ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ತಂಡ
– ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು
– ಸುಳ್ಯ: ಆಣೆಕಟ್ಟಿನ ಸ್ಲಾಬ್ ಮುರಿದು ದಂಪತಿಗಳಿಗೆ ಗಾಯ
– ಹೆಲ್ಮಟ್ ಕಳ್ಳನನ್ನು ಹಿಡಿದ ಬ್ಯಾಂಕ್ ಸಿಬ್ಬಂದಿಗಳು
– ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವಕನಿಗೆ ಹೃದಯಾಘಾತ
NAMMUR EXPRESS NEWS
ಉಡುಪಿ: ವಿದ್ಯಾರ್ಥಿಯೋರ್ವನಿಗೆ ತಂಡವೊಂದು ಹಲ್ಲೆ ನಡೆಸಿ ಚೂರಿಯಿಂದ ಇರಿದ ಘಟನೆ ಉಡುಪಿಯ ಎಂಜಿಎಂ ಮೈದಾನದಲ್ಲಿ ನಡೆದಿದೆ . ಬ್ರಹ್ಮಾವರದ ಹೇರೂರಿನ ಪ್ರತೀಕ್ (17) ಹಲ್ಲೆಗೊಳಗಾದ ವಿದ್ಯಾರ್ಥಿ. ಇವರು ಉಡುಪಿಯ ಕೋಚಿಂಗ್ ಸೆಂಟರ್ವೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಅಲ್ಲಿ ಸುಹಾಸ್ ಎಂಬಾತ ಪರಿಚಯವಾಗಿತ್ತು. ಪ್ರತೀಕ್ ಒಂದುವರೆ ತಿಂಗಳ ಹಿಂದೆ ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸಿದ್ದರು ಪ್ರತೀಕ್ ಅವರು, ಎಂಜಿಎಂ ಮೈದಾನಕ್ಕೆ ಹೋದಾಗ ಅಲ್ಲಿದ್ದ ಆರೋಪಿಗಳಾದ ಸುಹಾಸ್, ಮೋನೀಶ್, ತರುಣ್ ಹಾಗೂ ಇಬ್ಬರು ಅಪರಿಚಿತ ವ್ಯಕ್ತಿಗಳು ಸೇರಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ಮಾಡಿದ್ದಾರೆ. ಇನ್ನೋರ್ವ ‘ಆರೋಪಿ ತರುಣ್ ಎಂಬಾತ ಕೊಲೆ ಮಾಡುವ ಉದ್ದೇಶದಿಂದ ಚಾಕುವಿನಿಂದ ಪ್ರತೀಕ್ ಅವರ ಹೊಟ್ಟೆ ಹಾಗೂ ತೊಡೆಯ ಭಾಗಕ್ಕೆ ಇರಿದು ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪ್ರತೀಕ್ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಸುಳ್ಯ: ಆಣೆಕಟ್ಟಿನ ಸ್ಲಾಬ್ ಮುರಿದು ದಂಪತಿಗಳಿಗೆ ಗಾಯ
ಸುಳ್ಯ: ಸುಮಾರು 45 ವರ್ಷಗಳ ಹಿಂದಿನ ಕಿಂಡಿ ಹೃದಯಾಘಾತದಿಂದ ಸ್ಲಾಬ್ ಮುರಿದು ಬಿದ್ದು ದಂಪತಿ ಗಾಯಗೊಂಡ ಘಟನೆ ಸುಳ್ಯದ ಅರಂತೋಡು ಗ್ರಾಮದ ದೇರಾಜೆ ಸಮೀಪ ಕಳುಬೈಲು ಎಂಬಲ್ಲಿ ನಡೆದಿದೆ. ದೇರಾಜೆ ಕಳುಬೈಲು ನಿವಾಸಿ ಚಂದ್ರಪ್ರಕಾಶ್ ಹಾಗೂ ಅವರ ಪತ್ನಿ ವೇದಾವತಿ ಗಾಯಗೊಂಡ ದಂಪತಿಗಳಾಗಿದ್ದಾರೆ. ಇವರಿಬ್ಬರು ತಮ್ಮ ರಬ್ಬರ್ ತೋಟಕ್ಕೆ ಕೆಲಸಕ್ಕೆ ಹೋಗಿ ಮರಳಿ ಈ ಕಿಂಡಿ ಆಣೆಕಟ್ಟಿನ ಮೂಲಕ ನಡೆದು ಬರುತ್ತಿದ್ದ ಸಂದರ್ಭ ಆಣೆಕಟ್ಟಿನ ಸ್ಲಾಬ್ ಏಕಾಏಕಿ ಮುರಿದು ಬಿದ್ದಿದೆ. ಈ ವೇಳೆ ಅವರಿಬ್ಬರು ಸುಮಾರು 15 ಅಡಿಗಳ ಆಳಕ್ಕೆ ಬಿದ್ದು ಗಾಯಗೊಂಡಿದ್ದಾರೆ. ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಅವರನ್ನು ಅಲ್ಲಿಂದ ಮೇಲೆತ್ತಿ ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯಿಂದ ವೇದಾವತಿಯವರ ಕಾಲು ಮುರಿತವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಂದ್ರಪ್ರಕಾಶರವರು ಸಣ್ಣ ಪುಟ್ಟ ಗಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಹೆಲ್ಮಟ್ ಕಳ್ಳನನ್ನು ಹಿಡಿದ ಬ್ಯಾಂಕ್ ಸಿಬ್ಬಂದಿಗಳು
