Categories
ಕರಾವಳಿ

ಕರಾವಳಿ ಟಾಪ್ ನ್ಯೂಸ್

ಕರಾವಳಿ ಟಾಪ್ ನ್ಯೂಸ್
– ಅಶ್ಲೀಲ ಭಾವಚಿತ್ರ ವೈರಲ್ ಮಾಡುವುದಾಗಿ ಬ್ಲಾಕ್ ಮೇಲ್, ಅತ್ಯಾಚಾರ!
– ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ
– ಉಡುಪಿ: ಕಿನ್ನಿಮುಲ್ಕಿ ಬಳಿ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ
– ಮಂಗಳೂರು: ದ್ವಿಚಕ್ರ ವಾಹನ ಮತ್ತು ಟೆಂಪೊ ಮಧ್ಯೆ ಭೀಕರ ಅಪಘಾತ, ಸವಾರ ಬಲಿ!!
– ಮಲ್ಪೆ: ಬೈಕ್ ಪಾರ್ಕಿಂಗ್ ವಿಚಾರ ವಾಗ್ವಾದ : ದಂಪತಿಗಳ ಮೇಲೆ ಮಾರಣಾಂತಿಕ ಹಲ್ಲೆ!

NAMMUR EXPRESS NEWS
ಉಡುಪಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಆಕೆಯ ಅಶ್ಲೀಲ ಭಾವಚಿತ್ರ ಸಾಮಾಜಿಕ ಜಾಲತಾಣ ಗಳಲ್ಲಿ ವೈರಲ್ ಮಾಡಿರುವ ಪ್ರಕರಣದ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಪೊಕ್ಸೋ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಬ್ರಹ್ಮಾವರದ ರಫೀಕ್ (25) ಶಿಕ್ಷೆಗೆ ಗುರಿಯಾದ ಆರೋಪಿ.

ನಡೆದ ಘಟನೆ ಏನು?

