ಬಿ.ಸಿ.ರೋಡ್ ಬಿಸಿಬಿಸಿ!
– ಬಿ.ಸಿ.ರೋಡ್ ಚಲೋಗೆ ಸಾವಿರಾರು ಜನ
– ಶರಣ್ ಪಂಪ್ ವೆಲ್ ಸೇರಿ ಅನೇಕರ ಸವಾಲು ಸ್ವೀಕಾರ
– ಭಾರೀ ಪೊಲೀಸ್ ಬಂದೋಬಸ್ತ್
– ಬಂಟ್ವಾಳ ವ್ಯಾಪ್ತಿಯಲ್ಲಿ ಮದ್ಯದಂಗಡಿ ಬಂದ್!
NAMMUR EXPRESS NEWS
ಬಂಟ್ವಾಳ : ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಸವಾಲನ್ನು ಭಜರಂಗದಳ-ವಿ.ಎಚ್.ಪಿ ಸ್ವೀಕರಿಸಿ ಬಿ.ಸಿ.ರೋಡ್ ಚಲೋ ಕರೆ ನೀಡಿತು. ಇದರ ಬೆನ್ನಲ್ಲೇ ಸೋಮವಾರ ಬೆಳಿಗ್ಗೆ ಬಿಸಿರೋಡಿನ ರಕ್ತೇಶ್ವರಿ ದೇವಸ್ಥಾನ
ದ ಮುಂಭಾಗಕ್ಕೆ ಅಸಂಖ್ಯಾತ ಕಾರ್ಯಕರ್ತರು ನೆರೆದು ಘೋಷಣೆಗಳನ್ನು ಕೂಗಿದರು.
ಜನಸ್ತೋಮದ ನಡುವೆ ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹಕಾರ್ಯವಾಹ ಶರಣ್ ಪಂಪ್ ವೆಲ್ ಭೇಟಿ ನೀಡಿ, ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಪ್ ನ ಸವಾಲಿಗೆ ಉತ್ತರಕೊಡಲು ಬಂದಿದ್ದೇನೆ ಎಂದು ಬಹಿರಂಗ ಘೋಷಣೆ ಮಾಡಿದರು.
ಆರಂಭದಲ್ಲಿ ಜಮಾಯಿಸಿದ ಕಾರ್ಯಕರ್ತರು ಘೋಷಣೆ ಕೂಗೂತ್ತಾ ಪೋಲೀಸರ ತಡೆಯನ್ನು ಲೆಕ್ಕಿಸದೆ ಮುಂದೆ ಸಾಗಿದರು. ಈ ವೇಳೆ ಪೋಲೀಸರು ಹ ಕಾರ್ಯಕರ್ತರ ನಡುವೆ ನೂಕಾಟ ತಳ್ಳಾಟ ನಡೆಯಿತು. ಪರಿಸ್ಥಿತಿ ಕೈ ಮೀರಿಹೋಗುವ ಹಂತಕ್ಕೆ ತಲುಪಿದಾಗ ಪೋಲೀಸರು ಬಸ್ ಗಳನ್ನು ರಸ್ತೆಗೆ ಅಡ್ಡಲಾಗಿ ಇಟ್ಟು ಕಾರ್ಯಕರ್ತರಿಗೆ ತಡೆಯೊಡ್ಡಿದರು.
ಬಳಿಕ ಹೆದ್ದಾರಿಯಲ್ಲಿ ಕೆಲಹೊತ್ತು ಕಾರ್ಯಕರ್ತರು ಘೋಷಣೆ ಕೂಗಿದರು. ಶರಣ್ ಪಂಪ್ ವೆಲ್ಅವರಿಗೆ ಸವಾಲು ಹಾಕಿರುವ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಅವರ ವಿರುದ್ಧ ಘೋಷಣೆ ಕೂಗಿದರು.
