ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಪಾಪಿಗಳು
* ಕಡೂರಿನಲ್ಲಿ ಅಮಾನವೀಯ ಘಟನೆ
* ಕೆಚ್ಚಲು ಕೊಯ್ದ ಕಿಡಿಗೇಡಿಗಳನ್ನು ಬಂಧಿಸುವಂತೆ ದೂರು
NAMMMUR EXPRESS NEWS
ಕಡೂರು: ತಾಲೂಕಿನ ಚೌಳಹಿರಿಯೂರು ಸಮೀಪದ ತಮ್ಮಿಹಳ್ಳಿಯಲ್ಲಿ ಹಸುವಿ ಕೆಚ್ಚಲು ಕೊಯ್ದು ದುರುಳರು ತಮ್ಮ ವಿಕೃತಿ ಮೆರೆದಿದ್ದಾರೆ. ಗ್ರಾಮದ ಶೇಖರಪ್ಪ ಎಂಬುವರ ಸುಮಾರು 20 ದನಗಳನ್ನು ಕಳ್ಳರು ತಂತಿ ಬೇಲಿಯೊಳಗೆ ಹಿಡಿದು ಕೂಡಿಹಾಕಿ ಬೇರೆಡೆಗೆ ಸಾಗಿಸಲು ಪ್ರಯತ್ನಿಸಿದ್ದಾರೆ ಆ ಯತ್ನ ವಿಫಲಗೊಂಡಾಗ ಒಂದು ಹಸುವಿನ ಕೆಚ್ಚಲು ಕತ್ತರಿಸಿ ಪರಾರಿಯಾಗಿದ್ದಾರೆ. ಬಳಿಕ ಆ ಹಸು ಸತ್ತಿದೆ ಎಂದು ತಿಳಿದುಬಂದಿದೆ.
ಹಸುವಿನ ಕೆಚ್ಚಲು ಕತ್ತರಿಸಿರುವ ಘಟನೆ ಕುರಿತಂತೆ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಶೇಖರಪ್ಪ ಕುಟುಂಬದೊಂದಿಗೆ ಕಡೂರು ಬಿಜೆಪಿ ಯುವ ಮೋರ್ಚಾ ಹಾಗೂ ಬಜರಂಗದಳ ಕಾರ್ಯಕರ್ತರು ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.







