ಬಜೆಟ್ ನಲ್ಲಿ ಕರಾವಳಿಗೆ ಬಂಪರ್!
– 20 ಸಾವಿರ ಕೋಟಿ ಹೂಡಿಕೆಗೆ ರೆಡಿಯಾದ ಮುಖ್ಯಮಂತ್ರಿ ಸಿದ್ಧರಾಮಯ್ಯ
– ಬಂದರುಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ
– ಮೀನುಗಾರಿಕೆ, ಮೂಲ ಸೌಕರ್ಯ, ಪ್ರವಾಸೋದ್ಯಮಕ್ಕೆ ಒತ್ತು
NAMMUR EXPRESS NEWS
ಮಂಗಳೂರು: ಬಜೆಟ್ನಲ್ಲಿ ಬಂದರು ಮತ್ತು ಒಳನಾಡಿನ ಅಭಿವೃದ್ಧಿಗೆ ಸರ್ಕಾರ ಚಿತ್ತಹರಿಸಿದೆ. ರಾಜ್ಯದ 320 ಕಿ.ಮೀಟರ್ ಉದ್ದದ ಕರಾವಳಿ ತೀರಗಳ ಸಮರ್ಪಕ ಬಳಕೆಗೆ ಒತ್ತು ನೀಡಲು ಮಂದಾಗಿದೆ. ಬಂದರು ಮತ್ತು ರೈಲುಗಳು ವಿಮಾನ ಸಂಪರ್ಕವನ್ನ ಸುಗಮಗೊಳಿಸಲು ಯೋಜನೆ ಹಾಕಿಕೊಂಡಿದೆ. ಹೀಗಾಗಿ ಕೆಲವು ವರ್ಷಗಳಲ್ಲಿ ಅಂದಾಜು 20 ಸಾವಿರ ಕೋಟಿ ಹೂಡಿಕೆ ಮಾಡುವ ಗುರಿಯನ್ನು ಸಿದ್ದರಾಮಯ್ಯ ಸರ್ಕಾರ ಹೊಂದಿದೆ.2024-2025ನೇ ಸಾಲಿನ ಬಜೆಟ್ನಲ್ಲಿ ಸಮುದ್ರ ಸಾರಿಗೆ, ಸರಕು ಸಾಗಣೆ, ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಒತ್ತು ನೀಡಿದೆ. ರಾಜ್ಯದ ಜಲ ಸಾರಿಗೆ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೂಡಿಕೆ ಮಾಡಲು ಮುಂದಾಗಿದೆ. ಖಾಸಗಿ ಹೂಡಿಕೆಗಳನ್ನ ಆಕರ್ಷಿಸಲು ಕರ್ನಾಟಕ ಜಲಸಾರಿಗೆ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ.ಇನ್ನು ಸಾಗರ ಮಾಲಾ ಯೋಜನೆಯಡಿ ಕಡಲ ತೀರದ ವ್ಯಾಪಾರಕ್ಕೆ ಆದ್ಯತೆ ನೀಡಿದೆ. ಅಂದಾಜು 1,017 ಕೋಟಿ ವೆಚ್ಚದಲ್ಲಿ 26 ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ತಿಳಿಸಿದೆ.
ಇನ್ನೂ 1,145 ಕೋಟಿ ರೂಪಾಯಿ ಮೊತ್ತದ ಕಾಮಗಾರಿಗಳ ಯೋಜನಾ ವರದಿ ತಯಾರಿಸಿದೆ. 12 ಕಾಮಗಾರಿಗಳ ವರದಿಗಳನ್ನ ಕೇಂದ್ರದ ಅನುಮೋದನೆಗೆ ಸಲ್ಲಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕೇಣಿಯಲ್ಲಿ 30 MTPA ಸರ್ವಋುತು ಬಂದರು ನಿರ್ಮಾಣ ಮಾಡಲು ಸರ್ಕಾರ ಯೋಜನೆ ಹಾಕಿಕೊಂಡಿದೆ. 4,200 ಕೋಟಿ ವೆಚ್ಚದಲ್ಲಿ ಹೊಸ ಆಳಸಮುದ್ರ ಸರ್ವಋತು ಬಂದರು ನಿರ್ಮಿಸುವುದಾಗಿ ಹೇಳಿದೆ. ಇದಲ್ಲದೆ, ಉತ್ತರ ಕನ್ನಡ ಜಿಲ್ಲೆಯ ಪಾವಿನಕುರ್ವೆಯಲ್ಲಿ ಎರಡನೇ ಬೃಹತ್ ಬಂದರು ನಿರ್ಮಾಣ. ಪಿಪಿಪಿ ಮಾದರಿಯಲ್ಲಿ ಅಂದಾಜು 3,048 ಕೋಟಿ ವೆಚ್ಚದಲ್ಲಿ ಬಂದರು ಅಭಿವೃದ್ಧಿ ಮಾಡಲು ಚಿಂತಿಸಿದೆ. ಕಾರವಾರ, ಮಲ್ಪೆ ಹಳೇ ಮಂಗಳೂರು ಬಂದರುಗಳಲ್ಲಿ 4 ಬರ್ತ್ ಅಭಿವೃದ್ಧಿ ಮಾಡುವುದಾಗಿ ತಿಳಿಸಿದೆ. ಕಾರವಾರ, ಹಳೇ ಮಂಗಳೂರು ಸೇರಿ 11 ಕಿರು ಬಂದರುಗಳಲ್ಲಿ ಹೂಳೆತ್ತುವ ಕಾರ್ಯ ಮಾಡಲಿದೆ.