ಮಾತನಾಡಿ, ಬಿ.ಸಿರೋಡಿನ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಅವರ ಸವಾಲು ಸ್ವೀಕರಿಸಿ ಬಿ.ಸಿರೋಡಿಗೆ ಬಂದಿದ್ದೇನೆ. ಇನ್ನೂ ಮುಂದೆಯೂ ಇಂತಹ ಸವಾಲು ಸ್ವೀಕರಿಸಲು ತಯಾರಾಗಿದ್ದೇವೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿ ಜನ ಸೇರುವ ಮೂಲಕ ಹಿಂದುತ್ವಕ್ಕೆ ಜಯಸಿಕ್ಕಿದೆ. ಇಂತಹ ಸವಾಲುಗಳು ಹಿಂದೂ ಕಾರ್ಯಕರ್ತರಿಗೆ ಇದೇ ಮೊದಲಲ್ಲ,ಸಾಕಷ್ಟು ಕಾರ್ಯಕರ್ತರು ಪ್ರಾಣವನ್ನು ಕೊಟ್ಟಿದ್ದಾರೆ,ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.ಜೊತೆಗೆ ಜೈಲಿಗೂ ಹೋಗಿದ್ದಾರೆ .ನಾಗಮಂಗಲದ ಗಣೇಶ ಚತುರ್ಥಿಯ ಮೆರವಣಿಗೆ ಸಂದರ್ಭದಲ್ಲಿ ಕಿಡಿಗೇಡಿಗಳು ಹಿಂಸೆ ಎಬ್ಬಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಹೇಳಿಕೆಯನ್ನು ಕೊಟ್ಟಿದ್ದೇವೆ.ಆದರೆ ಆತ ಅದಕ್ಕೆ ಬಿಸಿರೋಡಿಗೆ ಆಗಮಿಸುವಂತೆ ಸವಾಲು ಹಾಕಿದ್ದ. ಆತನ ಸವಾಲಿಗೆ ಉತ್ತರವಾಗಿ ನಾವು ಇಂದು ಬಿ.ಸಿರೋಡಿನಲ್ಲಿ ಸೇರಿದ್ದೇವೆ. ಮುಂದೆ ಅವಶ್ಯಕತೆ ಬಿದ್ದರೆ ಆತ ಹೇಳಿದಂತೆ ಮಸೀದಿಗೆ ಹೋಗುವುದಕ್ಕೂ ಸಿದ್ದರಿದ್ದೇವೆ. ಇದು ಶರಣ್ ಒಬ್ಬನಿಗೆ ಹಾಕಿದ ಸಾವಲು ಅಲ್ಲ ಇಡೀ ಹಿಂದೂ ಕಾರ್ಯಕರ್ತರಿಗೆ ಹಾಕಿದ ಸವಾಲು ಎಂದು ಅವರು ತಿಳಿಸಿದರು.ಯಾರಿಗೂ ಆಹ್ವಾನ ನೀಡದೆ ತಾವೆಲ್ಲರೂ ಆಗಮಿಸಿದ್ದಕ್ಕೆ ಧನ್ಯವಾದ ಸಮರ್ಪಿಸುತ್ತಿದ್ದೇನೆ ಎಂದು ಹೇಳಿದರು
ಐಜಿಪಿ ಅಮಿತ್ ಸಿಂಗ್,ಎಸ್.ಪಿ.ಯತೀಶ್ ಎನ್ .ಎ.ಸಿ.ಹರ್ಷವರ್ದನ್,ತಹಶಿಲ್ದಾರ್ ಅರ್ಚನಾ ಭಟ್ ಅವರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು ಬಿ.ಸಿ.ರೋಡ್ ನೆಲ್ಲಿ ಪೊಲೀಸ್’ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಹೆಚ್ಚುವರಿ ಪೊಲೀಸರ ನಿಯನ ಮಾಡಲಾಗಿತ್ತು.
