ಕರಾವಳಿ ಟಾಪ್ ನ್ಯೂಸ್
• ಉಡುಪಿ: ನಡುರಸ್ತೆಯಲ್ಲಿ ಪಟಾಕಿ ಸಿಡಿಸಿ ಹುಚ್ಚಾಟ
• ಮಂಗಳೂರು: ಎರಡು ತಿಂಗಳಿನಿಂದ ನಾಪತ್ತೆಯಾಗಿರುವ ವ್ಯಕ್ತಿ
• ಪುತ್ತೂರು: ಮಾನಹಾನಿ ಮತ್ತು ಬೆದರಿಕೆ; ಪ್ರತಿಭಾ ಕುಳಾಯಿಗೆ ನೋಟಿಸ್
ನಮ್ಮೂರ್ ಎಕ್ಸ್ ಪ್ರೆಸ್ ನ್ಯೂಸ್
• ಉಡುಪಿ: ನಡುರಸ್ತೆಯಲ್ಲಿ ಪಟಾಕಿ ಸಿಡಿಸಿ ಹುಚ್ಚಾಟ
ಉಡುಪಿ: ಕೇರಳದಿಂದ ಪ್ರವಾಸಕ್ಕೆಂದು ಎರಡು ಬಸ್ ಗಳಲ್ಲಿ ಬಂದಿದ್ದ ವಿದ್ಯಾರ್ಥಿಗಳು ಅಸಭ್ಯವಾಗಿ ವರ್ತಿಸಿದ ಘಟನೆ, ಹೆಜಮಾಡಿ ಟೋಲ್ ಗೇಟ್ ಬಳಿ ನಡೆದಿದೆ. ನಡುರಸ್ತೆಯಲ್ಲಿ ಕುಣಿದು, ಪಟಾಕಿ ಸಿಡಿಸಿ ಬೇಕಾಬಿಟ್ಟಿಯಾಗಿ ತಮ್ಮ ಮನಸ್ಸಿಗೆ ಬಂದಂತೆ ವರ್ತಿಸಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಇದಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
• ಮಂಗಳೂರು: ಎರಡು ತಿಂಗಳಿನಿಂದ ನಾಪತ್ತೆಯಾಗಿರುವ ವ್ಯಕ್ತಿ
ಮಂಗಳೂರು: ಸುರೇಶ್ ಎನ್ನುವ ವ್ಯಕ್ತಿಯು ಕಳೆದೆರಡು ತಿಂಗಳ ಹಿಂದೆ ಮನೆಯಿಂದ ತೆರಳಿದ್ದು, ಮರಳಿ ಬಾರದೆ ನಾಪತ್ತೆಯಾಗಿರುವ ಘಟನೆ, ಕೋಡಿಕಲ್ ನಲ್ಲಿ ನಡೆದಿದೆ. ನವೆಂಬರ್ 25ರಂದು ಬೆಳಿಗ್ಗೆ 9.30 ರ ಸುಮಾರಿಗೆ ಮನೆಯಿಂದ ಹೊರ ಹೋಗಿದ್ದ ಸುರೇಶ್, ನವೆಂಬರ್ 29ರಂದು ಮಹಾರಾಷ್ಟ್ರದ ಭಿವಂಡಿ ಎನ್ನುವ ಸ್ಥಳದಿಂದ ಅಪರಿಚಿತ ಸಂಖ್ಯೆಯಿಂದ ಕರೆ ಮಾಡಿದ್ದರು ಎನ್ನಲಾಗಿದೆ. ಇನ್ನೆರಡು ದಿನಗಳಲ್ಲಿ ಮನೆಗೆ ಹಿಂತಿರುಗುವುದಾಗಿ ತಿಳಿಸಿದ ಸುರೇಶ್ ಇದುವರೆಗೂ ಬಂದಿಲ್ಲ ಎನ್ನುವ ಸಂಗತಿ ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಸುರೇಶ್ ಅವರ ಮನೆಯವರು ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
• ಪುತ್ತೂರು: ಮಾನಹಾನಿ ಮತ್ತು ಬೆದರಿಕೆ; ಪ್ರತಿಭಾ ಕುಳಾಯಿಗೆ ನೋಟಿಸ್
ಪುತ್ತೂರು: ಜಗನ್ನಿವಾಸ್ ರಾವ್ ಪ್ರತಿಭಾ ಕುಳಾಯಿ ಅವರ ವಿರುದ್ಧ ನೀಡಿದ ದೂರಿಗೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಯಲ್ಲಿರುವ ಸಂದರ್ಭದಲ್ಲಿ, ಪ್ರತಿಭಾ ಕುಳಾಯಿ ಅವರು ತನ್ನ ಮಾನಹಾನಿ ಮಾಡಿರುವುದಷ್ಟೇ ಅಲ್ಲದೆ, ಬೆದರಿಕೆ ಕೂಡ ಹಾಕಿದ್ದಾರೆ ಎಂದು ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಭಾ ಕುಳಾಯಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕಳುಹಿಸಲಾಗಿದೆ. ಜಗನ್ನಿವಾಸ್ ರಾವ್ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧೀಕ್ಷಕರಿಗೆ ದೂರನ್ನು ನೀಡಿದ್ದು, ದೂರಿನ ಆಧಾರದ ಮೇಲೆ ಅರ್ಜಿಯನ್ನು ವಿಚಾರಣೆಗಾಗಿ ಪೊಲೀಸ್ ಅಧೀಕ್ಷಕರು ಪುತ್ತೂರು ಪೊಲೀಸ್ ಠಾಣೆಗೆ ಕಳುಹಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಪ್ರತಿಭಾ ಕುಳಾಯಿ ಅವರಿಗೆ ಪೊಲೀಸ್ ಠಾಣೆಗೆ ಹಾಜರಾಗಿ ತನಿಖೆಗೆ ಸಹಕರಿಸುವಂತೆ ನೋಟಿಸ್ ಅನ್ನು ನೀಡಲಾಗಿದೆ ಎನ್ನುವ ಮಾಹಿತಿ ಲಭಿಸಿದೆ. ಕೇವಲ ಪ್ರತಿಭಾ ಕುಳಾಯಿ ಅವರಿಗೆ ಅಷ್ಟೇ ಅಲ್ಲದೆ ಜಗನ್ನಿವಾಸ್ ಅವರಿಗೂ ತನಿಖೆಗೆ ಸಹಕಾರ ನೀಡುವಂತೆ ನೋಟಿಸ್ ಅನ್ನು ಕಳುಹಿಸಲಾಗಿದೆ ಎನ್ನುವ ಸಂಗತಿ ತಿಳಿದುಬಂದಿದೆ.








