– ಮಂಗಳೂರು: ತೈಲ ಟ್ಯಾಂಕರ್ ಅಲ್ಲಿ ಅಸ್ವಸ್ಥ ಗೊಂಡವ್ಯಕ್ತಿ!
– ಮಂಗಳೂರು: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ
– ಬೆಳ್ತಂಗಡಿ: ಅಕ್ರಮ ಮರಳು ಸಾಗಾಟ , ಲಾರಿ ವಶ
– ಮಂಗಳೂರು: ಹಲವು ವರ್ಷಗಳಿಂದ ತಲೆಮರೆಸಿಕೊಂಡಿರುವ ಆರೋಪಿಯ ಬಂಧನ
NAMMUR EXPRESS NEWS
ಮಂಗಳೂರು: ಎನ್ ಎಂ ಪಿ ಟಿ ಬಂದರಿನಿಂದ 9.5 ನಾಟಿಕಲ್ ಮೈಲಿ ದೂರದ ಸಮುದ್ರದಲ್ಲಿ ಲಂಗರು ಹಾಕಿದ್ದ ಲೈಬೀರಿಯಾ ಮೂಲದ ತೈಲ ಟ್ಯಾಂಕರ್ ಹಡಗಿನಲ್ಲಿ ಸಿಬ್ಬಂದಿಯೊರ್ವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದು ಅವರನ್ನು ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಿಸಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಎಂಟಿ ಐವರಿ ರೇ ಎಂಬ ಹೆಸರಿನ ಹಡಗಿನಲ್ಲಿದ್ದ ಸಿಬ್ಬಂದಿಯೋರ್ವರು ಮಂಗಳವಾರ ರಾತ್ರಿ ವಾಶ್ ರೂಮಿನಲ್ಲಿದ್ದಾಗ ಕುಸಿದು ಬಿದ್ದಿದ್ದಾರೆ. ಕೂಡಲೇ ಕರ್ನಾಟಕದ ಕೋಸ್ಟ್ ಗಾರ್ಡ್ ಸಿಬ್ಬಂದಿಗೆ ರಕ್ಷಣೆ ಕೋರಿ ಮಧ್ಯರಾತ್ರಿ ಕರೆ ಬಂದಿತ್ತು.
ಇನ್ನು ತುರ್ತಾಗಿ ಸ್ಪಂದಿಸಿದ ಕೋಸ್ಟ್ ಗಾರ್ಡ್ ಸಿಬ್ಬಂದಿ ತಡರಾತ್ರಿ ಬೋಟಿನಲ್ಲಿ ವೈದ್ಯರೊಂದಿಗೆ ಹಡಗಿನ ಬಳಿ ತೆರಳಿ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಿಬ್ಬಂದಿಗೆ ತುರ್ತು ಚಿಕಿತ್ಸೆ ನೀಡಿದ್ದಾರೆ. ಬಳಿಕ ಅವರನ್ನು ಮಂಗಳೂರಿನ ಬಂದರಿಗೆ ಕರೆತಂದು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಐವರಿ ರೇ ಹಡಗು 13 ದಿನಗಳ ಹಿಂದೆ ಲೈಬೀರಿಯಾದಿಂದ ಕೆಂಪು ಸಮುದ್ರ ಮೂಲಕ ಮಂಗಳೂರಿನ ಬಂದರಿಗೆ ಆಗಮಿಸಿತ್ತು. ಮಂಗಳೂರು ಬಂದರಿನಲ್ಲಿ ಒಳಬರಲು ಸಿಗ್ನಲ್ ಸಿಗದೇ ಇದ್ದ ಕಾರಣ ಸಮುದ್ರ ಮಧ್ಯೆ ಲಂಗರು ಹಾಕಿತ್ತು ಎನ್ನಲಾಗಿದೆ.
ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ
ಮಂಗಳೂರು: ದನಗಳ ಕಳ್ಳ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ ಹಲವು ಪ್ರದೇಶದಿಂದ ಜಾನುವಾರು ಕಳವು ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಬಂಧಿತರನ್ನು ಮೂಡುಬಿದಿರೆ ಪಡುಕೊಣಾಜೆ ಗ್ರಾಮದ ನೀರಳಿಕೆ ಹೌಸ್ ನಿವಾಸಿ ಇಮ್ರಾನ್ ಇಬ್ರಾಹಿಂ (24) ಮತ್ತು ಕಲ್ಲಬೆಟ್ಟು ಗ್ರಾಮದ ಗಂಟಲಕಟ್ಟೆ ನಿವಾಸಿ ನಾಸಿರ್ ಯಾನೆ ನಾಚಿ (26) ಎಂದು ಗುರುತಿಸಲಾಗಿದೆ. ಬಂಧಿತರಿಂದ ದನ ಕಳವು ಮಾಡಲು ಉಪಯೋಗಿಸುತ್ತಿದ್ದ ಸುಮಾರು 10 ಲಕ್ಷ ರೂ. ಮೌಲ್ಯದ ಸ್ವಿಫ್ಟ್ ಕಾರು, ರಿಡ್ಜ್ ಕಾರು ಹಾಗೂ ಇನ್ನಿತರೆ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಆರೋಪಿಗಳು ಬಜಪೆ ಠಾಣೆ ನಿರೀಕ್ಷಕರಾದ ಸಂದೀಪ್ ಅವರ ಆದೇಶದಂತೆ ಎಸ್‌ಐ ನೇತೃತ್ವದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ.

ಬೆಳ್ತಂಗಡಿ: ಅಕ್ರಮ ಮರಳು ಸಾಗಾಟ ಲಾರಿ ವಶ
ಕಳ್ಳ ಮಾರ್ಗದಲ್ಲಿ ಮರಳು ಸಾಗಾಟ ಮಾಡುತಿದ್ದ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ನಡೆದಿದೆ. ಬೆಳ್ತಂಗಡಿ ಪೊಲೀಸ್ ಠಾಣಾ ಪಿಎಸ್ಟ್ ಧನರಾಜ್ ಟಿ ಎಂ ನೇತೃತ್ವದ ಪೊಲೀಸರು ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ಕೆಎ-21- ಬಿ-5262 ನೋಂದಣಿ ಸಂಖ್ಯೆಯ ಲಾರಿಯನ್ನು ತಡೆದು ಲಾರಿಯನ್ನು ಪೊಲೀಸರು ಪರಿಶೀಲನೆ ನಡೆಸಿದಾಗ ಯಾವುದೇ ದಾಖಲಾತಿ ಇಲ್ಲದೆ ಚಾಲಕ ಹಾಗೂ ಸಹಚರ ಎಲ್ಲಿಂದಲೋ ಕಳವು ಮಾಡಿಕೊಂಡು ಬಂದ ಸುಮಾರು 15 ಸಾವಿರ ರೂಪಾಯಿ ಮೌಲ್ಯದ ಮರಳನ್ನು ಲಾರಿಯಲ್ಲಿ ತುಂಬಿಸಿಕೊಂಡು ಸಾಗಾಟ ಮಾಡಿರುವುದು ಪತ್ತೆಯಾಗಿದೆ. ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ
ಮಂಗಳೂರು: ಹಲವು ವರ್ಷಗಳಿಂದ ತಲೆಮರೆಸಿಕೊಂಡಿರುವ ಆರೋಪಿಯ ಬಂಧನ
ಸಂಬಂಧಿಸಿದಂತೆ 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಯನ್ನು ಧರ್ಮಸ್ಥಳದ ಪೊಲೀಸರು ಬಂಧಿಸಿದ್ದಾರೆ. ತೊಕ್ಕೊಟ್ಟು ಕಾಪಿಕಾಡು ನಿವಾಸಿ ಸಂತೋಷ ಬಂಧಿತ ಆರೋಪಿ. ಆರೋಪಿ ಸಂತೋಷನನ್ನು ಬಂಧಿಸಿ, ಮಂಗಳೂರು 5ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ. ಆರೋಪಿ ಬೆಳ್ತಂಗಡಿಯ ಛಿಬಿದ್ರೆಗೆ ಬಂದಿರುವ ಮಾಹಿತಿ ಆತನನ್ನು ಡಿ.22ರಂದು ಚಿಛಿದ್ರೆ ಬಸ್ ನಿಲ್ದಾಣದ ಹತ್ತಿರ ಬಂಧಿಸಲಾಗಿದೆ.