ಉಪ್ಪಿನಂಗಡಿ: ಹೆಲ್ಮಟ್ ಕಳ್ಳನನ್ನು ಬ್ಯಾಂಕ್ ಸಿಬ್ಬಂದಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಉಪ್ಪಿನಂಗಡಿಯ ಸಹಕಾರಿ ವ್ಯವಸಾಯಿಕ ಬ್ಯಾಂಕ್ ನಲ್ಲಿ ನಡೆದಿದೆ ಈ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿರುವ ಸಂಘದ ಸಿಬಂದಿ ದೇವರಾಜ್ ಎಚ್. ಯು. ಎಂಬವರು ಹೆಲೈಟ್ ಕಳೆದುಕೊಂಡವರಾಗಿದ್ದಾರೆ. ಇವರು ಜನವರಿ ಜ.26ರಂದು ಬೆಳಗ್ಗೆ 9.30ಕ್ಕೆ ಸಂಘದ ಶೆಡ್ ನಲ್ಲಿ ತನ್ನ ಬೈಕ್ ನಿಲ್ಲಿಸಿ ಕೆಲಸಕ್ಕೆ ಹೋಗಿದ್ದು ಸಂಜೆ ಬಂದಾಗ ಹೆಲೈಟ್ ಕಳವು ಆಗಿದೆ ಆ ಬಳಿಕ ಸಂಸ್ಥೆಯ ಸಿಸಿ ಕ್ಯಾಮರಾದಲ್ಲಿ ಪರಿಶೀಲಿಸಿದಾಗ ವ್ಯಕ್ತಿಯೊಬ್ಬರು ಹೆಲ್ಮಟ್ ಕಳವುಗೈದಿರುವುದು ತಿಳಿದು ಬಂದಿದೆ. ಜ. 29ರಂದು ಅದೇ ವ್ಯಕ್ತಿ ಮತ್ತೆ ಬ್ಯಾಂಕ್ ವಠಾರಕ್ಕೆ ಬಂದ ವೇಳೆ ಆತನನ್ನು ಬ್ಯಾಂಕ್ ಸಿಬಂದಿ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಮೊದಲು ಕಳ್ಳತನ ಮಾಡಿಲ್ಲ ಎಂದು ಆ ವ್ಯಕ್ತಿ ವಾದಿಸಿದ್ದರೂ, ಆ ಬಳಿಕ ಒಪ್ಪಿ 9 ಹೆಲೈಟ್ ಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವಕನಿಗೆ ಹೃದಯಾಘಾತ
– ಬಸ್ ನಲ್ಲಿಯೆ ಪ್ರಾಣ ಬಿಟ್ಟ ಯುವಕ
ಪ್ರಯಾಣಿಸುತ್ತಿದ್ದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿ ಕುಂದಾಪುರ ಶಿವಮೊಗ್ಗ ರಾಜ್ಯ ರಸ್ತೆಯ ಸಿದ್ದಾಪುರ ಗ್ರಾಮದ ಜನ್ಸಾಲೆ ಬಳಿ ನಡೆದಿದೆ ಮೃತ ಯುವಕನನ್ನು ಗದಗ ಜಿಲ್ಲೆಯ ಈರಪ್ಪ ಎಂಬವರ ಮಗ ಚಂದ್ರು (24) ಎಂದು ಗುರುತಿಸಲಾಗಿದೆ. ಇವರು ದಾವಣಗೆರೆಗೆ ತೆರಳುವುದಕ್ಕೆ ಉಡುಪಿಯಲ್ಲಿ ಖಾಸಗಿ ಬಸ್ ಹತ್ತಿ ಪ್ರಯಾಣಿಸುತ್ತಿದ್ದು ದಾರಿ ಮಧ್ಯೆ ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ. ಕೂಡಲೇ ಚಾಲಕ ಬಸ್ಸನ್ನು ಸಿದ್ದಾಪುರ ಪೇಟೆಯಲ್ಲಿ ನಿಲ್ಲಿಸಿ ಚಂದ್ರು ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಅಂಬ್ಯುಲೆನ್ಸ್ ಮೂಲಕ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಪರೀಕ್ಷಿಸಿದ ವೈದ್ಯರು ಚಂದ್ರು ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.