ಐವನ್ ಡಿಸೋಜ ಮನೆಯಲ್ಲಿ ಉಪಹಾರ ಕೂಟ
– ಸ್ಪೀಕರ್ ಖಾದರ್, ಸಭಾಪತಿ ಹೊರಟ್ಟಿ, ಸಚಿವ ದಿನೇಶ್ ಗುಂಡೂರಾವ್ ಸೇರಿ ಅನೇಕರು ಹಾಜರ್
– ಡಿಸೋಜ ಅವರಿಗೆ ಶುಭ ಕೋರಿದ ರಾಜಕೀಯ ನಾಯಕರು
NAMMUR EXPRESS NEWS
ಮಂಗಳೂರು: ವಿಧಾನ ಪರಿಷತ್ಗೆ ನೂತನವಾಗಿ ಆಯ್ಕೆಯಾದ ಐವನ್ ಡಿಸೋಜ ಅವರ ಮನೆಯಲ್ಲಿ ಉಪಹಾರ ಕೂಟ ಇತ್ತೀಚಿಗೆ ನಡೆದಿದ್ದು, ಸ್ಪೀಕರ್ ಯುಟಿ ಖಾದರ್, ಸಭಾಪತಿ ಬಸವರಾಜ ಹೊರಟ್ಟಿ ಸೇರಿ ಅನೇಕರು ಭಾಗಿಯಾಗಿ ಶುಭಾಶಯ ಸಲ್ಲಿಸಿದ್ದಾರೆ.
ವಿಧಾನ ಮಂಡಲದ ಕಲಾಪಗಳಲ್ಲಿ ಸಕ್ರಿಯವಾಗಿ ಸದಸ್ಯರು ಕಾರ್ಯ ನಿರ್ವಹಿಸಿದರೆ ಜನರಿಗೆ ನ್ಯಾಯ ಸಿಗಲು ಸಾಧ್ಯ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.
ವಿಧಾನ ಪರಿಷತ್ಗೆ ನೂತನವಾಗಿ ಆಯ್ಕೆಗೊಂಡಿರುವ ಸದಸ್ಯರಾದ ಐವನ್ ಡಿಸೋಜಾ ಅವರು ಇಂದು ತಮ್ಮ ಮನೆಯಲ್ಲಿ ಏರ್ಪಡಿಸಿದ್ದ ಉಪಹಾರ ಕೂಟದಲ್ಲಿ ಭಾಗವಹಿಸಿ ಅವರು ಮಾತನಾಡಿದ್ದು, ವಿಧಾನ ಮಂಡಲಗಳಲ್ಲಿ ಚುನಾಯಿತರಾದ ಜನಪ್ರತಿನಿಧಿಗಳು ಸಕ್ರಿಯವಾಗಿ ಭಾಗವಹಿಸಿ, ಜನರ ಸಮಸ್ಯೆಗಳನ್ನು ಉನ್ನತ ವೇದಿಕೆಯಲ್ಲಿ ಚರ್ಚೆ ನಡೆಸಿದರೆ, ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಿದಂತಾಗುತ್ತದೆ ಎಂದರು.
ಈ ಉಪಹಾರ ಕೂಟದಲ್ಲಿ ಸ್ಪೀಕರ್ ಯು.ಟಿ ಖಾದರ್, ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ನ ಸದಸ್ಯರಾದ ಡಾ.ಮಂಜುನಾಥ ಭಂಡಾರಿ, ಹರೀಶ್ ಕುಮಾರ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಎಐಸಿಸಿ ಕಾರ್ಯದರ್ಶಿ ಪಿವಿ ಮೋಹನ್, ಕೆಪಿಸಿಸಿ ಕಾರ್ಯದರ್ಶಿ ಇನಾಯತ್ ಆಲಿ, ಫಾದರ್ ಮುಲ್ಲರ್ಸ್ ಕಾಲೇಜಿನ ಆಡಳಿತ ನಿರ್ದೇಶಕ ರೆ .ಪಾ. ಅಜಿತ್ ಮಿನೇಜಸ್, ಸಂತ ಅಂತೋನಿ ಆಶ್ರಮದ ನಿರ್ದೇಶಕ ರೆ.ಪಾ.ಜೆ.ಬಿ. ಕ್ರಾಸ್ತಾ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಕೆ. ಅಶ್ರಫ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.