ಕರಾವಳಿ ಟಾಪ್ ನ್ಯೂಸ್
ರೈಲ್ವೆ ನಿಲ್ದಾಣದಲ್ಲಿ ಗಾಂಜಾ ಮಾರುತ್ತಿದ್ದ ಬಿಸಿಎ ವಿದ್ಯಾರ್ಥಿನಿ ಅರೆಸ್ಟ್!
– ಬೆಳ್ತಂಗಡಿ: ಕುಸಿದು ಬಿದ್ದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
– ಮಂಗಳೂರು: ಪಾರ್ಕ್ ಮಾಡಿದ್ದ ಸ್ಕೂಟರ್ ಕಳ್ಳತನ!
ನಮ್ಮೂರ್ ಎಕ್ಸ್ ಪ್ರೆಸ್ ನ್ಯೂಸ್
ಮೂಲ್ಕಿ: ಹೈಡೋವಿಡ್ ಗಾಂಜಾ ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳವಾರದಂದು ರೈಲ್ವೆ ನಿಲ್ದಾಣದ ರಸ್ತೆಯಲ್ಲಿ ನಡೆದಿದೆ. ಆರೋಪಿಯನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸುಹಾನ ಎಂದು ಗುರುತಿಸಲಾಗಿದೆ. ಅಚ್ಚರಿ ಎಂದರೆ ಸುಹಾನ ಕುಂದಾಪುರದ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದಳು. ದುಡ್ಡಿನ ಆಸೆಗೆ ಇಂತಹ ದಂಧೆಗೆ ಇಳಿದಿದ್ದಾಳೆ. ಮಂಗಳವಾರದಂದು ಸುಹಾನ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ ಹೈಡೋವಿಡ್ ಗಾಂಜಾ ಸಾಗಾಟ ಮಾಡುತ್ತಿರುವ ಸಂದರ್ಭದಲ್ಲಿ ಪಣಂಬೂರು ಎಸಿಪಿ ತಂಡ ಹಾಗೂ ಮೂಲ್ಕಿ ಠಾಣೆಯ ಪೊಲೀಸರು ಕಾರ್ಯಾಚರಣೆಯನ್ನು ನಡೆಸಿ ಸುಹಾನಳನ್ನು ಬಂಧಿಸಿದ್ದಾರೆ.
ಸುಹಾನ ಚೆನ್ನೈ ನಿಂದ ಮಾದಕ ವಸ್ತುವನ್ನು ತರಿಸಿಕೊಂಡು, ಮಾರಾಟ ಮಾಡಿ ಹಣ ಗಳಿಸುವ ಉದ್ದೇಶವನ್ನು ಹೊಂದಿದ್ದಳು ಎನ್ನಲಾಗಿದೆ. ಈ ಸಂದರ್ಭದಲ್ಲಿ ಆಕೆಯ ಬಳಿಯಿದ್ದ ಸುಮಾರು 35 ಲಕ್ಷ ರೂಪಾಯಿಗಳಷ್ಟು ಬೆಲೆಬಾಳುವ ಹೈಡೋವಿಡ್ ಗಾಂಜಾ, ಮೊಬೈಲ್ ಫೋನ್ ಮತ್ತು ಇತರ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎನ್ನುವ ಮಾಹಿತಿ ಲಭಿಸಿದೆ. ಘಟನೆಗೆ ಸಂಬಂಧಿಸಿದಂತೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ, ಕಾವುರು ಪೊಲೀಸ್ ಠಾಣೆಯಲ್ಲಿ ಮತ್ತು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ಕಸ್ಟಮ್ ನಲ್ಲೂ ಎನ್ ಡಿಪಿಎಸ್ ಆ್ಯಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
• ಬೆಳ್ತಂಗಡಿ: ಕುಸಿದು ಬಿದ್ದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
ಬೆಳ್ತಂಗಡಿ: ಕುಸಿದು ಬಿದ್ದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ, ಮಂಗಳವಾರ ಮಧ್ಯಾಹ್ನ ಸಂತೆಕಟ್ಟೆಯಲ್ಲಿ ನಡೆದಿದೆ. ಸಂತೆಕಟ್ಟೆಯ ಚಿತ್ರಮಂದಿರದ ಮುಂಭಾಗದ ರಸ್ತೆಯಲ್ಲಿ ಮಲಗಿರುವ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದೆ ಎನ್ನಲಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಬೆಳ್ತಂಗಡಿ ಪೊಲೀಸರು ಪರಿಶೀಲನೆಯನ್ನು ನಡೆಸಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ ಎನ್ನುವ ಸಂಗತಿ ತಿಳಿದುಬಂದಿದೆ. ಮೃತ ವ್ಯಕ್ತಿಯ ಕುರಿತು ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭಿಸಬೇಕಿದೆ.
ಮಂಗಳೂರು: ಪಾರ್ಕ್ ಮಾಡಿದ್ದ ಸ್ಕೂಟರ್ ಕಳ್ಳತನ!
ಮಂಗಳೂರು: ಕಂಕನಾಡಿ ಸುವರ್ಣ ಲೈನ್ 6ನೇ ಅಡ್ಡ ರಸ್ತೆಯ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಲಾಗಿದ್ದ ಸ್ಕೂಟರ್ ಕಳವಾಗಿರುವ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತೋಷ್ ಕುಮಾರ್ ಸ್ಕೂಟರ್ ಪಾರ್ಕ್ ಮಾಡಿದ್ದರು. ಮರಳಿ ಬಂದು ನೋಡಿದಾಗ ಸ್ಕೂಟರ್ ನಿಲ್ಲಿಸಿದ್ದ ಸ್ಥಳದಲ್ಲಿ ಇರಲಿಲ್ಲ. ಕಳವಾದ ಸ್ಕೂಟರನ್ನು ಸುತ್ತಮುತ್ತ ಎಲ್ಲ ಕಡೆ ಹುಡುಕಾಡಿದರೂ ಸ್ಕೂಟರ್ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.







