- ಮಲ್ಲಿಕಾರ್ಜುನ ದೇವಸ್ಥಾನದ ಜಲಪಾತದಲ್ಲಿ ಘಟನೆ
- ದಕ್ಷಿಣ ಕನ್ನಡದ ಸುಳ್ಯ ಸಮೀಪದ ದೇವರ ಗುಂಡಿ
ಮಂಗಳೂರು: ದೇವಸ್ಥಾನಕ್ಕೆ ಸೇರಿದ ದೇವರ ಗುಂಡಿ ಜಲಪಾತದ ಬಳಿ ರೂಪದರ್ಶಿಗಳು ಅರೆಬೆತ್ತಲೆ ಫೋಟೋ ಶೂಟ್ ನಡೆಸಿದ್ದು, ಇದೀಗ ಹಾಟ್ ಹಾಟ್ ಸುದ್ದಿಯಾಗಿದೆ. ಜೊತೆಗೆ ಸ್ಥಳೀಯರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಮೀಪದ ತೋಡಿಕಾನ ಗ್ರಾಮದ ದೇವರಗುಂಡಿ ಜಲಪಾತದಲ್ಲಿ ಬೆಂಗಳೂರು ಮೂಲದ ಇಬ್ಬರು ರೂಪದರ್ಶಿಗಳು ಅರೆಬೆತ್ತಲೆಯಾಗಿ ಫೋಟೋ ಶೂಟ್ ಮಾಡಿಸಿಕೊಂಡಿದ್ದು, ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ದೇವರಗುಂಡಿ ಜಲಪಾತವು ಇಲ್ಲಿನ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಿಸಿದೆ. ಈ ಜಲಪಾತಕ್ಕೆ ಧಾರ್ಮಿಕ ಹಿನ್ನೆಲೆಯಿದೆ. ಶಿವನು ಇಲ್ಲಿಗೆ ಸ್ನಾನಕ್ಕೆ ಬರುತ್ತಿದ್ದ ಎಂಬ ಇತಿಹಾಸವಿದೆ. ಈ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿಗೆ ಸ್ಥಳೀಯರು ದೂರು ನೀಡಿದ್ದಾರೆ. ಆದರೆ ತಾವು ಇದಕ್ಕೆ ಅನುಮತಿ ನೀಡಿಲ್ಲ ಎಂದು ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.