ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಬಾಲಿವುಡ್ ನಟಿ ಭೇಟಿ, ವಿಶೇಷ ಪೂಜೆ!
– ಸುಬ್ರಹ್ಮಣ್ಯನ ಮೊರೆ ಹೋದ ಕತ್ರಿನಾ ಕೈಫ್
– ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ ಪೂಜೆ ನಡೆಸಿದ ಪ್ರಾರ್ಥನೆ
NAMMUR EXPRESS NEWS
ಮಂಗಳೂರು: ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರು ಮಾ. 11ರಂದು ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ತನ್ನ ಸ್ನೇಹಿತೆಯರೊಂದಿಗೆ ದೇಗುಲಕ್ಕೆ ಭೇಟಿ ನೀಡಿದ ಕತ್ರಿನಾ, ಸರ್ಪ ಸಂಸ್ಕಾರ ಪೂಜೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಸಾಮಾನ್ಯವಾಗಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮದುವೆಯಾಗದವರು, ಮಕ್ಕಳಾಗದವರು ಹೆಚ್ಚಾಗಿ ಭೇಟಿ ನೀಡುತ್ತಾರೆ. ದೋಷ ನಿವಾರಣೆಗೆ ಅನೇಕರು ಸರ್ಪ ಸಂಸ್ಕಾರ ಪೂಜೆ ನೆರವೇರಿಸುತ್ತಾರೆ. ಇದೀಗ ಬಾಲಿವುಡ್ ನಟಿ ಕತ್ರಿನಾ ಕೂಡ ಸುಬ್ರಹ್ಮಣ್ಯನ ಮೊರೆ ಹೋಗಿದ್ದಾರೆ.
ಮಾ. 11 ಮತ್ತು 12ರಂದು ತಲಾ ನಾಲ್ಕರಿಂದ ಐದು ಗಂಟೆಗಳ ಕಾಲ ಎರಡು ಹಂತಗಳಲ್ಲಿ ಪೂಜೆಯನ್ನು ನಡೆಸಲಾಗುತ್ತದೆ.
ದೇವಸ್ಥಾನದ ವಿಐಪಿ ಅತಿಥಿ ಗೃಹದಲ್ಲಿ ಉಳಿದುಕೊಳ್ಳಲಿರುವ ಕತ್ರಿನಾ ಮಾ. 13ರಂದು ಮಧ್ಯಾಹ್ನ 2 ಗಂಟೆಯ ವೇಳೆಗೆ ಧಾರ್ಮಿಕ ಕ್ರಿಯೆಯನ್ನು ಪೂರ್ಣಗೊಳಿಸುವ ನಿರೀಕ್ಷೆಯಿದೆ.
