ನಕ್ಸಲ್ ನಾಯಕ ವಿಕ್ರಂ ಗೌಡ ನೇತೃತ್ವದ 6 ಮಂದಿ ಶರಣಾಗತಿಗೆ ಮನಸು?
* ರಾಜ್ಯದಲ್ಲಿ 14 ಮಂದಿ ಶರಣು: ಕೆಲವರು ಎನ್ಕೌಂಟರ್ಗೆ ಬಲಿ
* ಕಾರ್ಯನಿರತವಾಗಿರುವ ಎನ್ಎನ್ಎಫ್ ಯೋಧರ ತಂಡ
* ರಾಜ್ಯದಲ್ಲಿ ನಕ್ಷಲ್ ವಿರುದ್ಧ ಭಾರೀ ಕಾರ್ಯಚರಣೆ
NAMMUR EXPRESS NEWS
ಕಾರ್ಕಳ/ಶೃಂಗೇರಿ: ರಾಜ್ಯದಲ್ಲಿ ದಶಕಗಳ ಹಿಂದೆ ಸಕ್ರಿಯವಾಗಿದ್ದ ನಕ್ಸಲರು ಶರಣಾಗತಿಯತ್ತ ಒಲವು ತೋರಿದ್ದಾರೆ ಎನ್ನಲಾಗಿದೆ. ಶಂಕಿತ ನಕ್ಸಲ್ ನಾಯಕ ವಿಕ್ರಂ ಗೌಡ ನೇತೃತ್ವದ 6 ಮಂದಿ ಶರಣಾಗತಿಗೆ ಒಲವು ತೋರಿದ್ದಾರೆ ಎನ್ನಲಾಗುತ್ತಿದೆ.
ಪಶ್ಚಿಮ ಘಟ್ಟದ ಅರಣ್ಯದಂಚಿನಲ್ಲಿ ಇತ್ತೀಚೆಗೆ ಕಂಡುಬಂದಿದ್ದ ಶಂಕಿತ ನಕ್ಸಲರು ತಪ್ಪಲು ಭಾಗದಲ್ಲೇ ತಳವೂರಿಕೊಂಡಿರುವ ಶಂಕೆಯಿದೆ. ಅಲ್ಲಿ ನಿಯೋಜಿಸಿದ ಎನ್ಎನ್ಎಫ್ ಯೋಧರ ತಂಡ ಈಗಲೂ ಆ ಭಾಗದಲ್ಲಿ ಕಾರ್ಯನಿರತವಾಗಿದೆ. ನಕ್ಸಲ್ ಚಟುವಟಿಕೆ ಸಂಪೂರ್ಣ ತಹಬದಿಗೆ ಬಂದಿದ್ದು ಇದೀಗ ನಕ್ಸಲರು ಶರಣಾಗತಿಗೆ ಮನಸು ಮಾಡುತ್ತಿದ್ದಾರೆ ಎಂಬ ಮಾಹಿತಿ ಹೊರ ಬಂದಿದೆ.
ಸರಕಾರ ಈ ಹಿಂದೆ ಬಿಡುಗಡೆ ಮಾಡಿದ ನಕ್ಸಲರ ಪತ್ತೆಯ ಸೂಚನ ಫಲಕದಲ್ಲಿ 22 ಮಂದಿಯ ಭಾವಚಿತ್ರಗಳಿದ್ದವು. ಅದರಲ್ಲಿ ಕೆಲವರು ಎನ್ಕೌಂಟರ್ಗೆ ಬಲಿಯಾಗಿದ್ದರೆ ಇನ್ನು ಕೆಲವರು ಶರಣಾಗಿದ್ದಾರೆ. ಈಗ ಸಂಖ್ಯೆ ಸುಮಾರು 12ಕ್ಕೆ ಇಳಿದಿದ್ದು, 6ರಿಂದ 8 ಮಂದಿ ಸಕ್ರಿಯರಾಗಿದ್ದಾರೆ ಎನ್ನಲಾಗಿದೆ.
ನಕ್ಸಲ್ ಗುಂಪಿನ ಆಂತರಿಕ ಭಿನ್ನಾಭಿಪ್ರಾಯ, ನಾಗರಿಕರಿಂದ ಬೆಂಬಲ ಕುಸಿತ ಮುಂತಾದ ಕಾರಣದಿಂದ ಶರಣಾಗತಿಗೆ ಯೋಚಿಸುತ್ತಿದ್ದಾರೆ ಎನ್ನಲಾಗುತ್ತಿದೆ.
ರಾಜ್ಯದಲ್ಲಿ 14 ಮಂದಿ ಶರಣು: ರಾಜ್ಯದಲ್ಲಿ ಈವರೆಗೆ 14 ಮಂದಿ ನಕ್ಸಲ್ ಪ್ಯಾಕೇಜ್ನಲ್ಲಿ ಶರಣಾಗಿದ್ದರು. ಅಂಥವರಿಗೆ ಸರಕಾರ ಪ್ಯಾಕೇಜ್ ಘೋಷಿಸಿದೆ. 2010ರಲ್ಲಿ ವೆಂಕಟೇಶ್, ಜಯಾ, ಸರೋಜಾ, ಮಲ್ಲಿಕಾ, 2014ರಲ್ಲಿ ಸಿರಿಮನೆ ನಾಗರಾಜ್, ನೂರ್ ಜಲ್ಫಿಕರ್, 2016ರಲ್ಲಿ ಭಾರತಿ, ಫಾತೀಂ, ಪದ್ಮನಾಭ್, ಪರಶುರಾಮ್, 2017ರಲ್ಲಿ ಕನ್ಯಾಕುಮಾರಿ, ಶಿವು, ಚೆನ್ನಮ್ಮ, ಜಿಲ್ಲಾಡಳಿತದ ಮೂಲಕ ಶರಣಾಗಿದ್ದರು