Categories
ಕರಾವಳಿ

ಕರಾವಳಿ ಟಾಪ್ ನ್ಯೂಸ್

ಕರಾವಳಿ ಟಾಪ್ ನ್ಯೂಸ್
– ಬೆಳ್ತಂಗಡಿ: ಅತ್ಯಾಚಾರ ಪ್ರಕರಣದ ಸಂತ್ರಸ್ಥೆ ಸೌಜನ್ಯಳ ತಂದೆ ನಿಧನ!
– ಮುಲ್ಕಿ: ಎಗ್ಗಿಲ್ಲದೆ ಅಕ್ರಮ ಮರಳು ಸಾಗಾಟ, ಸೇತುವೆಗಳು,ಕಾಂಕ್ರೀಟ್ ರಸ್ತೆ ಕುಸಿಯುವ ಭೀತಿ!
– ಮಂಗಳೂರು: ಬಾಲಕಿ ಮೇಲೆ ಅತ್ಯಾಚಾರ : 20 ವರ್ಷ ಶಿಕ್ಷೆ, 1 ಲಕ್ಷ ರೂ. ದಂಡ
– ಮಂಗಳೂರು: ಅಕ್ರಮ ವಿದೇಶಿ ಮದ್ಯ ಸಾಗಾಟ : ಓರ್ವ ವಶಕ್ಕೆ

NAMMUR EXPRESS NEWS
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಕೊಲೆ ಹಾಗೂ ಅತ್ಯಾಚಾರ ಪ್ರಕರಣದ ಸಂತ್ರಸ್ಥೆ ಸೌಜನ್ಯಳ ತಂದೆ ಚಂದಪ್ಪ ಗೌಡ (58) ಅವರು ಅಲ್ಪಕಾಲದ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಚಂದಪ್ಪ ಗೌಡ ಅವರು ಹಲವಾರು ವರ್ಷಗಳಿಂದ ಬೆಳ್ತಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದರು. ಅವರು ಕಳೆದ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತಿದ್ದರು ಎನ್ನಲಾಗಿದೆ. ಎರಡು ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತಿದ್ದರು. ಅರೆ ಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ತಂದೆ, ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಅಗಲಿದ್ದಾರೆ.

– ಮುಲ್ಕಿ: ಎಗ್ಗಿಲ್ಲದೆ ಅಕ್ರಮ ಮರಳು ಸಾಗಾಟ, ಸೇತುವೆಗಳು,ಕಾಂಕ್ರೀಟ್ ರಸ್ತೆ ಕುಸಿಯುವ ಭೀತಿ!
ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗದ ಮುಲ್ಕಿಯ ಬಪ್ಪನಾಡು ಬಳಿಯ ಒಳ ರಸ್ತೆಯಿಂದ ಅತಿಕಾರಿಬೆಟ್ಟು ಗ್ರಾಮದ ಮಟ್ಟು ಮೂಲಕ ಉಡುಪಿ ಜಿಲ್ಲೆಗೆ ಎಗ್ಗಿಲ್ಲದೆ ಅಕ್ರಮ ಮರಳು ಸಾಗಾಟ ನಡೆಯುತ್ತಿದ್ದು ಗ್ರಾಮೀಣ ಭಾಗದ ಜೀವನಾಡಿಯಾದ ಕಿರು ಸೇತುವೆ ಹಾಗೂ ಕಾಂಕ್ರೀಟ್ ರಸ್ತೆಗಳು ಕುಸಿಯುವ ಭೀತಿ ಎದುರಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಂದು ಹೆಜಮಾಡಿ ಟೋಲ್ ತಪ್ಪಿಸಿ ಬಪ್ಪನಾಡು ದೇವಸ್ಥಾನದ ದ್ವಾರದ ಒಳ ರಸ್ತೆಯ ಮೂಲಕ ರಾತೋರಾತ್ರಿ ಹೊತ್ತು ಟಿಪ್ಪರ್ ಮೂಲಕ ಅಕ್ರಮವಾಗಿ ಮರಳು ಸಾಗಾಟ ಎಗ್ಗಿಲ್ಲದೆ ನಡೆಯುತ್ತಿದೆ. ಅಕ್ರಮ ಮರಳು ಸಾಗಾಟದಿಂದ ಸುಮಾರು 3 ಕೋಟಿ ವೆಚ್ಚದ ಕಾಂಕ್ರೀಟ್ ರಸ್ತೆ ಹಾಗೂ ಅವರಾಲುಮಟ್ಟು, ಕೊಕ್ರಾಣಿ ,ಮತ್ತು ಕಕ್ವ ಸೇತುವೆಗಳು ಕುಸಿಯುವ ಭೀತಿ ಎದುರಿಸುತ್ತಿದ್ದು ಮುಲ್ಕಿ ಪೇಟೆಯ ಸಂಪರ್ಕ ಕಡಿದುಕೊಳ್ಳುವ ಸಂಕಷ್ಟ ಗ್ರಾಮೀಣ ಭಾಗದ ಜನರಿಗೆ ಉಂಟಾಗಿದೆ. ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಸದಸ್ಯ ಜಯಕುಮಾರ್ ಮಟ್ಟು ಮಾತನಾಡಿ ಅಕ್ರಮ ಮರಳು ಸಾಗಾಟದ ಬಗ್ಗೆ ಪಂಚಾಯತ್ ವಾರ್ಡ್ ಸಭೆಯಲ್ಲಿ ನಿರ್ಣಯ ಮಾಡಿದ್ದು ಮುಲ್ಕಿ ತಹಶೀಲ್ದಾರ್ ರವರಿಗೆ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

