Categories
ಕರಾವಳಿ

ನಿರುದ್ಯೋಗಿಗಳಿಗೆ ಸಿಹಿ ಸುದ್ದಿ

  • ಫೋಟೋ ಗ್ರಫಿ, ವಿಡಿಯೋಗ್ರಫಿ ಉಚಿತ ತರಬೇತಿಯ

ಮಣಿಪಾಲ: ಉದ್ಯೋಗ ಇಲ್ಲದೆ ಕುಳಿತವರಿಗೆ ಸಿಹಿ ಸುದ್ದಿ. ಬದುಕಲು ದುಡಿಮೆಗೆ ಒಂದು ಕಲೆ ಬೇಕು. ಕೌಶಲ್ಯವೂ ಬೇಕು. ಈ ಹಿನ್ನೆಲೆ ಸ್ವ ಉದ್ಯೋಗದ ಕನಸು ನನಸು ಮಾಡಲು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (CBRSETI) ಮಣಿಪಾಲ ಇವರು ನಿರುದ್ಯೋಗಿ ಸ್ವಉದ್ಯೋಗಾಕಾಂಕ್ಷಿಗಳಿಗಾಗಿ 09 ನವೆಂಬರ್-2020ರಿಂದ 30 ದಿನಗಳ ಫೋಟೋ ಗ್ರಫಿ ಹಾಗೂ ವಿಡಿಯೋಗ್ರಫಿ ಉಚಿತ ತರಬೇತಿಯನ್ನು ಮಣಿಪಾಲದಲ್ಲಿ ಹಮ್ಮಿಕೊಳ್ಳಲಾಗಿದ್ದು, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿಯಲ್ಲಿ ನೆಲೆಸಿರುವ 18 ರಿಂದ 45 ರೊಳಗಿನ ವಯೋಮಾನದ ನಿರುದ್ಯೋಗಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಿದೆ.

ತರಬೇತಿಯಲ್ಲಿ ಊಟ, ವಸತಿ ಸಂಪೂರ್ಣವಾಗಿ ಉಚಿತವಾಗಿದ್ದು, ಸಂಬಂಧಿಸಿದ ಕ್ಷೇತ್ರದ ಬಗ್ಗೆ ವಿಸ್ತಾರವಾಗಿ ತಿಳಿಸುವುದರ ಜೊತೆಗೆ ಉದ್ಯಮಶೀಲತೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿ ಮಾಹಿತಿ ನೀಡಲಾಗುತ್ತದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೂಡಲೇ ತಮ್ಮ ಹೆಸರು, ಪೂರ್ಣವಿಳಾಸ, ಪಿನ್ ಕೋಡ್, ಸಂಪರ್ಕಕ್ಕೆ ಲಭ್ಯವಿರುವ ದೂರವಾಣಿ ಸಂಖ್ಯೆ, ವಯಸ್ಸು, ವಿದ್ಯಾರ್ಹತೆ, ಪಡೆಯಲಿಚ್ಚಿಸಿರುವ ತರಬೇತಿಯ ಹೆಸರು, ಮುಂತಾದ ಮಾಹಿತಿಯೊಂದಿಗೆ ಖಾಲಿ ಹಾಳೆಯಲ್ಲಿ ಅರ್ಜಿಯನ್ನು ಬರೆದು ದಿ:07-11-2020 ರೊಳಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (CBRSETI), ಕೆನರಾ ಬ್ಯಾಂಕ್ ಪ್ರ್ರಧಾನ ಕಛೇರಿ (ಅನೆಕ್ಸ್) ಸಂಕೀರ್ಣ, ಮಣಿಪಾಲ- 576104 ಇಲ್ಲಿಗೆ ತಲುಪುವಂತೆ ಕಳುಹಿಸಿಕೊಡಲು ಕೋರಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.