Categories
ಕರಾವಳಿ

ಶಕ್ತಿ ಯೋಜನೆ ಬಗ್ಗೆ ಡಾ.ವೀರೇಂದ್ರ ಹೆಗ್ಗಡೆ ಮೆಚ್ಚುಗೆ!

ಶಕ್ತಿ ಯೋಜನೆ ಬಗ್ಗೆ ಡಾ.ವೀರೇಂದ್ರ ಹೆಗ್ಗಡೆ ಮೆಚ್ಚುಗೆ!
– ನಿಮ್ಮ ಹೆಸರಿನಲ್ಲಿ ಶ್ರೀ ಮಂಜುನಾಥ ಸ್ವಾಮಿಗೆ ಸೇವೆ ಮತ್ತು ಕಾಣಿಕೆ ಸಲ್ಲಿಸುತ್ತಿದ್ದಾರೆ: ಪತ್ರದಲ್ಲಿ ಮೆಚ್ಚುಗೆ

NAMMUR EXPRESS NEWS
ಧರ್ಮಸ್ಥಳ: ನಿಮ್ಮ ಹೆಸರಿನಲ್ಲಿ ಶ್ರೀ ಮಂಜುನಾಥ ಸ್ವಾಮಿಗೆ ಸೇವೆ ಮತ್ತು ಕಾಣಿಕೆ ಸಲ್ಲಿಸುತ್ತಿದ್ದಾರೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಮುಖ್ಯಮತ್ರಿ ಸಿದ್ದರಾಮಯ್ಯ ಅವರ ಬಜೆಟ್ ಗೆ ಮೆಚ್ಚುಗೆ ಸೂಚಿಸಿ ಪತ್ರ ಬರೆದಿದ್ದಾರೆ.
‘ನಿಮ್ಮ ಹೆಸರಿನಲ್ಲಿ ಶ್ರೀ ಮಂಜುನಾಥ ಸ್ವಾಮಿಗೆ ಸೇವೆ ಮತ್ತು ಕಾಣಿಕೆ ಸಲ್ಲಿಸುತ್ತಿದ್ದಾರೆ’ಮುಖ್ಯಮತ್ರಿ ಸಿದ್ದರಾಮಯ್ಯ ಅವರಿಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಅಭಿನಂದನೆ ಸಲ್ಲಿಸಿ ಪತ್ರ ಬರೆದಿದ್ದಾರೆ
ಸಿದ್ದರಾಮಯ್ಯ ಮಂಡಿಸಿದ 14ನೇ ಬಜೆಟ್ಟನ್ನು ಶ್ಲಾಘಿಸಿದ್ದು ಅಲ್ಲದೆ ಶಕ್ತಿ ಯೋಜನೆಗೆ ಸಿಕ್ಕಿರುವ ಜನಮನ್ನಣೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅನೇಕ ಯೋಜನೆಗಳ ಮೂಲಕ ಜನರಿಗೆ ಉಪಯುಕ್ತ ಕಾರ್ಯಕ್ರಮಗಳನ್ನು ನೀಡಿದ್ದೀರಿ. ಧರ್ಮಸ್ಥಳ ಕ್ಷೇತ್ರಕ್ಕೆ ಬರುತ್ತಿರುವ ಭಕ್ತರು, ವಿಶೇಷವಾಗಿ ಮಹಿಳೆಯರು ನಿಮ್ಮ ಹೆಸರಿನಲ್ಲಿ ಶ್ರೀ ಮಂಜುನಾಥ ಸ್ವಾಮಿಗೆ ಸೇವೆ ಮತ್ತು ಕಾಣಿಕೆ ಸಲ್ಲಿಸುತ್ತಿದ್ದಾರೆ.
ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿ ಪ್ರೋತ್ಸಾಹಿಸಿರುವ ವಿಚಾರ ತಿಳಿದು ಇಡೀ ಸಮಾಜಕ್ಕೆ ಸಂತೋಷವಾಗಿದೆ. ಹೀಗಾಗಿ ಎಲ್ಲರ ಪರವಾಗಿ ಅಭಿನಂದನೆಗಳು. ಅವಕಾಶ ಇದ್ದಾಗ ಕ್ಷೇತ್ರಕ್ಕೆ ಬಂದು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ಹೋಗುವಂತೆ ಹೆಗ್ಡೆಯವರು ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಅಡಿಕೆ ದರ ಎಷ್ಟಿದೆ..? ಪ್ರಮುಖ ಮಾರುಕಟ್ಟೆಯಲ್ಲಿ ಏನಿದೆ ದರ?

HOW TO APPLY : NEET-UG COUNSELLING 2023

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.