ಕರಾವಳಿ ಟಾಪ್ ನ್ಯೂಸ್
• ಕಾರ್ಕಳ: ವ್ಯಕ್ತಿ ಸತ್ತ ಹತ್ತು ದಿನಗಳ ಬಳಿಕ ಬೆಳಕಿಗೆ ಬಂದ ಸಂಗತಿ
• ಬಂಟ್ವಾಳ: ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ; ಆರೋಪಿಗಳ ವಿರುದ್ಧ ಪ್ರಕರಣ ದಾಖಲು
• ಉಡುಪಿ: ಮದ್ಯಪಾನ ಚಟಕ್ಕೆ ವ್ಯಕ್ತಿ ಆತ್ಮಹತ್ಯೆ
ನಮ್ಮೂರ್ ಎಕ್ಸ್ ಪ್ರೆಸ್ ನ್ಯೂಸ್
• ಕಾರ್ಕಳ: ವ್ಯಕ್ತಿ ಸತ್ತ ಹತ್ತು ದಿನಗಳ ಬಳಿಕ ಬೆಳಕಿಗೆ ಬಂದ ಪ್ರಕರಣ
ಕಾರ್ಕಳ: ವ್ಯಕ್ತಿಯೊಬ್ಬರು ಮೃತಪಟ್ಟು 10 ದಿನಗಳ ನಂತರ ವಿಚಾರ ತಿಳಿದ ಘಟನೆ, ನಂದಳಿಕೆಯಲ್ಲಿ ನಡೆದಿದೆ. ಮರದ ಕೆಲಸ ಮಾಡಿಕೊಂಡಿದ್ದ ನಂದಳಿಕೆಯ ನಿವಾಸಿಯಾದ ವಾಸುದೇವ ಆಚಾರ್ಯ ಅವರು ಮನೆಯ ಬಾಗಿಲು ಹಾಕಿಕೊಂಡಿದ್ದು, ಅವರು ಮೃತಪಟ್ಟ ಘಟನೆ ಯಾರಿಗೂ ತಿಳಿದಿಲ್ಲ. ಕೆಲವು ದಿನಗಳ ಬಳಿಕ ಅವರ ಮನೆಯಿಂದ ವಾಸನೆ ಬರುವುದನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು ಬಾಗಿಲು ಒಡೆದು ಒಳಗೆ ಹೋಗಿ ನೋಡಿದಾಗ ಮೃತದೇಹ ಕೊಳೆತು ಹೋಗಿರುವುದು ಬೆಳಕಿಗೆ ಬಂದಿದೆ. ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
• ಬಂಟ್ವಾಳ: ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ; ಪ್ರಕರಣ ದಾಖಲು
ಬಂಟ್ವಾಳ: ಕರ್ತವ್ಯಕ್ಕೆ ಅಡ್ಡಿಪಡಿಸಿ, ಜಾತಿ ನಿಂದನೆ ಮಾಡಿರುವ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ. ನೇರಳೆಕಟ್ಟೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಣಿ ಶಾಖ ಸಿಬ್ಬಂದಿ ಹಾಗೂ ನೆಟ್ಲ ಮುಡ್ನೂರು ನಿವಾಸಿ ಸೇಸಮ್ಮ ಅವರು ಕರ್ತವ್ಯನಿರತರಾಗಿದ್ದ ಸಂದರ್ಭದಲ್ಲಿ ಪ್ರಭಾರ ವ್ಯವಸ್ಥಾಪಕರಾದ ಯತೀಶ್ ಡಿ. ಗೌಡ ಅವರು ಸೇಸಮ್ಮ ಅವರಿಗೆ ಕರ್ತವ್ಯ ನಿರ್ವಹಿಸದಂತೆ ಸೂಚಿಸಿದ್ದಾರೆ. ಇದನ್ನು ಕುರಿತು ಸೇಸಮ್ಮ ಅವರು ಪ್ರಶ್ನಿಸಿದಾಗ ಯತೀಶ್ ಅವರನ್ನು ಕೈಯಿಂದ ತಳ್ಳಿ, ಜಾತಿ ನಿಂದನೆ ಮಾಡಿದ್ದಾರೆ.
ಇದರಿಂದ ಆಘಾತಗೊಂಡ ಸೇಸಮ್ಮ ಅವರನ್ನು ಉಳಿದ ಸಿಬ್ಬಂದಿಗಳು ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದರು ಎಂದು ಸೇಸಮ್ಮ ಅವರು ಪೊಲೀಸರಿಗೆ ದೂರು ನೀಡುತ್ತಾರೆ. ಸೇಸಮ್ಮ ಅವರು ನೀಡಿರುವ ದೂರಿನ ಆಧಾರದ ಮೇಲೆ ಸಹಕಾರ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಚೌಟ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಶೋಧ, ಶಾಖೆಯ ಪ್ರಭಾರ ವ್ಯವಸ್ಥಾಪಕ ಯತೀಶ್ ಡಿ ಗೌಡ ಅವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
•ಉಡುಪಿ: ಮದ್ಯಪಾನ ಚಟಕ್ಕೆ ವ್ಯಕ್ತಿ ಆತ್ಮಹತ್ಯೆ
ಉಡುಪಿ: ವಿಪರೀತ ಕುಡಿತದ ಚಟ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ, ಸೋಮವಾರದಂದು ಶಿರ್ವಾದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮಟ್ಟಾರು ನಿವಾಸಿ ಪ್ರಕಾಶ್ ಆಚಾರ್ಯ ಎಂದು ಗುರುತಿಸಲಾಗಿದೆ. ಜೀವನದಲ್ಲಿ ಜುಗುಪ್ಸೆಗೊಂಡ ಪ್ರಕಾಶ್ ಆಚಾರ್ಯ ಅವರು ಮನೆಯ ಸಮೀಪದಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







