ಕರಾವಳಿ ಟಾಪ್ ನ್ಯೂಸ್
– ಲಿಮ್ಕಾ ಬುಕ್ ಆಫ್ ರೆಕಾರ್ಡ್ ಪಡೆದಿದ್ದ ಬಾಲಕಿ ಪೂರ್ವಿ ಇನ್ನಿಲ್ಲ!
– ಉಡುಪಿ: ಕಾರಿಗೆ ಗುದ್ದಿದ ಪಿಕಪ್ ವಾಹನ: ಕಾರು ಜಖಂ
– ಬ್ರಹ್ಮಾವರ: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ
– ಮೂಡುಬಿದರೆ: ಓವರ್ ಟೇಕ್ ಮಾಡಿ ಬಸ್ಸು ಅಪಘಾತ: ಧರ್ಮದೇಟು
NAMMUR EXPRESS NEWS
ಪಣಂಬೂರು: ಮಂಗಳೂರು ದ್ವಾರಕ ನಗರ ಕೊಟ್ಟಾರ ನಿವಾಸಿಗಳಾದ ಪುಷ್ಪರಾಜ್ ಎಸ್. ಕುಂದರ್ ವೈಶಾಲಿ ಎಲ್. ಬೆಂಗ್ರೆ ಅವರ ಪುತ್ರಿ, ಲಿಮ್ಕಾ ಬುಕ್ ದಾಖಲೆಯ ಪೂರ್ವಿ (7) ಅನಾರೋಗ್ಯದಿಂದ ಮಂಗಳೂರಿನಲ್ಲಿ ನಿಧನ ಹೊಂದಿದ್ದಾರೆ.
2019ರಲ್ಲಿ 1 ನಿಮಿಷದಲ್ಲಿ ದಾಖಲೆಯ ರೈಮ್ಸ್ ಆಟವಾಡಿ ಇಂಡಿಯನ್ ಬುಕ್ ಆಫ್ ರೆಕಾಡ್ಸ್ನಲ್ಲಿ ಹೆಸರು ಮಾಡಿದ್ದಳು. ಸಣ್ಣ ಪ್ರಾಯದಲ್ಲೇ ಚುರುಕಿನಿಂದ ಕೂಡಿದ್ದ ಪೂರ್ವಿ ಫುಟ್ಬಾಲ್, ಭರತನಾಟ್ಯದಲ್ಲಿ ತನ್ನ ಸಾಮರ್ಥ್ಯ ಪ್ರದರ್ಶಿಸಿ ಜನರ ಪ್ರೀತಿಗೆ ಪಾತ್ರವಾಗಿದ್ದಳು. ವಿವಿಧ ಸಂಘ ಸಂಸ್ಥೆಯಿಂದ ಸಮ್ಮಾನ ಪಡೆದುಕೊಂಡಿದ್ದಳು. ಗ್ರೀನ್ ವುಡ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಕಲಿಯುತ್ತಿದ್ದ ಪೂರ್ವಿ ಅನಾರೋಗ್ಯಕ್ಕೀಡಾದಾಗ ಮಂಗಳೂರಿಗೆ ಬಂದು ಖಾಸಗಿ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಅವರ ನಿಧನಕ್ಕೆ ಬೆಂಗ್ರೆ ವಿದ್ಯಾರ್ಥಿ ಸಂಘ, ಸ್ಥಳೀಯ ಸಂಘ=ಸಂಸ್ಥೆಗಳು ಶೋಕ ವ್ಯಕ್ತಪಡಿಸಿವೆ.