ಉತ್ತರಕನ್ನಡದ ಮಂಕಿಯಲ್ಲಿ ವಿವಿದೋದ್ದೇಶ ಬಂದರು ಅಭಿವೃದ್ಧಿ ಬಗ್ಗೆ ಚಿಂತಿಸಿದೆ. ಕಾರವಾರ ಬಂದರಿನಲ್ಲಿ ಬೆಂಕಿ ನಂದಿಸುವ ಉಪಕರಣಗಳ ಅಳವಡಿಕೆಗೆ ಕಾಮಗಾರಿ ಮಾಡುವುದಾಗಿ ಸರ್ಕಾರ ತಿಳಿಸಿದೆ. ಸಿದ್ದರಾಮಯ್ಯ ಅವರು ಮೀನುಗಾರಿಕೆ ಕ್ಷೇತ್ರಕ್ಕೆ ಬಜೆಟ್ನಲ್ಲಿ 3 ಸಾವಿರ ಕೋಟಿ ಯೋಜನೆ ಪ್ರಕಟಿಸಿದ್ದಾರೆ. ಮತ್ತ್ವ ಆಶಾಕಿರಣ ಯೋಜನೆಡಿ ಮೀನುಗಾರಿಕೆ ನಿಷೇಧದ ಅವಧಿಯಲ್ಲಿ ಕರಾವಳಿಯ ಮೀನುಗಾರ ನೀಡುತ್ತಿರುವ ಪರಿಹಾರ ಮೊತ್ತದ ರಾಜ್ಯದ ಪಾಲನ್ನು 1,500 ರೂ.ಗಳಿಂದ 3,000ರೂ.ಗಳಿಗೆ ಹೆಚ್ಚಿಸಲಾಗಿದೆ.
ಸಮುದ್ರ ಮೀನುಗಾರಿಕೆಗೆ ತೆರಳಿದಾಗ ಅಪಘಾತ ಅಥವಾ ಅನಾರೋಗ್ಯಕ್ಕೆ ಒಳಗಾಗುವ ಮೀನುಗಾರರನ್ನು ತ್ವರಿತವಾಗಿ ದಡಕ್ಕೆ ತರಲು ರಾಜ್ಯದಲ್ಲಿ ಪ್ರಪ್ರಥಮ ಸಮುದ್ರ ಅಂಬುಲೆನ್ಸ್ ಅನ್ನು 7 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲಾಗುತ್ತದೆ.2024-5ನೇ ಸಾಲಿನಲ್ಲಿ 10,000 ಮೀನುಗಾರರಿಗೆ ರಾಜ್ಯ ಸರ್ಕಾರವು ವಸತಿ ವಸತಿಗಳಡಿಯಲ್ಲಿ ಮನೆಗಳನ್ನು ನಿರ್ಮಿಸಲು ಸಹಾಯಧನ ನೀಡಲಾಗುವುದು. ರಾಜ್ಯದಲ್ಲಿನ 16 ಮೀನು ಮರಿ ಉನ್ನತೀಕರಣವನ್ನು ನಬಾರ್ಡ್ ಉತ್ಪಾದನಾ ಕೇಂದ್ರಗಳ ಸಹಯೋಗದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುತ್ತದೆ. ಚಿತ್ರದುರ್ಗ, ಹೊಳಲ್ಕೆರೆ ಮತ್ತು ಹೊಸದುರ್ಗ ತಾಲೂಕುಗಳ ಗಣಿಬಾಧಿತ ಪ್ರದೇಶದಲ್ಲಿ ಮೀನುಗಾರಿಕೆ ನಡೆಸಲು 6 ಕೋಟಿ ರೂ. ವೆಚ್ಚ ಮಾಡಲಾಗುವುದು ಎಂದು, ಇನ್ನು ಹೊನ್ನಾವರ ಅಥವಾ ಕಾಸರಗೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲಾಗಿದೆ