Categories
ಕರಾವಳಿ

ಬಿಎಂಡಬ್ಲ್ಯೂ ಕಾರು ಚಲಿಸುತ್ತಿರುವಾಗಲೇ ಬೆಂಕಿಗೆ ಆಹುತಿ!

ಬಿಎಂಡಬ್ಲ್ಯೂ ಕಾರು ಚಲಿಸುತ್ತಿರುವಾಗಲೇ ಬೆಂಕಿಗೆ ಆಹುತಿ!
– ಮಂಗಳೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ
– ಸ್ಥಳದಲ್ಲೇ ಸುಟ್ಟು ಕರಕಲಾದ ಕಾರು: ಅಪಾಯದಿಂದ ಪಾರು

NAMMUR EXPRESS NEWS
ಸುರತ್ಕಲ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬಿಎಂಡಬ್ಲ್ಯೂ ಕಾರೊಂದು ಬೆಂಕಿಗೆ ಆಹುತಿಯಾಗಿರುವ ಘಟನೆ ಸುರತ್ಕಲ್ ಎನ್ಐಟಿಕೆ ಹಳೆ ಟೋಲ್ ಗೇಟ್ ಬಳಿ ಸೆ. 5ರ ಗುರುವಾರ ಬೆಳಗ್ಗೆ ವರದಿಯಾಗಿದೆ.
ಸುಟ್ಟು ಕರಕಲಾದ ಕಾರು ಉಡುಪಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರು ಕಡೆ ತೆರಳುತ್ತಿತ್ತು ಎನ್ನಲಾಗಿದೆ.
ಎನ್ ಐಟಿಕೆ ಬಳಿ ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎಂದು ತಿಳಿದು ಬಂದಿದೆ. ಕಾರಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.