ರಿಕ್ಷಾ ಚಾಲಕನಾಗಿದ್ದ ರಫೀಕ್ ನೊಂದ ಬಾಲಕಿಯನ್ನು ಕಾಲೇಜಿಗೆ ಕರೆದುಕೊಂು ಹೋ ಬರು್ತಿದ್ದು, ನಂತರ ಆಕೆಯ ಮೊಬೈಲ್‌ಗೆ ಕರೆ ಮಾಡಿ ಸಂದೇಶ ಕಳುಹಿಸಿ ತನ್ನನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದನು. ನಂತರ ಅವಳಿಂದ ಇಸ್ಟಗ್ರಾಮ್ ಐಡಿ ಪಡೆದು ಅದರಲ್ಲಿ ಅವಳ ಭಾವಚಿತ್ರಗಳನ್ನು ಪಡೆದುಕೊಂಡು ಪ್ರೀತಿಸದಿದ್ದರೆ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಹೆದರಿಸಿದ್ದನು. ನಂತರ ಬಾಲಕಿ ಒಪ್ಪದಿದ್ದಾಗ ನಕಲಿ ಐಡಿ ಸೃಷ್ಠಿಸಿ ಅದರಿಂದ ಬಾಲಕಿಯನ್ನು ಸಂಪರ್ಕಿಸಿ, ಆರೋಪಿಯನ್ನು ಪ್ರೀತಿಸುವಂತೆ ತಿಳಿಸಿದ್ದನು. ನಂತರವೂ ನೊಂದ ಬಾಲಕಿಯ ಅಶ್ಲೀಲ ಭಾವಚಿತ್ರವನ್ನು ಸೃಷ್ಠಿಸಿ ವೈರಲ್ ಮಾಡುವುದಾಗಿ ಹೆದರಿಸಿ, ಆಕೆಯನ್ನು ತನ್ನ ರಿಕ್ಷಾದಲ್ಲಿ ಕಾಲೇಜಿನಿಂದ ಮನೆಗೆ ಬೀಡುತ್ತೇನೆಂದು ಕರೆದುಕೊಂಡು ಬಂದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರಲಾಗಿದೆ. ಈ ವಿಚಾರವನ್ನು ಬೇರೆಯವರಿಗೆ ತಿಳಿಸಿದರೆ ಸಾಮಾಜಿಕ ಜಾಲತಾಣದಲ್ಲಿ ಭಾವಚಿತ್ರ ವೈರಲ್ ಮಾಡುವುದಾಗಿ ಬೆದರಿಸಿದ್ದನು. ನಂತರ ನೊಂದ ಬಾಲಕಿಯ ತಮ್ಮನ ಹೆಸರಿನ ನಕಲಿ ಇನ್ಸ್ಟಾಗ್ರಾಮ್ ಖಾತೆಗೆ ತೆರೆದು ಅದರಲ್ಲಿ ನೊಂದ ಬಾಲಕಿಯ ಅಶ್ಲೀಲ ಭಾವಚಿತ್ರ ಪೋಸ್ಟ್ ಮಾಡಿದ್ದನು. ಈ ಬಗ್ಗೆ ನೊಂದ ಬಾಲಕಿಯ ತಂದೆ ಬ್ರಹ್ಮಾವರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರಂತೆ ನೊಂದ ಬಾಲಕಿಯನ್ನು ವಿಚಾರಿಸಿದಾಗ ಘಟನೆಯ ಬಗ್ಗೆ ತಿಳಿಸಿದಳೆನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡ ಆಗಿನ ಬ್ರಹ್ಮಾವರ ಠಾಣಾ ಎಸ್ಸೈ ಮಧು ನೊಂದ ಬಾಲಕಿಯ ಹೇಳಿಕೆಯ ಆಧಾರದಂತೆ ಪ್ರಕರಣವನ್ನು ಪರಿವರ್ತಿಸಲು ನ್ಯಾಯಾಲಯ ಅನುಮತಿ ಪಡೆದು ಪ್ರಕರಣದ ಮುಂದಿನ ತನಿಖೆಯನ್ನು ಬ್ರಹ್ಮಾವರ ವೃತ್ತ ನಿರೀಕ್ಷಕ ದಿವಾಕರ್ ಪಿ.ಎಂ. ಅವರಿಗೆ ಹಸ್ತಾಂತರಿಸಿದರು. ಅದರಂತೆ ಆರೋಪಿಯ ವಿರುದ್ಧ ದೋಷರೋಪಣಾ ಸಲ್ಲಿಸಲಾ ಗಿದ್ದು, ಒಟ್ಟು 34 ಸಾಕ್ಷಿಗಳ ಪೈಕಿ 20 ಸಾಕ್ಷಿಗಳ ವಿಚಾರಣೆ ನಡೆಸಲಾಗಿದೆ.
ಆರೋಪಿಯ ವಿರುದ್ಧ ದೋಷರೋಪಣಾ ಸಲ್ಲಿಸಲಾಗಿದ್ದು, ಒಟ್ಟು 34 ಸಾಕ್ಷಿಗಳ ಪೈಕಿ 20 ಸಾಕ್ಷಿಗಳ ವಿಚಾರಣೆ ನಡೆಸಲಾಗಿದೆ. ಈ ಬಗ್ಗೆ ಆರೋಪಿಯ ವಿರುದ್ಧ ಪ್ರಕರಣ ಸಾಬೀತಾಗಿದೆ ಎಂದು ಅಭಿಪ್ರಾಯ ಪಟ್ಟು ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ 24ಸಾವಿರ ರೂ. ದಂಡ ವಿಧಿಸಿದರು. ನೊಂದ ಬಾಲಕಿಗೆ ಸರಕಾರ 2ಲ್ಷ ರೂ. ಪರಿಹಾ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ವಾದ ಮಂಡಿಸಿದ್ದರು.

* ಉಡುಪಿ: ಕಿನ್ನಿಮುಲ್ಕಿ ಬಳಿ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ…!!

ಉಡುಪಿ: ನಗರದ ಕಿನ್ನಿಮುಲ್ಕಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಘಟನೆ ನಡೆದಿದೆ. ಘಟನೆಗೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಅಧಿಕಾರಿಗಳು ಪ್ರದೇಶವನ್ನು ಸುತ್ತುವರೆದಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನಿಗಾ ವಹಿಸುತ್ತಿದ್ದಾರೆ.

* ಮಂಗಳೂರು: ದ್ವಿಚಕ್ರ ವಾಹನ ಮತ್ತು ಟೆಂಪೊ ಮಧ್ಯೆ ಭೀಕರ ಅಪಘಾತ, ಸವಾರ ಬಲಿ…!!