* ಉಡುಪಿ: ಕಾರಿಗೆ ಗುದ್ದಿದ ಪಿಕಪ್ ವಾಹನ: ಕಾರು ಜಖಂ
ಉಡುಪಿ: ವಾಹನ ದಟ್ಟಣೆ ಸಂದರ್ಭ ನಿಲ್ಲಿಸಿದ್ದ ಕಾರಿಗೆ ಪಿಕಪ್ ಹಿಂದಿನಿಂದ ಢಿಕ್ಕಿ ಹೊಡೆದು ಕಾರು ಮುಂದಕ್ಕೆ ಚಲಿಸಿ ಮುಂದಿದ್ದ ಪಿಕಪ್ ವಾಹನಕ್ಕೆ ತಾಗಿ, ಕಾರು ಜಖಂಗೊಂಡ ಘಟನೆ ಮಣಿಪಾಲ-ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಹೆದ್ದಾರಿ 169ಎ ರಸ್ತೆಯ ಶಿವಳ್ಳಿ ಜುವೆಲ್ಲರಿ ಬಳಿ ಕಾರ್ಕಳ ನಿವಾಸಿ ರಜತ್ ಕುಮಾರ್ ಎಂಬವರು ಕಾರು ನಿಲ್ಲಿಸಿದ್ದರು. ಈ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಕಾರಿಗೆ ಢಿಕ್ಕಿ ಹೊಡೆದಿದೆ. ಕಾರು ಮುಂದಕ್ಕೆ ಚಲಿಸಿ ಮುಂದಿದ್ದ ಪಿಕಪ್ ವಾಹನಕ್ಕೆ ತಾಗಿದೆ. ಘಟನೆಯಲ್ಲಿ ಕಾರಿನ ಹಿಂಭಾಗ ಮತ್ತು ಮುಂಭಾಗ ಜಖಂಗೊಂಡಿದ್ದು ಟಿಪ್ಪರ್ ಚಾಲಕನ ನಿರ್ಲಕ್ಷ್ಯ, ಅಜಾಗರೂಕತೆ ಚಾಲನೆ ಕುರಿತು ಉಡುಪಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
* ಬ್ರಹ್ಮಾವರ : ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ!
ಬ್ರಹ್ಮಾವರ: ಉಪ್ಪೂರು ಕೊಳಲಗಿರಿಯ ರವಿತೇಜ (36) ನರ್ನಾಡು ಮದಗ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರು ನ.7ರ ರಾತ್ರಿಯಿಂದ ಕಾಣೆಯಾಗಿದ್ದು, ರವಿವಾರ ಬೆಳಗ್ಗೆ ಮೃತದೇಹ ದೊರೆತಿದೆ. ವಿಪರೀತ ಮದ್ಯಪಾನ ಅಭ್ಯಾಸ ಇದ್ದು ಚಿಕಿತ್ಸೆ ಕೊಡಿಸಿದರೂ ಮದ್ಯಸೇವನೆ ಮುಂದುವರಿಸಿದ್ದರು ಎನ್ನಲಾಗಿದೆ. ಓವರ್ ಟೇಕ್ ಮಾಡುವ ಭರ, ಭೀಕರ ಅಪಘಾತ! ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಹಂಡೇಲು ಬಳಿ ಖಾಸಗಿ ಮಾಸ್ಟರ್ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಭೀಕರ ಅಪಘಾತ ನಡೆದಿದ್ದು, ದ್ವಿಚಕ್ರ ವಾಹನದ ಮೇಲೆ ಹರಿದು ಇಬ್ಬರು ಗಂಭೀರ ಗಾಯಗೊಂಡ ಘಟನೆ ನ. 11ರಂದು ನಡೆದಿದೆ. ತೋಡಾರು ಸಮೀಪದ ಮೈಟ್ ಕಾಲೇಜು ಬಳಿ ಕಾಲೇಜಿನ ಬಸ್ಸನ್ನು ಓವರ್ ಟೇಕ್ ಮಾಡುವ ಸಂದರ್ಭ ಈ ಘಟನೆ ನಡೆದಿದ್ದು, ಬಸ್ಸಿನ ಅಜಾಗರೂಕತೆ ಚಾಲನೆ ವಿರುದ್ಧ ಸಿಟ್ಟಿಗೆದ್ದ ವಿದ್ಯಾರ್ಥಿಗಳು ಬಸ್ಸಿನ ಗಾಜು ಪುಡಿ ಪುಡಿ ಮಾಡಿದ್ದಾರೆ. ವಿದ್ಯಾರ್ಥಿಗಳ ಆಕ್ರೋಶಕ್ಕೆ ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.ಘಟನೆಯಲ್ಲಿ ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದೆ. ಮಂಗಳೂರು-ಮೂಡಬಿದ್ರೆ ರೂಟಿನಲ್ಲಿ ಸಂಚರಿಸುವ ಖಾಸಗಿ ಬಸ್ ಗಳ ಧಾವಂತಕ್ಕೆ ದ್ವಿಚಕ್ರ ಸವಾರರು ಬಲಿಯಾಗುತ್ತಿರುವ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.