧಾತ್ಮಕ ಪರೀಕ್ಷೆಯು ಎರಡು ಪ್ರಶ್ನೆ ಪತ್ರಿಕೆಗಳನ್ನು ಒಳಗೊಂಡಿತ್ತು. ಪ್ರಶ್ನೆ ಪತ್ರಿಕೆ-1 ಸಾಮಾನ್ಯ ಜ್ಞಾನಕ್ಕೆ ಸಂಬಂಧಿಸಿದ್ದಾಗಿರುತ್ತಿತ್ತು. ಇದರಲ್ಲಿ ಒಟ್ಟು ನೂರು ಪ್ರಶ್ನೆಗಳಿರಲಿದ್ದು, 200 ಅಂಕಗಳಿಗೆ ಈ ಪರೀಕ್ಷೆ ನಡೆಯುತ್ತಿತ್ತು. ಪತ್ರಿಕೆ-2 ಸಹ ನೂರು ಪ್ರಶ್ನೆಗಳಿರಲಿದ್ದು, 200 ಅಂಕಗಳಿಗೆ ನಡೆಯುತ್ತಿತ್ತು. ಆದರೆ ಈ ಬಾರಿ ಬದಲಾವಣೆ ಮಾಡುವ ಸಾಧ್ಯತೆಗಳಿವೆ.
2016ರಲ್ಲಿ ನೇಮಕವಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಇ) ನಡೆಸಿತು. ಆದರೆ ಈ ಬಾರಿ ಲೋಕಸೇವಾ ಆಯೋಗಕ್ಕೆ (ಕೆಪಿಎಸ್ಸಿ) ಈ ನೇಮಕವನ್ನು ಕರ್ನಾಟಕ ವಹಿಸುವ ಸಾಧ್ಯತೆಗಳಿವೆ. ಹೀಗೆ ಮಾಡಿದಲ್ಲಿ ಆಯೋಗವು ಗ್ರೂಪ್ “ಸಿ” ಹುದ್ದೆಗಳ ನೇಮಕಕ್ಕೆ ನಡೆಸುವ ರೀತಿಯಲ್ಲಿಯೇ ಈ ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗುವುದು. ಗ್ರೂಪ್ ಸಿ ಹುದ್ದೆಗಳಿಗೆ 200 ಅಂಕಗಳಿಗೆ ಬದಲಾಗಿ ನೂರು ಅಂಕಗಳಿಗೆ ಪರೀಕ್ಷೆ ನಡೆಯುತ್ತಿದೆ. ನೇಮಕ ಪ್ರಕ್ರಿಯೆಯಲ್ಲಿ 4,96,873 ಅಭ್ಯರ್ಥಿಗಳು ಭಾಗವಹಿಸಿದ್ದರು. 3,62,899 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.