ಉಡುಪಿ: ಕಂದಕಕ್ಕೆ ಉರುಳಿಬಿದ್ದ ಕಾರು!
ಉಡುಪಿ: ಚಿಕಿತ್ಸೆ ನೀಡುತ್ತಿರುವಾಗಲೇ ಮೃತಪಟ್ಟ ವೈದ್ಯೆ!
ಸುರತ್ಕಲ್: ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ಮದುವೆ
NAMMUR EXPRESS NEWS
ಉಡುಪಿ: ಪೆರಂಪಳ್ಳಿಯ ರೈಲ್ವೆ ಸೇತುವೆ ಬಳಿ ತಡೆಗೋಡೆ ಇಲ್ಲದ ಕಾರಣ ಕಾರೊಂದು ಕಂದಕಕ್ಕೆ ಉರುಳಿ ಬಿದ್ದಿದ್ದು ಇದಕ್ಕೆ ಸ್ಪಷ್ಟ ನಿದರ್ಶನವಾಗಿದೆ. ಪೆರಂಪಳ್ಳಿ ರೈಲ್ವೆ ಸೇತುವೆಯ ಬಳಿ ತಡೆಗೋಡೆ ಇಲ್ಲದೇ ಸಾಕಷ್ಟು ಸಮಸ್ಯೆ ಆಗುತ್ತಿದ್ದು ಅಪಘಾತ ವಲಯವಾಗಿ ಮಾರ್ಪಟ್ಟಿದೆ. ರಾತ್ರಿಯ ಹೊತ್ತು ವಾಹನ ಸವಾರರು ಇಲ್ಲಿ ವಾಹನ ಚಲಾಯಿಸಲು ಬಹಳಷ್ಟು ತೊಂದರೆ ಅನುಭವಿಸುತ್ತಿದ್ದಾರೆ.
ಚಿಕಿತ್ಸೆ ನೀಡುತ್ತಿರುವಾಗಲೇ ಮರಣ ಹೊಂದಿದ್ದ ವೈದ್ಯೆ
ಉಡುಪಿ: ವೈದ್ಯೆಯೊಬ್ಬರು ಚಿಕಿತ್ಸೆ ನೀಡುತ್ತಿರುವ ವೇಳೆಯೇ ಹೃದಯದ ನೋವಿನಿಂದ ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಈ ದುರಂತ ಘಟನೆ ನಡೆದಿದೆ. ಡಾ. ಶಶಿಕಲಾ ಚಿಕಿತ್ಸೆ ನೀಡುತ್ತಿದ್ದ ವೇಳೆ ಮೃತಪಟ್ಟವರು. ಉಡುಪಿ ಅಜ್ಜರಕಾಡಿನಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಮೆಡಿಸಿನ್ ವಿಭಾಗದ ವೈದ್ಯರಾಗಿರುವ ಡಾ. ಶಶಿಕಲಾ ಅವರು ರೋಗಿಗೆ ಚಿಕಿತ್ಸೆ ನೀಡುವಾಗಲೇ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಪ್ರಾಣ ಬಿಟ್ಟಿದ್ದಾರೆ. ಅವರಿಗೆ 60 ವರ್ಷ ಆಗಿತ್ತು.ಶಶಿಕಲಾ ಅವರು 2022ರ ಫೆಬ್ರವರಿಯಲ್ಲಿ ವಯೋ ನಿವೃತ್ತಿ ಹೊಂದಿದ್ದರು.ಆದರೆ, ವೈದ್ಯರಿಲ್ಲದ ಹಿನ್ನೆಲೆಯಲ್ಲಿ ಅವರನ್ನು ಹೊರಗುತ್ತಿಗೆಯಲ್ಲಿ ಮುಂದುವರಿಸಲಾಗಿತ್ತು.
ಅವರು ಹೊರರೋಗಿಗಳ ವಿಭಾಗದಲ್ಲಿ ಪ್ರಮುಖವಾಗಿ ರೋಗಿಗಳನ್ನು ನೋಡುತ್ತಿದ್ದರು. ಗುರುವಾರ ಅವರು ಜಿಲ್ಲಾಸ್ಪತ್ರೆಯ ಹೊರ ರೋಗಿ ವಿಭಾಗದಲ್ಲಿ ಸೇವೆ ನೀಡುತ್ತಿದ್ದ ವೇಳೆ ಒಮ್ಮೆಗೇ ಕುಸಿದು ಬಿದ್ದರು. ರೋಗಿಗೆ ಚಿಕಿತ್ಸೆ ನೀಡುತ್ತಿರುವ ಸಂದರ್ಭದಲ್ಲೇ ಕುಸಿದು ಬಿದ್ದಿದ್ದ ಶಶಿಕಲಾ ಅವರನ್ನು ಕೂಡಲೇ ಜಿಲ್ಲಾಸ್ಪತ್ರೆ ಸಿಬ್ಬಂದಿಗಳು ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆದೊಯ್ದು ಚಿಕಿತ್ಸೆ ನೀಡಿದರು. ಆದರೆ, ಶಶಿಕಲಾ ಅವರು ಯಾವುದೇ ಚಿಕಿತ್ಸೆಗೆ ಸ್ಪಂದಿಸದೆ ಪ್ರಾಣ ಕಳೆದುಕೊಂಡರು.
ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ಮದುವೆ!
ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ 7ನೇ ಬ್ಲಾಕ್ ಕಾಟಿಪಳ್ಳದ ಯುವಕ ಪ್ರಶಾಂತ್ ಭಂಡಾರಿ (31) ಹಾಗೂ 3ನೇ ಬ್ಲಾಕ್ ಆಶ್ರಯ ಕಾಲೋನಿ ನಿವಾಸಿ ಆಯೇಷಾ (19) ಡಿ.1ರಂದು ನಾಪತ್ತೆಯಾಗಿದ್ದರು. ಇದೀಗ ಈ ಜೋಡಿ ಮದುವೆಯಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಪ್ರಕರಣಕ್ಕೆ ಪುಷ್ಠಿ ಎಂಬಂತೆ ಹಿಂದೂ ಮುಖಂಡ ಶರಣ್ ಪಂಪ್ವೆಲ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು ಇದರಲ್ಲಿ ಯುವಕ ಪ್ರಶಾಂತ್ ಮತ್ತು ಆಯೇಷಾ ಮದುವೆಯಾಗಿದ್ದಾಗಿ ತಿಳಿಸಿದ್ದಾರೆ.
ಇಷ್ಟು ಮಾತ್ರವಲ್ಲದೆ ಅವರ ಮಿತ್ರರು ಸಹ ಸಾಮಾಜಿಕ ಜಾಲತಾಣಗಳಲ್ಲಿ ಈ ಫೋಟೋಗಳನ್ನು ವೈರಲ್ ಮಾಡಿದ್ದಾರೆ. ಅಯೇಷಾ ತನ್ನ ಹೆಸರನ್ನು ಅಕ್ಷತಾ ಎಂದು ಬದಲಿಸಿಕೊಂಡಿದ್ದಾರೆ. ನಾಪತ್ತೆಯಾದ ದಿನ ಆಯೇಷಾ ತಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಯುವತಿ ಕುಟುಂಬ ಮೂಲತಃ ಕಾರವಾರದ ಮುಂಡಗೋಡದವರಾಗಿದ್ದು, ಈಕೆಯ ತಂದೆ ಸ್ಥಳೀಯವಾಗಿ ಉದ್ಯೋಗದಲ್ಲಿದ್ದಾರೆ. ಅವರ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದರೆ