ಅತ್ಯಾಚಾರ ಆರೋಪಿ ಎಂದು ಸುಳ್ಳು ಸಂದೇಶದ ಬಗ್ಗೆ ದೂರು
– ಕಾರ್ಕಳ ಹಿಂ.ಜಾ.ವೇ. ಕಾರ್ಯಕರ್ತನಿಂದ ಪೊಲೀಸ್ ಠಾಣೆಗೆ ದೂರು
– ಫೋಟೋ ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಮುಖಂಡರು
NAMMUR EXPRESS NEWS
ಕಾರ್ಕಳ : ಕಾರ್ಕಳ ಅತ್ಯಾಚಾರ ಪ್ರಕರಣದ ಆರೊಪಿಗೆ ಡ್ರಗ್ ನೀಡಿದ ಮೂರನೆಯ ಆರೋಪಿ ಅಭಯ್ ಎಂದು ಹಿಂದು ಜಾಗರಣಾ ವೇದಿಕೆಯ ಕಾರ್ಯಕರ್ತ ಅರವಿಂದ್ ಅವರ ಪೋಟೊ ಬಳಸಿ ವಾಟ್ಸಪ್ನಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ಆರೋಪಿಸಿ ಕಾರ್ಕಳ ಹಿಂ.ಜಾ.ವೇ. ಕಾರ್ಯಕರ್ತರು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.
ಆರೋಪಿ ಅಭಯ್ನ ಬಂಧನವಾದ ಬಳಿಕ 95913846665 ಸಂಖ್ಯೆಯಿಂದ ಹಾಗೂ ಕಣ್ಣೀರಿನ ನ್ಯಾಯಕ್ಕಾಗಿ ಎಂಬ ವಾಟ್ಸಾಪ್ ಗ್ರೂಪ್ನಲ್ಲಿ 9900442728 ವಾಟ್ಸಾಪ್ ಸಂಖ್ಯೆಯವರು ಹಿಂದೂ ಸಂಘಟಣೆಯವರು ಮಾಡಿದ ಪ್ರತಿಭಟನೆಯಲ್ಲಿ ಭಾಗವಹಿಸಿದ ಅರವಿಂದ ಎಂಬವರನ್ನು ಅತ್ಯಾಚಾರ ಆರೋಪಿ ಅಭಯ್ ಎಂದು ವಾಟ್ಸಪ್ ಮೂಲಕ ಸಂದೇಶ ಹರಡಿಸಿದ್ದಾರೆ. ಅಲ್ಲದೆ ಕಾರ್ತಿಕ್ ಎಂಬವರು ಈ ಫೋಟೋವನ್ನು ಸ್ಟೇಟಸ್ನಲ್ಲಿ ಹಾಕಿದ್ದಾರೆ ಎಂದು ಅರವಿಂದ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.
ಕಾಗ್ರೆಸ್ ಹೇಳಿದ್ದೇನು?
ಕಾರ್ಕಳದಲ್ಲಿ ಇತ್ತೀಚೆಗೆ ನಡೆದಿದ್ದ ಅತ್ಯಾಚಾರ ಪ್ರಕರಣದ ಮೂರನೇ ಆರೋಪಿ ಬಿಜೆಪಿ ಕಾರ್ಯಕರ್ತ ಎಂದು ಹೇಳಿರುವ ಕಾಂಗ್ರೆಸ್ ಈ ಸಂಬಂಧ ಆತನ ಫೋಟೋಗಳನ್ನು ಬಿಡುಗಡೆ ಮಾಡಿದೆ. ಕಾರ್ಕಳ ಮತ್ತು ಉಡುಪಿ ಯುವ ಕಾಂಗ್ರೆಸ್ ನಾಯಕರು ಫೋಟೋ ಬಿಡುಗಡೆಗೊಳಿಸಿದ್ದು, ಬಿಜೆಪಿಯ ದ್ವಂದ್ವ ನಿಲುವಿನ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಬಂಧನಕ್ಕೊಳಗಾಗಿದ್ದ ಮೂರನೇ ಆರೋಪಿ ಅಭಯ್, ಬಿಜೆಪಿ ಕಾರ್ಯಕರ್ತ ಎಂದು ಗೊತ್ತಾದ ಬಳಿಕ ಬಿಜೆಪಿ ಮೌನಕ್ಕೆ ಶರಣಾಗಿದೆ ಎಂದು ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ. ಹಿಂದೂ ಯುವತಿಯ ಅತ್ಯಾಚಾರ ಪ್ರಕರಣದ ಮೂರನೇ ಆರೋಪಿ ಮಾಜಿ ಸಚಿವ ಸುನಿಲ್ ಆಪ್ತನಾಗಿದ್ದು ಫೇಸ್ ಬುಕ್ ಪ್ರೊಫೈಲ್ ನಲ್ಲೂ ಸುನಿಲ್ ಕುಮಾರ್ ಫೋಟೋ ಹಾಕಿಕೊಂಡಿದ್ದಾನೆ. ಈತ ಕಾರ್ಕಳ ಬಿಜೆಪಿಯಲ್ಲಿ ಸಕ್ರಿಯ ಸದಸ್ಯನಾಗಿದ್ದಾನೆ. ಇದು ಗೊತ್ತಾಗುತ್ತಿದ್ದಂತೆ ಬಿಜೆಪಿ ನಾಯಕರು ಹೋರಾಟವನ್ನು ಕೈ ಬಿಟ್ಟಿದ್ದಾರೆ. ಅತ್ಯಾಚಾರದಂತಹ ಪ್ರಕರಣದಲ್ಲಿ ಯಾವುದೇ ಧರ್ಮ, ಪಕ್ಷದವರಿದ್ದರೂ ಅದನ್ನುಖಂಡಿಸುವ ಬದಲು ಧರ್ಮಾಧಾರಿತವಾಗಿ ಅದನ್ನು ಬಿಜೆಪಿ ನೋಡುತ್ತಿದೆ ಎಂದು ಕೈ ಮುಖಂಡರು ಆಕ್ರೋಶ ಹೊರಹಾಕಿದ್ದರು.