ಕರಾವಳಿ ಜಿಲ್ಲೆಗೆ ಮತ್ತೆ ರಜೆ!
– ಜು.25ರಂದು 2 ಜಿಲ್ಲೆಗೆ ಶಾಲೆ, ಪಿಯು ಕಾಲೇಜಿಗೆ ರಜೆ ಘೋಷಣೆ
– ಮುಗಿಯದ ಮಳೆ ಅಬ್ಬರ: ಹೊನ್ನಾವರದಲ್ಲಿ ಓರ್ವ ನೀರಲ್ಲಿ ಕೊಚ್ಚಿ ಹೋಗಿ ಸಾವು
NAMMUR EXPRESS NEWS
ಉಡುಪಿ/ಮಂಗಳೂರು: ಉಡುಪಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ಜುಲೈ 25ರಂದು ರಜೆ ಘೋಷಣೆ ಮಾಡಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 25ರಂದು ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ಜುಲೈ 25ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಬೀಸುತ್ತಿರುವ ಬಾರೀ ಮಳೆಗೆ ದ.ಕ ಜಿಲ್ಲಾದ್ಯಾಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ನಾಳೆ ಮಂಗಳವಾರ ಅಂಗನವಾಡಿ, ಶಾಲಾ ಪಿಯು ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾರೀ ಗಾಳಿ ಮಳೆ ಬಿಸುತ್ತಿದ್ದು, ವಿದ್ಯಾರ್ಥಿಗಳ ಮುಂಜಾಗೃತ ಹಿತೈದೃಷ್ಟಿಯಿಂದ ದ.ಕ ಜಿಲ್ಲಾಧಿಕಾರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
ಹೊನ್ನಾವರ:ಈಜಲು ತೆರಳಿದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು:
ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ರಾಮತೀರ್ಥಕ್ಕೆ ಈಜಲು ತೆರಳಿದ್ದ ವಿದ್ಯಾರ್ಥಿಯೊರ್ವ ಮೃತಪಟ್ಟ ಘಟನೆ ಜು.24 ರಂದು ಸೋಮವಾರ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ರಾಯಲಕೇರಿ ನಿವಾಸಿಯಾದ ಮಣಿಕಂಠ ಮಂಜುನಾಥ ನಾಯ್ಕ (17) ಎಂದು ಗುರುತಿಸಲಾಗಿದೆ. ಹೊನ್ನಾವರ ಪಟ್ಟಣದ ಸರ್ಕಾರಿ ಮೋಹನ ಕೆ.ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯುಸಿ ವಿದ್ಯಾರ್ಥಿಯಾಗಿದ್ದು, ಸೋಮವಾರ ಮಳೆಯ ಕಾರಣದಿಂದ ಕಾಲೇಜಿಗೆ ರಜೆ ಇದ್ದ ಕಾರಣ ಈಜಲು ತೆರಳಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಪೋಲೀಸರು ಹಾಗೂ ಸಾರ್ವಜನಿಕರ ಸಹಕಾರದಿಂದ ಶವವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಯ ಬಳಿಕ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಹೊನ್ನಾವರ ಪೋಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ
ಇದನ್ನೂ ಓದಿ : ತೀರ್ಥಹಳ್ಳಿ ಹುಡುಗನ ಅನುಮಾನಾಸ್ಪದ ಸಾವು!
HOW TO APPLY : NEET-UG COUNSELLING 2023