ಕರಾವಳಿ ಟಾಪ್ ನ್ಯೂಸ್
• ಬೆಳ್ತಂಗಡಿ: ವ್ಯಕ್ತಿ ನಾಪತ್ತೆ; ದೂರು ದಾಖಲು
• ಮಂಗಳೂರು: ಅಪಾರ್ಟ್ ಮೆಂಟ್ ನಲ್ಲಿ ಬೆಂಕಿ ಅವಘಡ
• ಕಡಬ: ತ್ಯಾಜ್ಯ ವಿಲೇವಾರಿ ಘಟಕದ ಅವ್ಯವಸ್ಥೆ; ಸ್ಥಳೀಯರ ಪ್ರತಿಭಟನೆ
ನಮ್ಮೂರ್ ಎಕ್ಸ್ ಪ್ರೆಸ್ ನ್ಯೂಸ್
• ಬೆಳ್ತಂಗಡಿ: ವ್ಯಕ್ತಿ ನಾಪತ್ತೆ; ದೂರು ದಾಖಲು
ಬೆಳ್ತಂಗಡಿ: ಮದುವೆಗೆ ತೆರಳಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ, ಧರ್ಮಸ್ಥಳದಲ್ಲಿ ನಡೆದಿದೆ. ಮಗಳ ಮದುವೆಗೆಂದು ಕುಟುಂಬ ಸಮೇತರಾಗಿ ಧರ್ಮಸ್ಥಳಕ್ಕೆ ತೆರಳಿದ್ದ ಶಿಕಾರಿಪುರ ಮೂಲದ ಮಂಜುನಾಥ ಎನ್ನುವ ವ್ಯಕ್ತಿಯು ಮದುವೆ ಮುಗಿದ ಬಳಿಕ ಕುಟುಂಬಸ್ಥರೊಂದಿಗೆ ಮನೆಗೆ ಮರಳಿಬಾರದೆ ಕಾಣೆಯಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ದಿನೇಶ್ ಪಿ ಎನ್ನುವವರು ಪೊಲೀಸರಿಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
• ಮಂಗಳೂರು: ಅಪಾರ್ಟ್ ಮೆಂಟ್ ನಲ್ಲಿ ಬೆಂಕಿ ಅವಘಡ
ಮಂಗಳೂರು: ಅಪಾರ್ಟ್ ಮೆಂಟ್ ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ, ನಂತೂರು ಜಂಕ್ಷನ್ ಬಳಿ ನಡೆದಿದೆ. ಪರಿಣಾಮವಾಗಿ ಕೊಠಡಿಯಲ್ಲಿ ಸಂಗ್ರಹಿಸಿಟ್ಟಿದ್ದ ವಿವಿಧ ಸ್ವತ್ತುಗಳು ಹಾನಿಗೀಡಾಗಿದೆ ಎನ್ನಲಾಗಿದೆ. ಮಾಹಿತಿ ಲಭಿಸುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿ ಎದುರಾಗಬಹುದಾಗಿದ್ದ ಭಾರಿ ಅನಾಹುತವನ್ನು ತಪ್ಪಿಸಿದ್ದಾರೆ. ಈ ಘಟನೆಯಿಂದಾಗಿ ಕೆಲವು ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು ಎನ್ನುವ ಮಾಹಿತಿ ಲಭಿಸಿದೆ.
• ಕಡಬ: ತ್ಯಾಜ್ಯ ವಿಲೇವಾರಿ ಘಟಕದ ಅವ್ಯವಸ್ಥೆ; ಸ್ಥಳೀಯರ ಪ್ರತಿಭಟನೆ
•ಕಡಬ: ಪಟ್ಟಣ ಪಂಚಾಯತ್ ತ್ಯಾಜ್ಯ ವಿಲೇವರಿ ಘಟಕದ ಅವ್ಯವಸ್ಥೆಯ ವಿರುದ್ಧ ಸ್ಥಳೀಯರು ಆಕ್ರೋಶಗೊಂಡು ಗುರುವಾರದಂದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಮಾತನಾಡಿದ ಕಡಬ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ನಾರಾಯಣ ಪೂಜಾರಿ ಪಾಲಪ್ಪೆ ಅವರು “ಪಟ್ಟಣ ಪಂಚಾಯತ್ ನ ಅಸಮರ್ಪಕ ಕಾರ್ಯನಿರ್ವಹಣೆಯ ಕಾರಣದಿಂದಾಗಿ ಘನ ತ್ಯಾಜ್ಯ ಘಟಕದಲ್ಲಿ ದೊಡ್ಡ ಪ್ರಮಾಣದಲ್ಲಿ ಸಂಗ್ರಹಗೊಂಡಿರುವ ತ್ಯಾಜ್ಯದ ರಾಶಿ ಗಬ್ಬೆದ್ದು ನಾರುತ್ತಿದೆ. ತ್ಯಾಜ್ಯ ವಿಲೇವರಿಗಾಗಿ ಖರೀದಿಸಿದ ಲಕ್ಷಾಂತರ ರೂಪಾಯಿ ಮೌಲ್ಯದ ಯಂತ್ರೋಪಕರಣಗಳು ಬಳಕೆಯಾಗದೆ ತುಕ್ಕು ಹಿಡಿದಿದೆ. ಇದುವರೆಗೂ ನಡೆದಿರುವ ಕಾಮಗಾರಿ ಕೂಡ ಕಳಪೆ ಗುಣಮಟ್ಟದ್ದಾಗಿದೆ. ಇದರಿಂದಾಗಿ ಪರಿಸರದಲ್ಲಿ ಸಾಂಕ್ರಮಿಕ ರೋಗ ಹರಡುವ ಭೀತಿ ಉಂಟಾಗಿದೆ. ಘಟಕದ ವ್ಯವಸ್ಥೆಯನ್ನು ಕೂಡಲೇ ಸರಿಪಡಿಸಲು ಸೂಕ್ತ ಕ್ರಮವನ್ನು ಕೈಗೊಳ್ಳಬೇಕಿದೆ. ತಪ್ಪಿದರೆ ಉಗ್ರ ರೀತಿಯಲ್ಲಿ ಪ್ರತಿಭಟನೆಯನ್ನು ಕೈಗೊಳ್ಳುಲಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.







