- ದಕ್ಷಿಣ ಕನ್ನಡ, ಉಡುಪಿಯಲ್ಲಿ ಎಷ್ಟು ಕೇಸ್?
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದು, ಉಭಯ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಎರಡಂಕಿಗಿಳಿದಿದೆ. ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 99 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿ ಜಿಲ್ಲೆಯಲ್ಲಿ 66 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ದಕ ಜಿಲ್ಲೆಯಲ್ಲಿ ಬುಧವಾರದಂದು 99 ಮಂದಿಯಲ್ಲಿ ಸೋಂಕು ಕಾಣಿಸಿದ್ದು, ಬುಧವಾರ ಮತ್ತೆ 161 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಪರೀಕ್ಷೆಗೊಳಪಟ್ಟವರು-251859 ಮಂದಿ, ಜಿಲ್ಲೆಯಲ್ಲಿ ಪತ್ತೆಯಾದ ನೆಗೆಟಿವ್ ಪ್ರಕರಣಗಳು-221945, ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳು-29914, ಒಟ್ಟು ಗುಣಮುಖರಾಗಿ ಬಿಡುಗಡೆಯಾದವರು-27019, ಬುಧವಾರದಂದು ಸೋಂಕಿಗೆ ಬಲಿಯಾದವರು 3 ಮಂದಿ, ಜಿಲ್ಲೆಯಲ್ಲಿ ಒಟ್ಟು ಸೋಂಕಿಗೆ ಬಲಿಯಾದವರು-671 ಮಂದಿ, ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು-2224 ಮಂದಿ ಎಂಬ ಅಂಕಿಅಂಶ ಲಭ್ಯವಾಗಿದೆ.
ಉಡುಪಿಯಲ್ಲಿ ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ. ಬುಧವಾರದಂದು 66 ಮಂದಿಯಲ್ಲಿ ಪಾಸಿಟಿವ್ ಕಂಡಿದೆ. 125 ಮಂದಿ ಬುಧವಾರ ಗುಣಮುಖರಾಗಿದ್ದಾರೆ. ಒಟ್ಟು 20630 ಮಂದಿ ಗುಣಮುಖರಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರು 181 ಮಂದಿ. 921 ಮಂದಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ.