Categories
ಕರಾವಳಿ

ಕರಾವಳಿ ಟಾಪ್ ನ್ಯೂಸ್

ಮಂಗಳೂರು ಬೀಚ್ ಬಳಿ ಕೊಲೆ!
– ಇಬ್ಬರ ಜಗಳ ವಿಕೋಪಕ್ಕೆ ತಿರುಗಿ ಕೊಲೆ
– ಕಾರ್ಕಳ: ಭೀಕರ ಅಪಘಾತ: ಓರ್ವನ ಸಾವು
– ಕೋಟಾ: ಬೈಕ್ ಅಪಘಾತ: ಇಬ್ಬರಿಗೆ ಗಾಯ

NAMMUR EXPRESS NEWS
ಮಂಗಳೂರು: ದೋಣಿ ನಿರ್ಮಾಣ ಕಾರ್ಮಿಕರಿಬ್ಬರ ನಡುವಿನ ಜಗಳ ವಿಕೋಪಕ್ಕೆ ತಿರುಗಿ ಸಾವನ್ನಪ್ಪಿದ ಘಟನೆ ತಣ್ಣೀರುಬಾವಿ ಬೀಚ್ ಬಳಿ ನಡೆದಿದೆ. ಕೇರಳದ ಕೊಲ್ಲಂ ನಿವಾಸಿ ಬಿನು (41) ವೃತ್ತಿಪರ ಕಾರ್ಮಿಕ. ತಣ್ಣೀರುಬಾವಿ ತಣ್ಣೀರ್ ಬಾವಿ ಬೀಚ್ ಬಳಿ ದೋಣಿ ದುರಸ್ತಿ ಕಾರ್ಯದಲ್ಲಿ ನಿರತನಾಗಿದ್ದ ಕೇರಳದ ತಳ್ಳಿಪರಂಬ ನಿವಾಸಿಗಳಾದ ಬಿನೋಯ್ (52), ಹಾಗೂ ಜಾನ್ಸನ್ ನಡುವೆ ಶನಿವಾರ ಸಂಜೆ ಸಣ್ಣ ವಿಚಾರಕ್ಕೆ ವಾಗ್ವಾದ ನಡೆಯಿತು. ಅದೇ ದಿನ ರಾತ್ರಿ ಮದ್ಯದ ಅಮಲಿನಲ್ಲಿ ಜಾನ್ಸನ್ ಬಿನು ಅನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳದ ಕೆದಿಂಜೆಯಲ್ಲಿ ಅಪಘಾತ:

ಸ್ಥಳದಲ್ಲೇ ಓರ್ವ ಮೃತ್ಯು ,12 ಮಂದಿಗೆ ಗಾಯ , ಇಬ್ಬರ ಸ್ಥಿತಿ ಗಂಭೀರಮುಂಬಯಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೊಲೆರೋ ಡಿಕ್ಕಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕೆದಿಂಜೆ ಎಂಬಲ್ಲಿ ಭಾನುವಾರ ಸಂಭವಿಸಿದೆ.ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಕೆದಿಂಜೆ ಎಂಬಲ್ಲಿ ನಂದಳಿಕೆ ಕಡೆಯಿಂದ ಬರುತ್ತಿದ್ದ ಮಹೀಂದ್ರಾ ಬೋಲೆರೊ ಜೀಪ್ ಕಾರ್ಕಳ ಕಡೆಯಿಂದ ಮುಂಬಯಿಗೆ ಹೋಗುತ್ತಿದ್ದ ರೇಷ್ಮಾ ಹೆಸರಿನ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ದುರ್ಘಟನೆ ಸಂಭವಿಸಿದೆ.

ಚಿಕ್ಕಮಗಳೂರು ಜಿಲ್ಲೆಯ ಜಯಪುರ ನಿವಾಸಿ ಶಿವಪ್ಪ ಸ್ಥಳದಲ್ಲೇ ಮೃತಪಟ್ಟರೆ, ಮಂಜು , ಸುಜಯ ಎಂಬುವರ ಸ್ಥಿತಿ ಗಂಭೀರವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಕಳ ತಾಲೂಕಿನ ನಂದಳಿಕೆಯ ತಮ್ಮ ಕುಟುಂಬದ ಮನೆಗೆ ದೇವರ ಕೆಲಸ ಮುಗಿಸಿ ಬರುವಾಗ ಈ ಘಟನೆ ಸಂಭವಿಸಿದೆ ಅಪಘಾತದಲ್ಲಿ ಮೃತರಾದ ಕುಟುಂಬ ಗುರಿಕಾರ ಶಿವಪ್ಪನವರೇ ಮುಂದೆ ನಿಂತು ದೈವದ ಕೆಲಸದ ವಿಧಿವಿಧಾನಗಳನ್ನು ನಡೆಸಿಕೊಟ್ಟಿದ್ದರು ಎಂದು ತಿಳಿದು ಬಂದಿದೆ.ಬಸ್ಸಿನಲ್ಲಿದ್ದ 12 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಕಾರ್ಕಳ ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಬೈಕ್‌ ಸವಾರರಿಬ್ಬರು ಗಂಭೀರ ಗಾಯ

​ಕೋಟ: ಬೈಕ್‌ ಗೆ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದು ಪರಿಣಾಮ ಬೈಕ್ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕೋಟ ಪೇಟೆಯ ಸರ್ಕಲ್ ನಲ್ಲಿ ಭಾನುವಾರ ರಾತ್ರಿ 11:15ರ ಸುಮಾರಿಗೆ ನಡೆದಿದೆ. ಗಂಭೀರ ಗಾಯಗೊಂಡ ಬೈಕ್ ಸವಾರರಿಬ್ಬರು ಸ್ಥಳೀಯ ಪಡುಮುಂಡು ಸಾಯಿಬ್ರಕಟ್ಟೆಯ ಸತೀಶ್ ಎಸ್ (27) ಹಾಗೂ ಇನ್ನೊರ್ವ ಸಹಸವಾರ ಎಂದು ತಿಳಿದು ಬಂದಿದೆ. ಬೆಂಗಳೂರುನಿಂದ ಪ್ರವಾಸಕ್ಕೆ ಹೊರಟ್ಟಿದ್ದ ಟೆಂಪೋ ಟ್ರಾವೆಲರ್ ವಾಹನವು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರದಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದು ಅದೇ ಮಾರ್ಗವಾಗಿ ಕುಂದಾಪುರ ದಿಂದ ಕೋಟ ಕಡೆಗೆ ಬರುತ್ತಿದ್ದ ಬೈಕ್ ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದು ಪರಿಣಾಮ ಬೈಕ್‌ ಸವಾರರಿಬ್ಬರು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿರುತ್ತಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.