Categories
ಕರಾವಳಿ

ಮಾಳ ಶ್ರೀ ಗುರುಕುಲ ಅನುದಾನಿತ ಶಾಲೆಯಲ್ಲಿ ಮಕ್ಕಳ ದಿನ

ಮಾಳ ಶ್ರೀ ಗುರುಕುಲ ಅನುದಾನಿತ ಶಾಲೆಯಲ್ಲಿ ಮಕ್ಕಳ ದಿನ
– ಮಕ್ಕಳೇ ಗಣ್ಯರಾಗಿ ಕಾರ್ಯಕ್ರಮ ಆಯೋಜಿಸಿದ್ದು ವಿಶೇಷ
– ಶಿಕ್ಷಕರ ಪ್ರೇರಣೆಯ ಮಾತು: ಮಕ್ಕಳ ಕಲರವ

NAMMUR EXPRESS NEWS
ಕಾರ್ಕಳ: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳದಲ್ಲಿ ನವೆಂಬರ್ 14ರಂದು ಮಕ್ಕಳ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ವೇದಿಕೆಯಲ್ಲಿ ಶಾಲಾ ನಾಯಕನಾದ ವಿಖ್ಯಾತ್ ಡೋಂಗ್ರೆ, ಮುಖ್ಯ ಅತಿಥಿಯಾಗಿ ಶಾಲಾ ಪ್ರತಿಭಾನ್ವಿತ ಪೂರ್ವ ವಿದ್ಯಾರ್ಥಿನಿಯಾದ ಕುಮಾರಿ ವಚನಾ, ಉಪಮುಖ್ಯಮಂತ್ರಿಯಾಗಿರುವ ಕುಮಾರಿ ವಿದ್ಯಾ ಡೋಂಗ್ರೆ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕರು ಪ್ರಾರ್ಥನೆ ಹಾಡುವುದರ ಮೂಲಕ ಪ್ರಾರಂಭಿಸಲಾಯಿತು. ನಂತರ ಜ್ಯೋತಿ ಬೆಳಗಿಸಿ ಜವಾಹರಲಾಲ್ ನೆಹರೂರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಮಕ್ಕಳಿಗೆ ಕೆಲವೊಂದು ಆಟೋಟ ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನಗಳನ್ನು ನೀಡಲಾಯಿತು. ಮಕ್ಕಳು ಮಕ್ಕಳ ದಿನಾಚರಣೆಯ ಪ್ರಯುಕ್ತ ಭಾಷಣ ಮಾಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಶಿಕ್ಷಕಿಯರು ಭಾಷಣ ಮಾಡಿದರು. ಈ ಕಾರ್ಯಕ್ರಮಕ್ಕೆ ಬಂದಂತಹ ಅತಿಥಿಗಳಿಗೆ ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಲಾಯಿತು. ಮಕ್ಕಳು ,ಮುಖ್ಯೋಪಾಧ್ಯಾಯರು ,ಶಿಕ್ಷಕರು ಭಾಗವಹಿಸಿದ್ದರು. ಶಾಲಾ ಶಿಕ್ಷಕಿ ಸುನೀತಾ ಕಾರ್ಯಕ್ರಮವನ್ನು ನಿರ್ವಹಿಸಿದರು, ಜ್ಯೋತಿ ಸ್ವಾಗತಿಸಿ, ವಸಂತಿ ವಂದನಾರ್ಪಣೆ ಗೈದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.