Categories
ಕರಾವಳಿ

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ!

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ!

– ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದಿಂದ ಸ್ಟಾಕ್ ಮಾರ್ಕೆಟಿನಲ್ಲಿ ಕಾರ್ಯಾಗಾರ
– ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಿದ ಸಹಾಯಕ ಪ್ರಾಧ್ಯಾಪಕರು

NAMMUR EXPRESS NEWS
ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದಿಂದ ಸ್ಟಾಕ್ ಮಾರ್ಕೆಟಿನಲ್ಲಿ ವೃತ್ತಿ ಮಾರ್ಗದರ್ಶನ ಮತ್ತು ಹೂಡಿಕೆಯ ಕುರಿತು ಕಾರ್ಯಾಗಾರ ನಡೆಸಲಾಯಿತು.
ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಅಕ್ಷತ್ರಾಜ್‌ ಜೈನ್‌ ಹಿರಿಯ ಸಹಾಯಕ ಪ್ರಾಧ್ಯಾಪಕರು ನಿರ್ವಹಣಾ ಅಧ್ಯಯನ ವಿಭಾಗ ಮಂಗಳೂರು ಇನ್ಸಿಟ್ಯೂಟ್ ಆಫ್‌ ಟೆಕ್ನಾಲಜಿ ಅಂಡ್‌ ಇಂಜಿನಿಯರಿಂಗ್ ಮಿಜಾರು ಮೂಡಬಿದ್ರೆ ಇವರು ವಿದ್ಯಾರ್ಥಿಗಳಿಗೆ ಮುಂದಿನ ಜೀವನದಲ್ಲಿ ವೃತ್ತಿ ಮಾರ್ಗದರ್ಶನ ಮತ್ತು ಹೂಡಿಕೆಯ ಕುರಿತು ಯಾವೆಲ್ಲ ನೆಲೆಯಲ್ಲಿ ಮುಂದುವರೆಯಲು ಸಾಧ್ಯವಿದೆ ಎನ್ನುವುದರ ಕುರಿತು ಸೂಕ್ತವಾದ ಮಾಹಿತಿಯನ್ನು ನೀಡಿದರು.
ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ ಹಾಗೂ ಕಾಲೇಜಿನ ನಿರ್ದೇಶಕಿಯಾದ ಮಮತಾ ಹಾಗೂ ಪ್ರಾಂಶುಪಾಲರಾದ ಡಾ. ಸೀಮಾ ಜಿ ಭಟ್ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶೈಲಾ ನಿರ್ವಹಣಾ ವಿಭಾಗದ ಮುಖ್ಯಸ್ಥೆ, ಗೀತಾ ಹಾಗೂ ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ನಂದಿನಿ ನಿರೂಪಿಸಿದರೆ, ಐಶ್ವರ್ಯ ಸ್ವಾಗತಿಸಿ, ಕಾವ್ಯ ಅತಿಥಿಗಳನ್ನು ಪರಿಚಯಿಸಿ, ಮಿಥಿಲ್ ವಂದಿಸಿದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.