– ಬಾಲಕಿ ಮೇಲೆ ಅತ್ಯಾಚಾರ : 20 ವರ್ಷ ಕಠಿನ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಅದನ್ನು ವೀಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ಟಿಎಸ್‌ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ಮಾನು ಕೆ.ಎಸ್‌. ಅವರು 20 ವರ್ಷಗಳ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಿ ತೀರ್ ನೀಡಿದ್ದಾರೆ. ಹೆಬ್ರಿ ಮುದ್ರಾಡಿಯ ಅಶ್ವತ್ಥ್ (22) ಶಿಕ್ಷೆಗೊಳಗಾದ ಆರೋಪಿ. ಇನ್‌ಸ್ಟಾಗ್ರಾಂ ಮೂಲಕ ಬಾಲಕಿಯ ಸ್ನೇಹ ಬೆಳೆಸಿದ ಅಶ್ವತ್ಥ್ ಆಕೆಯನ್ನು ಭೇಟಿಯಾಗುವಂತೆ ಪುಸಲಾಯಿಸಿ 2023ರ ಮಾರ್ಚ್‌ನಲ್ಲಿ ಮೂಲ್ಕಿ ಬಸ್‌ ನಿಲ್ದಾಣದಿಂದ ಒತ್ತಾಯಪೂರ್ವಕವಾಗಿ ಬೈಕ್‌ನಲ್ಲಿ ಮಣಿಪಾಲದ ಲಾಡ್ಜ್ ಗೆ ಕರೆದುಕೊಡು ಹೋಗಿ ಅಲ್ಲಿ ಅತ್ಯಾಚಾರವೆಸಗಿದ್ದ. ಕೃತ್ಯವನ್ನು ಮೊಬೈಲ್‌ನಲ್ಲಿ ವೀಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳ ಮೂಲಕ ಇತರರಿಗೆ ರವಾನಿಸಿದ್ದ. ಆ ವೀಡಿಯೋ ಬಾಲಕಿಯ ತಂದೆಗೂ ಬಂದಿತ್ತು. ಅದರಂತೆ ತಂದೆ ಮೂಲ್ಕಿ ಠಾಣೆಗೆ ದೂರು ನೀಡಿದ್ದರು. ಮೂಲ್ಕಿ ಪೊಲೀಸ್‌ ನಿರೀಕ್ಷಕ ವಿದ್ಯಾಧರ್‌ ಡಿ. ಬಾಯ್ಕೆರಿಕರ್‌ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಒಟ್ಟು 24 ಸಾಕ್ಷಿದಾರರನ್ನು ವಿಚಾರಿಸಿ 49 ದಾಖಲೆಗಳನ್ನು ಗುರುತಿಸಲಾಗಿತ್ತು. ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಆರೋಪಿಯ ವಿರುದ್ಧದ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿ ಜ. 17ರಂದು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. 4 ಲಕ್ಷ ರೂ. ಪರಿಹಾರ ಸಂತ್ರಸ್ತರ ಪರಿಹಾರ ಯೋಜನೆ ಯಡಿಯಲ್ಲಿ ನೊಂದ ಬಾಲಕಿಗೆ ಹೆಚ್ಚುವರಿಯಾಗಿ 4 ಲ.ರೂ. ಪರಿಹಾರವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ನೀಡು ವಂತೆಯೂ ತೀರ್ಪಿನಲ್ಲಿ ತಿಳಿಸಿದ್ದಾರೆ.

– ಮಂಗಳೂರು: ಅಕ್ರಮ ವಿದೇಶಿ ಮದ್ಯ ಸಾಗಾಟ : ಓರ್ವ ವಶಕ್ಕೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಟಿ.ವಿ. ರಮಣ್‌ ಪೈ ಕನ್ವೆನ್ಶನ್‌ ಸೆಂಟರ್‌ ಎದುರಿನ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ವಿದೇಶಿ ಮದ್ಯ ಸಹಿತ ಓರ್ವನನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ದಿನಕರ ಪಾಂಡೇಶ್ವರ ಬಂಧಿತ ಆರೋಪಿ. ಾವುೇ ದಾಖಲಾತಿ ಗಳಿಲ್ಲೆ ಮಾರಾಟ ಮಾಡುವ ಉದ್ದೇಶದಿಂದ ತೆರಿಗೆ ಪಾವತಿಸದ 6 ಲೀ. ಮದ್ಯವನ್ನು ಆತನಿಂದ ವಶಕ್ಕೆ ಪಡೆದುಕೊಳ್ಳಲಾಗಿದೆ. ಇದರ ಒಟ್ಟು ಮೌಲ್ಯ 83,140 ರೂ. ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ) ಅವರ ಆದೇಶದಂತೆ ದ.ಕ ಜಿಲ್ಲಾ ಅಬಕಾರಿ ಉಪ ಆಯುಕ್ತರ ನಿರ್ದೇಶನದಂತೆ ಮಂಗಳೂರು ಉಪ ವಿಭಾಗ-1 ಅಬಕಾರಿ ಉಪಾಧೀ ಕ್ಷಕರ ನೇತೃತ್ವದಲ್ಲಿ ಅಬಕಾರಿ ನಿರೀಕ್ಷಕರು ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.