ಕರಾವಳಿ ಟಾಪ್ ನ್ಯೂಸ್
• ಬಂಟ್ವಾಳ: ರಕ್ತದ ಕಲೆಯುಳ್ಳ ಇನೋವಾ ಕಾರು ಪತ್ತೆ
• ಸುಳ್ಯ: ಕೆಎಫ್ಡಿ ಸಿ ಕಾರ್ಮಿಕರಿಂದ ಏ.1ರಂದು ಪ್ರತಿಭಟನೆ
• ಉಳ್ಳಾಲ: ಕಬ್ಬಿಣದ ಬಕೆಟ್ ಬಿದ್ದು ಕಾರ್ಮಿಕ ಸಾವು..!
ನಮ್ಮೂರ್ ಎಕ್ಸ್ ಪ್ರೆಸ್ ನ್ಯೂಸ್
ಬಂಟ್ವಾಳ: ಬುಡೋಳಿ ಹತ್ತಿರದಲ್ಲಿ ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಫ್ಲೈ ಓವರ್ ನ ಮೇಲ್ಭಾಗದಲ್ಲಿ ರಕ್ತದ ಕಲೆಯುಳ್ಳ ಇನೋವಾ ಕಾರ್ ಕಂಡುಬಂದ ಘಟನೆ ಶುಕ್ರವಾರದಂದು ನಡೆದಿದೆ. ರೌಡಿಶೀಟರ್ ಮುಳ್ಳುಗಡ್ಡೆ ಹೌಸ್, ತಲಪಾಡಿ ನಿವಾಸಿಯಾದ ಆರೀಫ್ ನ ಹತ್ಯೆಗೆ ಬಳಸಿರುವ ವಾಹನ ಇದೇ ಆಗಿರಬಹುದೆಂದು ಅನುಮಾನಗಳು ವ್ಯಕ್ತವಾಗಿವೆ. ಮಾಹಿತಿ ಲಭಿಸುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆಯನ್ನು ನಡೆಸಿದರು. ತನಿಖೆಯ ಬಳಿಕ ಇನ್ನಷ್ಟೇ ಮಾಹಿತಿ ಲಭಿಸಬೇಕಿದೆ.
•ಸುಳ್ಯ: ಕೆಎಫ್ಡಿ ಸಿ ಕಾರ್ಮಿಕರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ
ಸುಳ್ಯ: ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ಸುಳ್ಯ-ಐವರ್ನಾಡು- ಸುಬ್ರಹ್ಮಣ್ಯದ ರಬ್ಬರ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು ವಿವಿಧ ಬೇಡಿಕೆಗಳನ್ನು ಇಟ್ಟಿದ್ದು, ಅದನ್ನು ಸಂಬಂಧಿತ ವ್ಯಕ್ತಿಗಳ ಗಮನಕ್ಕೆ ಹಲವಾರು ಸಮಯಗಳಿಂದ ತರಲಾಗುತ್ತಿದ್ದರೂ, ಯಾವುದೇ ರೀತಿಯ ಸ್ಪಂದನೆ ದೊರೆತಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆದಷ್ಟು ಶೀಘ್ರದಲ್ಲಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಪಡಿಸಿ, ಕಾರ್ಮಿಕ ಸಂಘಟನೆಗಳ ಒಕ್ಕೂಟವು ಏಪ್ರಿಲ್ 1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಮತ್ತು ಧರಣಿ ಸತ್ಯಾಗ್ರಹವನ್ನು ಕೈಗೊಳ್ಳಲು ನಿರ್ಧರಿಸಿದೆ ಎಂದು ಮುಖಂಡರು ತಿಳಿಸಿದ್ದಾರೆ.
• ಉಳ್ಳಾಲ: ಕಬ್ಬಿಣದ ಬಕೆಟ್ ಬಿದ್ದು ಕಾರ್ಮಿಕ ಸಾವು
ಉಳ್ಳಾಲ: ಹೊಸ ಬಾವಿಯನ್ನು ಕೊರೆಯುವ ಕಾಮಗಾರಿಯನ್ನು ನಡೆಸುತ್ತಿದ್ದ ಸಮಯದಲ್ಲಿ, ಕ್ರೇನ್ ನ ಕೊಕ್ಕೆಯಿಂದ ಬೇರ್ಪಟ್ಟ ಮಣ್ಣು ತುಂಬಿದ್ದ ಕಬ್ಬಿಣದ ಬಕೆಟ್ 30 ಅಡಿ ಎತ್ತರದಿಂದ ಕಾರ್ಮಿಕರ ಮೇಲೆ ಬಿದ್ದಿದೆ. ಪರಿಣಾಮವಾಗಿ ಓರ್ವ ಕಾರ್ಮಿಕ ಸಾವನ್ನಪ್ಪಿರುವ ದುರಂತ ಶುಕ್ರವಾರದಂದು ಕುತ್ತಾರು ಪದವಿನ ಸಲಾತ್ ನಗರದಲ್ಲಿ ನಡೆದಿದೆ. ಇನ್ನಿಬ್ಬರು ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ. ಮೃತ ಕಾರ್ಮಿಕನನ್ನು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಮಲ್ಲಾಪುರದ ನಿವಾಸಿ ಶಿವಕುಮಾರ್ ಎಂದು ಗುರುತಿಸಲಾಗಿದೆ. ಶಿವಕುಮಾರ್ ಅವರು ಬಕೆಟ್ ಬಿದ್ದ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿದರೂ ಎನ್ನುವ ಮಾಹಿತಿ ಲಭಿಸಿದೆ. ಶಿವಕುಮಾರ್ ಅವರು ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ತೊಕ್ಕೊಟ್ಟುವಿನ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು ಎನ್ನುವ ಸಂಗತಿ ತಿಳಿದುಬಂದಿದೆ.







