- ಬೆಳಗಾವಿ ಸಿಎಆರ್, ಡಿಎಆರ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಘಟನೆ
ವರದಿ: ಕೀರ್ತಿ
ಬೆಳಗಾವಿ: ಮಾಸ್ಕ್ ಧರಿಸಿದರೆ ಅಭ್ಯರ್ಥಿಗಳ ಮುಖ ಗೊತ್ತಾಗಲ್ಲ ಎಂದು ಸಿಎಆರ್, ಡಿಎಆರ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಪರವಾಗಿ ಪರೀಕ್ಷೆ ಬರೆಯಲು ಬಂದಿದ್ದ ಇಬ್ಬರು ನಕಲಿ ವಿದ್ಯಾರ್ಥಿಗಳು ಪೊಲೀಸರು ಕೈಗೆ ಸಿಕ್ಕಿ ಬಿದ್ದಿದ್ದಾರೆ.
ನಕಲಿ ವಿದ್ಯಾರ್ಥಿಗಳು ಮತ್ತು ಪರೀಕ್ಷೆ ಬರೆಯಲು ನಕಲಿ ವಿದ್ಯಾರ್ಥಿಗಳನ್ನು ಕಳುಹಿಸಿದ ಅಭ್ಯರ್ಥಿಗಳನ್ನೂ ಪೆÇಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಭಾನುವಾರ ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಸಿಎಆರ್, ಡಿಎಆರ್ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆದಿದ್ದವು.ಬೆಳಗಾವಿಯ ಜೈನ್ ಕಾಲೇಜು ಮತ್ತು ವಸಂತ ರಾವ್ ಪೆÇೀತದಾರ್ ಪಾಲಿಟೆಕ್ನಿಕ್ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಬಂದ ಇಬ್ಬರು ನಕಲಿ ಅಭ್ಯರ್ಥಿಗಳನ್ನು ಮೇಲ್ವಿಚಾರಕರು ಪತ್ತೆ ಮಾಡಿದ್ದಾರೆ. ತಕ್ಷಣ ಅವರನ್ನು ಪೆÇಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಗೋಕಾಕ್ನ ರೋಹನ್ ಎನ್ನುವ ಅಭ್ಯರ್ಥಿಯ ಹೆಸರಿನಲ್ಲಿ ಕೃಷ್ಣ ಎನ್ನುವ ಯುವಕ ಪರೀಕ್ಷೆ ಬರೆಯಲು ಬಂದಿದ್ದ ಎಂದು ಪೆÇಲೀಸರು ತಿಳಿಸಿದ್ದಾರೆ. ಮತ್ತೊಬ್ಬ ನಕಲಿ ಅಭ್ಯರ್ಥಿಯ ವಿಚಾರಣೆ ನಡೆಯುತ್ತಿದೆ. ಮಾಸ್ಕ್ ಇರುವುದರಿಂದ ಪತ್ತೆ ಮಾಡಲು ಸಾಧ್ಯವಿಲ್ಲ ಎನ್ನುವ ಕಾರಣಕ್ಕೆ ದುಸ್ಸಾಹಸ ಮಾಡಲು ಹೋಗಿ ಇವರು ಪೆÇಲೀಸರ ಅತಿಥಿಯಾಗಿದ್ದಾರೆ.