ಕರಾವಳಿ ಟಾಪ್ ನ್ಯೂಸ್
• ಕಡಬ: ಆಸ್ತಿ ವಿಚಾರವಾಗಿ ಮಹಿಳೆ ಮೇಲೆ ಆ್ಯಸಿಡ್ ದಾಳಿಗೆ ಯತ್ನ
• ಉಡುಪಿ: ಅಕ್ರಮ ಜಾನುವಾರು ಸಾಗಾಟ; ಇಬ್ಬರ ಬಂಧನ
• ಮಂಗಳೂರು: ಇಬ್ಬರು ಮಕ್ಕಳ ಸಾವಿಗೆ ಮನನೊಂದು ತಾಯಿ ಆತ್ಮಹತ್ಯೆ
ನಮ್ಮೂರ್ ಎಕ್ಸ್ ಪ್ರೆಸ್ ನ್ಯೂಸ್
• ಕಡಬ: ಆಸ್ತಿ ವಿಚಾರವಾಗಿ ಮಹಿಳೆ ಮೇಲೆ ಆ್ಯಸಿಡ್ ದಾಳಿಗೆ ಯತ್ನ
ಕಡಬ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕಲಹ ಏರ್ಪಟ್ಟು ವ್ಯಕ್ತಿಯೊಬ್ಬರು ಮಹಿಳೆಯ ಮೇಲೆ ಆ್ಯಸಿಡ್ ದಾಳಿ ನಡೆಸಿದ ಘಟನೆ, ಕಳೆದೆರಡು ದಿನಗಳ ಹಿಂದೆ ಐತ್ತೂರು ಗ್ರಾಮದಲ್ಲಿ ನಡೆದಿದೆ. ಆಸ್ತಿ ವಿಚಾರವಾಗಿ ಕುಟುಂಬದಲ್ಲಿ ಕಲಹ ಏರ್ಪಟ್ಟಿದ್ದು, ಅದು ವಿಕೋಪಕ್ಕೆ ತಿರುಗಿ, ವ್ಯಕ್ತಿಯು ಮನೆಯ ಸುತ್ತಲೂ ಪೆಟ್ರೋಲ್ ಸುರಿದು, ಬಳಿಕ ಮಹಿಳೆಯ ಮೇಲೆ ಪೆಟ್ರೋಲ್ ಸುರಿದು ಜೀವಂತ ದಹನ ಮಾಡಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಜೀವಭಯದಿಂದ ಮಹಿಳೆ ಮತ್ತು ಮಕ್ಕಳು ಜೋರಾಗಿ ಕಿರುಚಿಕೊಂಡಿದ್ದಾರೆ.
ಪರಿಣಾಮವಾಗಿ ಅಕ್ಕಪಕ್ಕದ ಮನೆಗಳಲ್ಲಿದ್ದ ಜನರು ಧಾವಿಸಿ ಬಂದಿರುವುದರಿಂದ ಎದುರಾಗಬಹುದಾಗಿದ್ದ ಭಾರಿ ಪ್ರಮಾಣದ ಅವಘಡ ಕೂದಲೆಳೆಯ ಅಂತರದಿಂದ ತಪ್ಪಿ ಹೋಗಿದೆ ಎನ್ನಲಾಗಿದೆ. ಎದುರಾದ ಸನ್ನಿವೇಶದಿಂದಾಗಿ ಆಘಾತಕ್ಕೆ ಒಳಗಾಗಿದ್ದ ಮಹಿಳೆಯನ್ನು ತಕ್ಷಣ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಸಧ್ಯಕ್ಕೆ ಮಹಿಳೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನುವ ಮಾಹಿತಿ ಲಭಿಸಿದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ಅಲ್ಲದೆ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡುವ ಸಾಧ್ಯತೆ ಇದ್ದು, ತನಿಖೆ ಮುಂದುವರಿದಿದೆ ಎನ್ನುವ ಸಂಗತಿ ತಿಳಿದುಬಂದಿದೆ.
• ಉಡುಪಿ: ಅಕ್ರಮ ಜಾನುವಾರು ಸಾಗಾಟ; ಇಬ್ಬರ ಬಂಧನ
ಉಡುಪಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ, ಮಂಗಳವಾರದಂದು ನಡೆದಿದೆ. ಕಸಾಯಿಖಾನೆಯಲ್ಲಿ ಮಾಂಸ ಮಾಡಲು ಪೆರ್ಡೂರು ಕಡೆಯಿಂದ ಹಿರಿಯಡ್ಕದ ಕಡೆಗೆ ಬೊಲೆರೋ ಟೆಂಪೋ ಗೂಡ್ಸ್ ವಾಹನದಲ್ಲಿ ನಾಲ್ಕು ಜಾನುವಾರುಗಳನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ಪಕ್ಕಾಲು ಹೆಬ್ಬಾರು ಸೇತುವೆಯ ಬಳಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಚರಂಡಿಗೆ ಉರುಳಿ ಬಿದ್ದಿದೆ. ಈ ಸಂದರ್ಭದಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ನಾಲ್ಕು ಜಾನುವಾರುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ಘಟನೆಗೆ ಸಂಬಂಧಿಸಿದಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
• ಮಂಗಳೂರು: ಇಬ್ಬರು ಮಕ್ಕಳ ಸಾವಿಗೆ ಮನನೊಂದು ತಾಯಿ ಆತ್ಮಹತ್ಯೆ
ಮಂಗಳೂರು: ಮಕ್ಕಳಿಬ್ಬರ ಸಾವಿಗೆ ಮನನೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಬಂಗ್ರ ಕೂಳೂರಿನಲ್ಲಿ ನಡೆದಿದೆ. ಸಂಧ್ಯಾ ಎನ್ನುವವರ ಪುತ್ರ ಒಂದುವರೆ ವರ್ಷದ ಮಗು ಕಿಡ್ನಿ ವೈಫಲ್ಯದಿಂದಾಗಿ ಮೃತಪಟ್ಟಿತ್ತು. ಕಳೆದ ಒಂದು ವರ್ಷದ ಹಿಂದೆ ಮಗಳು ಕೂಡ ಅಪಘಾತವೊಂದರಲ್ಲಿ ಸಾವನ್ನಪ್ಪಿದ್ದರು. ಇದರಿಂದಾಗಿ ಸಂಧ್ಯಾ ಅವರು ತೀವ್ರವಾಗಿ ಮಾನಸಿಕ ಆಘಾತಕ್ಕೆ ಒಳಗಾಗಿದ್ದರು. ಈ ಕಾರಣದಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಅನುಮಾನ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿದಂತೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