ಹಿಂದೂ ಂಘಟನೆಯ ಪ್ರಮುಖರಾದ ಪ್ರಸಾದ್ ಕುಮಾರ್ ರೈ ಬಂಟ್ವಾಳ, ಭಾಸ್ಕರ್ ಧರ್ಮಸ್ಥಳ, ನವೀನ್ ನೆರಿಯಾ, ಭುಜಂಗ ಕುಲಾಲ್, ಗುರುರಾಜ್ ಬಂಟ್ವಾಳ, ನರಸಿಂಹ, ಮಹೇಶ್ ಬೈಲೂರು, ಸುಮಿತ್ ಧರೆಗುಡ್ಡೆ, ಕೃಷ್ಣಪ್ರಸಾದ್, ಮಿಥುನ್ ಕಲ್ಲಡ್ಕ,ನವೀನ್ ಮೂಡುಶೆಡ್ಡೆ, ಸಚಿನ್ ಮೆಲ್ಕಾರ್, ಚೆನ್ನಪ್ಪ ಕೋಟ್ಯಾನ್, ದಿನೇಶ್ ಅಮ್ಮೂರು,ಸಂದೇಶ್ ಶೆಟ್ಟಿ ಅರೆಬೆಟ್ಟು, ಗೋವಿಂದ ಪ್ರಭು, ಪುರುಷೋತ್ತಮ ಸಾಲಿಯಾನ್, ರಾಮ್ ದಾಸ್ ಬಂಟ್ವಾಳ ಮತ್ತಿತರ ಪ್ರಮುಖರು ಇದ್ದರು.
ಬಂಟ್ವಾಳ ವ್ಯಾಪ್ತಿಯಲ್ಲಿ ಮದ್ಯದಂಗಡಿ ಬಂದ್!
ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಸೀದಿಗಳಲ್ಲಿ ಧಾರ್ಮಿಕ ಕಾರ್ಯಕ್ರಮ ಮತ್ತು ಮೆರವಣಿಗೆಗಳು ನಡೆಯಲಿರುವ ಬಗ್ಗೆ ರಂದು ಬಂಟ್ವಾಳ ಪುರಸಭೆಯ ಸದಸ್ಯ ಶರೀಫ್ ಎಂಬವರು ವಿಶ್ವ ಹಿಂದು ಪರಿಷತ್ತಿನ ಪ್ರಾಂತೀಯ ಕಾರ್ಯದರ್ಶಿ ಶರಣ್ ಪಂಪೈಲ್ ರವರನ್ನು ಉದ್ದೇಶಿಸಿ ವ್ಯತಿರಿಕ್ತ ಹಾಗೂ ಅನುಚಿತ ಮಾತುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ವಿವಿಧ ಸಂಘಟನೆಯವರು ಸವಾಲಾಗಿ ಸ್ವೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಬಿ.ಸಿ.ರೋಡ್ ಚಲೋ ಎಂಬ ಸಂದೇಶದೊಂದಿಗೆ ಬಿ.ಸಿ.ರೋಡ್ ಜಂಕ್ಷನ್ ನಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಪಾಲ್ಗೊಂಡ ಕಾರ್ಯಕರ್ತರು ಅಲ್ಲಲ್ಲಿ ಸೇರಿಕೊಂಡು ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆಗಳಿದ್ದು, ಬಂಟ್ವಾಳ ನಗರ ಕೋಮು ಸೂಕ್ಷ್ಮ ಪ್ರದೇಶವಾಗಿದ್ದು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಅಬಕಾರಿ ಕಾಯಿದೆ, 1965 ಸೆಕ್ಷನ್ 21(1) ರಡಿಯಲ್ಲಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಯಿಸಿ ಬಂಟ್ವಾಳ ುಸಭಾ ವ್ಯಾ್ತಿಯಲ್ಲಿ ಬರುವ ಎಲ್ಲಾ ಮದ್ಯದಂಗಡಿಗಳಲ್ಲಿ ಮುಂದಿನ 48 ಗಂಟೆಗಳ ಅವಧಿಯವರೆಗೆ ಎಲ್ಲಾ ವಿಧದ ಅಮಲು ಪದಾರ್ಥಗಳ ಮಾರಾಟವನ್ನು ನಿಷೇಧಿಸುವಂತೆ ಆದೇಶಿಸಿದ್ದಾರೆ.