ಮಂಗಳೂರು: ಮಂಗಳೂರು’ ಕೊಣಾಜೆ ಸಮೀಪ ದ್ವಿಚಕ್ರ ವಾಹನ ಮತ್ತು ಏಸ್ ಟೆಂಪೊ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಯುವಕ ಮೃತಪಟ್ಟ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಡುಪದವು ಬಳಿ ಸಂಭವಿಸಿದೆ. ಮೃತರನ್ನು ಕೊಣಾಜೆ ಗ್ರಾಮದ ನಡುಪದವು ಕಾಟುಕೋಡಿ ನಿವಾಸಿ ಅಬೂಬಕರ್ ಸಿದ್ದೀಕ್(22) ಎಂದು ಗುರುತಿಸಲಾಗಿದೆ.ಅಬೂಬಕರ್ ಸಿದ್ದೀಕ್ ಕಾಸರಗೋಡಿನಲ್ಲಿ ಅರಬಿಕ್ ಶರೀಅತ್ ಕಾಲೇಜಿನಲ್ಲಿ ಕಲಿಯುತ್ತಿದ್ದು, ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದರು ಎಂದು ತಿಳಿದುಬಂದಿದೆ. ದೇರಳಕಟ್ಟೆ ಕಡೆಯಿಂದ ತೆರಳುತ್ತಿದ್ದ ಸ್ಕೂಟರ್ ಮತ್ತು ಮುಡಿಪು ಕಡೆಯಿಂದ ತೊಕ್ಕೊಟ್ಟಿನತ್ತ ಬರುತ್ತಿದ್ದ ಏಸ್ ಟೆಂಪೊ ಮಧ್ಯೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಭಾಗಶಃ ಟೆಂಪೊದೊಳಗೆ ನುಗ್ಗಿದ್ದು, ನಜ್ಜುಗುಜ್ಜಾಗಿದೆ. ಈ ವೇಳೆ ಟೆಂಪೋದ ಮೇಲೆ ಎಸೆಯಲ್ಪಟ್ಟ ಅಬೂಬಕರ್ ಸಿದ್ದೀಕ್ ಗಂಭೀರವಾಗಿ ಗಾಯಗೊಂಡಿದ್ದರು. ಅವರು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ ಎದು ತಿಳಿದುಬಂದಿದೆ. ಘಟನೆಯಲ್ಲಿ ೆಂಪೋ ಚಾಲಕ ಕೂಡಾ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಕೊಣಾಜೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

* ಮಲ್ಪೆ : ಬೈಕ್ ಪಾರ್ಕಿಂಗ್ ವಿಚಾರ ವಾಗ್ವಾದ : ದಂಪತಿಗಳ ಮೇಲೆ ಮಾರಣಾಂತಿಕ ಹಲ್ಲೆ…!!

ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಬೀಚ್‌ನಲ್ಲಿ ಬೈಕ್ ಪಾರ್ಕಿಂಗ್ ವಿಚಾರದಲ್ಲಿ ವಾಗ್ವಾದ ನಡೆದು ದಂಪತಿಗಳ ಮೇಲೆ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸಂಭವಿಸಿದೆ. ಮಲ್ಪೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಶೇಖ‌ರ್ ತಿಂಗಳಾಯ ಮತ್ತು ಗೀತಾ ಹಲ್ಲೆಗೊಳಗಾದ ದಂಪತಿಗಳು. ಸಾಗ‌ರ್, ಚರಣ್, ಯಶವಂತ್, ಕಿಶೋ‌ರ್, ರಾಜ ಅವರು ಪಾರ್ಕಿಂಗ್ ವಿಚಾರದಲ್ಲಿ ದಂಪತಿಗಳಿಗೆ ಹಲ್ಲೆ ನಡೆಸಿದ್ದಾರೆ. ಘಟನೆಯ ದೃಶ್ಯ ಸಿಸಿ ಕ್ಯಾಮರದಲ್ಲಿ ದಾಖಲಾಗಿದ್ದು,- ಹಲ್ಲೆಗೊಳಾಗದ ದಂಪತಿಗಳು ಉಡುಪಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ದೃಶ್ಯ ಸಿಸಿ ಕ್ಯಾಮರದಲ್ಲಿ ದಾಖಲಾಗಿದ್ದು,- ಹಲ್ಲೆಗೊಳಾಗದ ದಂಪತಿಗಳು ಉಡುಪಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಹಲ್ಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.